AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ಫೈನಲ್​ನಲ್ಲಿ ಭಾರತವನ್ನು ಸೋಲಿಸಿದ ಪಾಕ್ ತಂಡಕ್ಕೆ ಕೋಟಿ ಕೋಟಿ ಬಹುಮಾನ

India vs Pakistan U19 Asia Cup: ದುಬೈನಲ್ಲಿ ನಡೆದ ಅಂಡರ್-19 ಏಷ್ಯಾಕಪ್ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ಪಾಕಿಸ್ತಾನ ತಂಡ ಪ್ರಶಸ್ತಿ ಗೆದ್ದಿದೆ. ಈ ಐತಿಹಾಸಿಕ ಗೆಲುವಿನ ನಂತರ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ವಿಜೇತ ತಂಡದ ಪ್ರತಿ ಆಟಗಾರನಿಗೆ 1 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯೂ ಪ್ರತ್ಯೇಕ ಬಹುಮಾನ ನೀಡಿದೆ. ಇಸ್ಲಾಮಾಬಾದ್‌ನಲ್ಲಿ ತಂಡಕ್ಕೆ ಅದ್ಧೂರಿ ಸ್ವಾಗತ ದೊರೆಯಿತು.

ಪೃಥ್ವಿಶಂಕರ
|

Updated on: Dec 22, 2025 | 9:35 PM

Share
ದುಬೈನಲ್ಲಿ ನಡೆದ ಅಂಡರ್ 19 ಏಷ್ಯಾಕಪ್ ಫೈನಲ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ ತಂಡವನ್ನು ಮಣಿಸಿದ್ದ ಪಾಕಿಸ್ತಾನ ತಂಡ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಇದೀಗ ಪಾಕಿಸ್ತಾನ ತಂಡಕ್ಕೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ವಿಜೇತ ತಂಡದ ಪ್ರತಿಯೊಬ್ಬ ಆಟಗಾರನಿಗೆ ತಲಾ 1 ಕೋಟಿ ರೂಪಾಯಿಗಳ ವಿಶೇಷ ನಗದು ಬಹುಮಾನವನ್ನು ಘೋಷಿಸಿದ್ದಾರೆ.

1 / 5
ಅಂಡರ್​ ಏಷ್ಯಾಕಪ್ ಫೈನಲ್‌ನಲ್ಲಿ ಭಾರತವನ್ನು 191 ರನ್‌ಗಳಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದ ಯುವ ಪಾಕಿಸ್ತಾನ ತಂಡ, ಸಹಾಯಕ ಸಿಬ್ಬಂದಿಗಳೊಂದಿಗೆ ಇಸ್ಲಾಮಾಬಾದ್‌ಗೆ ಆಗಮನಿಸಿತು. ಇಡೀ ತಂಡಕ್ಕೆ ಅದ್ಧೂರಿ ಸ್ವಾಗತವೂ ದೊರೆಯಿತು. ಇದೇ ವೇಳೆ ಸಮಾರಂಭದಲ್ಲಿ ಷರೀಫ್ ಈ ಘೋಷಣೆ ಮಾಡಿದ್ದಾರೆ.

2 / 5
ಸ್ವಾಗತ ಸಮಾರಂಭದ ನಂತರ ತಂಡದ ಮಾರ್ಗದರ್ಶಕ ಮತ್ತು ವ್ಯವಸ್ಥಾಪಕ ಸರ್ಫ್ರಾಜ್ ಅಹ್ಮದ್ ಮಾಧ್ಯಮಗಳಿಗೆ ಮಾಹಿತಿ ನೀಡಿ, ಪ್ರಧಾನಿ ಪ್ರತಿ ಆಟಗಾರನಿಗೆ 10 ಮಿಲಿಯನ್ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದ್ದಾರೆ ಎಂದಿದ್ದಾರೆ. ಇದಕ್ಕೂ ಮೊದಲು, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಏಷ್ಯಾ ಕಪ್ ವಿಜೇತ ಜೂನಿಯರ್ ತಂಡದ ಆಟಗಾರರಿಗೆ ತಲಾ 5 ಮಿಲಿಯನ್ ರೂಪಾಯಿ ನಗದು ಬಹುಮಾನಗಳನ್ನು ಘೋಷಿಸಿದ್ದಾರೆ ಎಂದು ವರದಿಯಾಗಿದೆ.

3 / 5
ಇಸ್ಲಾಮಾಬಾದ್ ವಿಮಾನ ನಿಲ್ದಾಣದಲ್ಲಿ ಪಾಕ್ ತಂಡಕ್ಕೆ ಆತ್ಮೀಯ ಸ್ವಾಗತ ನೀಡಲಾಯಿತು. ಸಾಮಾನ್ಯವಾಗಿ ಹಿರಿಯ ತಂಡಗಳಿಗೆ ಇಂತಹ ಸ್ವಾಗತ ನೀಡಲಾಗುತ್ತದೆ. ಆದರೆ ಫೈನಲ್​ನಲ್ಲಿ ಭಾರತವನ್ನು ಸೋಲಿಸಿರುವುದು ಪಾಕಿಗಳಿಗೆ ಇನ್ನಿಲ್ಲದ ಸಂತೋಷ ನೀಡಿದೆ. ಹೀಗಾಗಿ ಯುವ ತಂಡಕ್ಕೆ ಅದ್ಧೂರಿ ಸ್ವಾಗತ ನೀಡಿದ್ದಾರೆ.

4 / 5
ಭಾನುವಾರ ನಡೆದ ಅಂಡರ್-19 ಏಷ್ಯಾಕಪ್ ಏಕಪಕ್ಷೀಯ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಎಂಟು ವಿಕೆಟ್‌ಗಳಿಗೆ 347 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 26.2 ಓವರ್‌ಗಳಲ್ಲಿ 156 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಪಾಕಿಸ್ತಾನ ತಂಡಕ್ಕೆ ಚೊಚ್ಚಲ ಏಷ್ಯಾಕಪ್ ಟ್ರೋಫಿ ಲಭಿಸಿತು.

5 / 5
Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ

ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ

‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ

ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ

ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ

‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ

ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ