AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 Asia Cup 2025: 41 ಬೌಂಡರಿ, 19 ಸಿಕ್ಸರ್‌, 471 ರನ್‌..! ಇತಿಹಾಸ ಸೃಷ್ಟಿಸಿದ ಪಾಕ್ ಬ್ಯಾಟ್ಸ್‌ಮನ್

U19 Asia Cup 2025: 2025 ರ U19 ಏಷ್ಯಾಕಪ್ ಫೈನಲ್‌ನಲ್ಲಿ ಸಮೀರ್ ಮಿನ್ಹಾಸ್ ಭಾರತದ ವಿರುದ್ಧ 172 ರನ್ ಗಳಿಸಿ ಹೊಸ ದಾಖಲೆ ನಿರ್ಮಿಸಿದರು. ಈ ಪಂದ್ಯಾವಳಿಯಲ್ಲಿ ಒಟ್ಟು 471 ರನ್ ಗಳಿಸುವ ಮೂಲಕ, ಅಂಡರ್-19 ಏಷ್ಯಾಕಪ್ ಇತಿಹಾಸದಲ್ಲೇ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರ ಸ್ಫೋಟಕ ಬ್ಯಾಟಿಂಗ್ ಪಾಕಿಸ್ತಾನ ತಂಡಕ್ಕೆ ಬಲವಾದ ಮೊತ್ತ ನೀಡಿತು.

ಪೃಥ್ವಿಶಂಕರ
|

Updated on: Dec 21, 2025 | 5:10 PM

Share
2025 ರ ಅಂಡರ್-19 ಏಷ್ಯಾಕಪ್‌ನ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನದ ಯುವ ಆರಂಭಿಕ ಬ್ಯಾಟ್ಸ್‌ಮನ್ ಸಮೀರ್ ಮಿನ್ಹಾಸ್ ಭಾರತದ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 113 ಎಸೆತಗಳನ್ನು ಎದುರಿಸಿದ ಮಿನ್ಹಾಸ್, 152.21 ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ 172 ರನ್​ಗಳ ಇನ್ನಿಂಗ್ಸ್ ಆಡಿದರು, ಇದರಲ್ಲಿ 17 ಬೌಂಡರಿಗಳು ಮತ್ತು 9 ಸಿಕ್ಸರ್‌ಗಳು ಸೇರಿದ್ದವು.

1 / 5
ಇದರೊಂದಿಗೆ ಸಮೀರ್ ಮಿನ್ಹಾಸ್ ಅಂಡರ್-19 ಏಷ್ಯಾ ಕಪ್‌ನ ಫೈನಲ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ನಿರ್ಮಿಸಿದರು. ಇದಕ್ಕೂ ಮೊದಲು, ಅಂಡರ್-19 ಏಷ್ಯಾಕಪ್‌ನ ಫೈನಲ್‌ನಲ್ಲಿ ಯಾವುದೇ ಬ್ಯಾಟ್ಸ್‌ಮನ್ 150 ರನ್‌ಗಳ ಗಡಿಯನ್ನು ಮುಟ್ಟಲು ಸಾಧ್ಯವಾಗಿರಲಿಲ್ಲ. ಆದರೆ ಸಮೀರ್ ಅವರ ಈ ಬಿರುಗಾಳಿಯ ಬ್ಯಾಟಿಂಗ್ ಪಾಕಿಸ್ತಾನವನ್ನು ಬಲವಾದ ಸ್ಥಾನಕ್ಕೆ ಕೊಂಡೊಯ್ದಿತು.

2 / 5
2025 ರ ಅಂಡರ್-19 ಏಷ್ಯಾಕಪ್ ಸಮೀರ್ ಮಿನ್ಹಾಸ್ ಅವರಿಗೆ ಸ್ಮರಣೀಯವಾಗಿತ್ತು. ಈ ಪಂದ್ಯಾವಳಿಯಲ್ಲಿ ಆಡಿದ ಐದು ಪಂದ್ಯಗಳಲ್ಲಿ 157.೦೦ ಸರಾಸರಿಯಲ್ಲಿ 471 ರನ್ ಗಳಿಸಿದರು, ಇದರಲ್ಲಿ ಎರಡು ಶತಕಗಳು ಮತ್ತು ಒಂದು ಅರ್ಧಶತಕವೂ ಸೇರಿತ್ತು. 117.45 ರ ಸ್ಟ್ರೈಕ್ ರೇಟ್​ನಲ್ಲಿ 41 ಬೌಂಡರಿಗಳು ಮತ್ತು 19 ಸಿಕ್ಸರ್​ಗಳನ್ನು ಬಾರಿಸಿದರು.

3 / 5
ಇದರೊಂದಿಗೆ ಅಂಡರ್-19 ಏಷ್ಯಾಕಪ್​ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು, ಪಾಕಿಸ್ತಾನಿ ಬ್ಯಾಟ್ಸ್​ಮನ್ ಸಮಿ ಅಸ್ಲಾಮ್ 2012 ರ ಅಂಡರ್-19 ಏಷ್ಯಾಕಪ್​ನಲ್ಲಿ ಆಡಿದ ಐದು ಪಂದ್ಯಗಳಲ್ಲಿ 461 ರನ್ ಗಳಿಸಿದ್ದರು. ಆದಾಗ್ಯೂ, ಸಮೀರ್ ಮಿನ್ಹಾಸ್ ಅವರನ್ನು ಹಿಂದಿಕ್ಕಿ ಈ ದಾಖಲೆಯನ್ನು ನಿರ್ಮಿಸಿದ್ದಾರೆ.

4 / 5
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 347 ರನ್ ಗಳಿಸಿತು. ಸಮೀರ್ ಮಿನ್ಹಾಸ್ ಜೊತೆಗೆ, ಅಹ್ಮದ್ ಹುಸೇನ್ ಕೂಡ ಅದ್ಭುತ ಇನ್ನಿಂಗ್ಸ್ ಆಡಿದರು. ಅಹ್ಮದ್ ಹುಸೇನ್ 72 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸೇರಿದಂತೆ ಪ್ರಬಲ 56 ರನ್ ಗಳಿಸಿದರು. ಉಸ್ಮಾನ್ ಖಾನ್ ಕೂಡ 45 ಎಸೆತಗಳಲ್ಲಿ 35 ರನ್ ಗಳಿಸಿದರು. ಆದಾಗ್ಯೂ, ಬೇರೆ ಯಾವುದೇ ಬ್ಯಾಟ್ಸ್‌ಮನ್ 30 ರನ್ ಗಳಿಸಲು ಸಾಧ್ಯವಾಗಲಿಲ್ಲ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ