4 ಟೂರ್ನಿಗಳಿಗೆ ಭಾರತಕ್ಕೆ ಬರಲ್ಲ ಪಾಕಿಸ್ತಾನ್
Champions trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಒಪ್ಪಿಗೆ ಸೂಚಿಸಿದೆ. ಅದರಂತೆ ಮುಂಬರುವ ಐಸಿಸಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಆದರೆ ಇದೇ ತಂತ್ರವನ್ನೇ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಬಿಸಿಸಿಐ ವಿರುದ್ಧ ಕೂಡ ಪ್ರಯೋಗಿಸಿದೆ. ಈ ಮೂಲಕ ಐಸಿಸಿ ಟೂರ್ನಿಯಲ್ಲಿ ತಟಸ್ಥ ಸ್ಥಳದಲ್ಲಿ ಕಣಕ್ಕಿಳಿಯಲು ಪಾಕಿಸ್ತಾನ್ ನಿರ್ಧರಿಸಿದೆ.
1 / 7
ಐಸಿಸಿಯ ಮತ್ತೊಂದು ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 19 ರಿಂದ ಪಾಕಿಸ್ತಾನದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಚಾಲನೆ ದೊರೆಯಲಿದೆ. 8 ತಂಡಗಳ ನಡುವಣ ಈ ಕದನಕ್ಕಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ತೆರಳುತ್ತಿಲ್ಲ ಎಂಬುದು ವಿಶೇಷ. ಅಂದರೆ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ.
2 / 7
ಅದರಂತೆ ಟೀಮ್ ಇಂಡಿಯಾದ ಪಂದ್ಯಗಳನ್ನು ದುಬೈನಲ್ಲಿ ನಡೆಯಲಿದೆ. ಉಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ಜರುಗಲಿದೆ. ಭಾರತೀಯ ಆಟಗಾರರ ಸುರಕ್ಷತಾ ದೃಷ್ಟಿಯಿಂದ ಪಾಕ್ನಲ್ಲಿ ಪಂದ್ಯಾವಳಿ ಆಡಲು ಬಿಸಿಸಿಐ ಹಿಂದೇಟು ಹಾಕಿತ್ತು. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸುವಂತೆ ಐಸಿಸಿಗೆ ಮನವಿ ಮಾಡಿತ್ತು.
3 / 7
ಈ ಮನವಿಯನ್ನು ಒಪ್ಪಿಕೊಳ್ಳುವಂತೆ ಐಸಿಸಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮನವೊಲಿಸಿದೆ. ಆದರೆ ಈ ಒಪ್ಪಿಗೆಗೂ ಮುನ್ನ ಪಾಕಿಸ್ತಾನ್ ಕೆಲ ಷರತ್ತುಗಳನ್ನು ಮುಂದಿಟ್ಟಿದೆ. ಈ ಷರತ್ತಿನಂತೆ ಭಾರತದಲ್ಲಿ ಮುಂಬರುವ ದಿನಗಳಲ್ಲಿ ನಡೆಯುವ ಐಸಿಸಿ ಟೂರ್ನಿಗಳನ್ನು ಸಹ ಹೈಬ್ರಿಡ್ ಮಾದರಿಯಲ್ಲೇ ಆಯೋಜಿಸಬೇಕೆಂದು ತಿಳಿಸಿದೆ.
4 / 7
ಅಂದರೆ ಇಲ್ಲಿ ಪಾಕಿಸ್ತಾನ್ ತಂಡ ಕೂಡ ಇನ್ಮುಂದೆ ಭಾರತದಲ್ಲಿ ಐಸಿಸಿ ಟೂರ್ನಿಗಳನ್ನು ಆಡಲ್ಲ ಎಂದು ತಿಳಿಸಿದೆ. ಇದಕ್ಕಾಗಿ 2031ರವರೆಗೆ ಭಾರತದಲ್ಲಿ ನಡೆಯುವ ಎಲ್ಲಾ ಐಸಿಸಿ ಟೂರ್ನಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಬೇಕೆಂದು ಬೇಡಿಕೆಯಿಟ್ಟಿದೆ. ಈ ಬೇಡಿಕೆಯನ್ನು ಒಪ್ಪುದಾದರೆ ಮಾತ್ರ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದಾಗಿ ಪಿಸಿಬಿ ಹೇಳಿಕೊಂಡಿತ್ತು.
5 / 7
ಈ ಎಲ್ಲಾ ಬೇಡಿಕೆಗಳಿಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಸ್ತು ಎಂದಿದ್ದು, ಅದರಂತೆ ಮುಂಬರುವ ದಿನಗಳಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಟೂರ್ನಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದಾಗಿ ಭರವಸೆ ನೀಡಿದೆ.
6 / 7
ಹೀಗಾಗಿ 2025 ರಲ್ಲಿ ಭಾರತದಲ್ಲಿ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್, 2026 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್, 2029 ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ, 2031 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗಾಗಿ ಪಾಕಿಸ್ತಾನ್ ತಂಡವು ಭಾರತಕ್ಕೆ ಬರಲ್ಲ.
7 / 7
ಬದಲಾಗಿ ಬಿಸಿಸಿಐ ಹೈಬ್ರಿಡ್ ಮಾದರಿಯಲ್ಲಿ ಪಂದ್ಯವನ್ನು ಆಯೋಜಿಸಬೇಕಾಗುತ್ತದೆ. ಅದರಂತೆ ಭಾರತದಲ್ಲಿ ನಡೆಯಲಿರುವ 4 ಐಸಿಸಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ಜರುಗಲಿದ್ದು, ಈ ಟೂರ್ನಿಯಲ್ಲಿನ ಪಾಕಿಸ್ತಾನದ ಪಂದ್ಯಗಳಿಗೆ ಶ್ರೀಲಂಕಾ ಅಥವಾ ಯುಎಇ ಆತಿಥ್ಯವಹಿಸುವ ಸಾಧ್ಯತೆ ಹೆಚ್ಚು.
Published On - 8:08 am, Wed, 25 December 24