AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ಗೂ ಮುನ್ನ ನಿವೃತ್ತಿ ಘೋಷಿಸಿದ ಪಾಕಿಸ್ತಾನ್ ಬ್ಯಾಟರ್..!

Asif Ali retirement: ಪಾಕಿಸ್ತಾನ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಆಸಿಫ್ ಅಲಿ ಇಂಟರ್​ನ್ಯಾಷನಲ್ ಕ್ರಿಕೆಟ್ ಬದುಕಿಗೆ ಗುಡ್ ಬೈ ಹೇಳಿದ್ದಾರೆ. ಪಾಕಿಸ್ತಾನ್ ಪರ 58 ಟಿ20 ಪಂದ್ಯಗಳನ್ನಾಡಿದ್ದ ಆಸಿಫ್ ಅಲಿ ಏಷ್ಯಾಕಪ್​ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಈ ಟೂರ್ನಿಗೆ ಆಯ್ಕೆ ಮಾಡಲಾದ 15 ಸದಸ್ಯರುಗಳ ಪಟ್ಟಿಯಲ್ಲಿ ಆಸಿಫ್ ಹೆಸರು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 02, 2025 | 9:34 AM

Share
ಪಾಕಿಸ್ತಾನ್ ತಂಡದ ಬ್ಯಾಟ್ಸ್​ಮನ್ ಆಸಿಫ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಪಾಕ್ ಪರ 79 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಆಸಿಫ್ 33ನೇ ವಯಸ್ಸಿಗೆ ಇಂಟರ್​ನ್ಯಾಷನಲ್ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಲೀಗ್​ಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

1 / 5
ಆಸಿಫ್ ಅಲಿ ಈ ಹಿಂದೆ ಪಾಕಿಸ್ತಾನ್ ಟಿ20 ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಏಷ್ಯಾಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಆಸಿಫ್​ಗೆ ಸ್ಥಾನ ಸಿಕ್ಕಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಲು ಅವಕಾಶವಿತ್ತು.

2 / 5
ಆದರೆ ಇದೀಗ ಏಷ್ಯಾಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಆಸಿಫ್ ಅಲಿ, ಪಾಕಿಸ್ತಾನದ ಜೆರ್ಸಿ ಧರಿಸಿರುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವ. ಅಲ್ಲದೆ ಕ್ರಿಕೆಟ್ ಮೈದಾನದಲ್ಲಿ ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಹೆಮ್ಮೆಯ ಅಧ್ಯಾಯವಾಗಿದೆ.  ಈ ಅಧ್ಯಾಯಕ್ಕೆ ವಿರಾಮವಿಡಲು ನಿರ್ಧರಿಸಿದ್ದೇನೆ ಎಂದು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

3 / 5
2018 ರಲ್ಲಿ ಪಾಕಿಸ್ತಾನ್ ಪರ ಪಾದಾರ್ಪಣೆ ಮಾಡಿದ ಆಸಿಫ್ ಅಲಿ 21 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 16 ಇನಿಂಗ್ಸ್ ಆಡಿರುವ ಅವರು 3 ಅರ್ಧಶತಕಗಳೊಂದಿಗೆ 382 ರನ್ ಕಲೆಹಾಕಿದ್ದಾರೆ. ಹಾಗೆಯೇ 58 ಟಿ20 ಪಂದ್ಯಗಳಲ್ಲಿ 51 ಇನಿಂಗ್ಸ್ ಆಡಿರುವ ಆಸಿಫ್ 577 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

4 / 5
ಇದೀಗ 33ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಆಸಿಫ್ ಅಲಿ ಮುಂಬರುವ ದಿನಗಳಲ್ಲಿ ವಿಶ್ವದ ಪ್ರಮುಖ ಫ್ರಾಂಚೈಸಿ ಲೀಗ್​ಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಆಸಿಫ್ ಪಾಕಿಸ್ತಾನ್ ಸೂಪರ್ ಲೀಗ್, ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್, ಕೆರಿಬಿಯನ್ ಪ್ರೀಮಿಯರ್​ ಲೀಗ್​ಗಳಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ