IPL​ ಆಡಲು ಮೊಹಮ್ಮದ್ ಅಮಿರ್​ಗೆ ‘ಗ್ರೀನ್ ಸಿಗ್ನಲ್’

Updated on: May 21, 2026 | 8:57 AM

ಇಂಡಿಯನ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಸೀಸನ್​ನಲ್ಲಿ ಪಾಕಿಸ್ತಾನ್ ಆಟಗಾರರು ಕಾಣಿಸಿಕೊಂಡಿದ್ದರು. ಆದರೆ 2008 ರಲ್ಲಿ ಮುಂಬೈ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಪಾಕಿಸ್ತಾನ್ ಆಟಗಾರರನ್ನು ಐಪಿಎಲ್​ನಿಂದ ನಿಷೇಧಿಸಲಾಗಿತ್ತು. ಈ ನಿಷೇಧದ ಹೊರತಾಗಿಯೂ ಪಾಕಿಸ್ತಾನ್ ತಂಡದ ಮಾಜಿ ವೇಗಿ ಐಪಿಎಲ್​ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

1 / 5
ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್ (Mohammad Amir) ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಸಿಗಲು ಮುಂದಿನ ವರ್ಷದ ಐಪಿಎಲ್ ಮಿನಿ ಹರಾಜುವರೆಗೆ ಕಾಯಲೇಬೇಕು. ಏಕೆಂದರೆ ಐಪಿಎಲ್ 2027ರ ಹರಾಜಿಗೆ ಹೆಸರು ನೊಂದಾಯಿಸಿಕೊಳ್ಳಲು ಪಾಕ್ ವೇಗಿ ತುದಿಗಾಲಲ್ಲಿ ನಿಂತಿದ್ದಾರೆ. (PC: Google)

2 / 5
ಆದರೆ ಅದು ಪಾಕಿಸ್ತಾನ್ ಆಟಗಾರನಾಗಿ ಅಲ್ಲ. ಬದಲಾಗಿ ಬ್ರಿಟಿಷ್ ಪ್ರಜೆಯಾಗಿ. ಅಂದರೆ ಮೊಹಮ್ಮದ್ ಅಮಿರ್ ಅಧಿಕೃತವಾಗಿ ಬ್ರಿಟಿಷ್ ಪೌರತ್ವವನ್ನು (British Citizenship) ಪಡೆದಿದ್ದಾರೆ. ಅಮಿರ್  2016 ರಲ್ಲಿ ಬ್ರಿಟಿಷ್ ಪ್ರಜೆಯಾದ ನರ್ಜೀಸ್ ಖಾನ್ ಅವರನ್ನು ವಿವಾಹವಾಗಿದ್ದರು. (PC: Google)

3 / 5
ಮದುವೆಯ ನಂತರ ಅವರು 2020 ರಿಂದ ಯುನೈಟೆಡ್ ಕಿಂಗ್‌ಡಮ್‌ನಲ್ಲಿ (UK) ನೆಲೆಸಿದ್ದು, ನಿಯಮಾವಳಿಗಳ ಪ್ರಕಾರ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಯುಕೆ ಪಾಸ್‌ಪೋರ್ಟ್ ಪಡೆದುಕೊಂಡಿದ್ದಾರೆ. ಈ ಪರೌತ್ವದೊಂದಿಗೆ ಅಮಿರ್ ಐಪಿಎಲ್​ನಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. (PC: Google)

4 / 5
ಕಳೆದ ವರ್ಷವೇ ಮೊಹಮ್ಮದ್ ಅಮಿರ್ ಇಂಡಿಯನ್ ಪ್ರೀಮಿಯರ್ ಲೀಗ್ ಆಡಬೇಕೆಂಬ ಇರಾದೆ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಬ್ರಿಟಿಷ್ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿರುವುದನ್ನು ಸಹ ಖಚಿತಪಡಿಸಿದ್ದರು. ಇದೀಗ ಬ್ರಿಟನ್ ಪೌರತ್ವ ಸಿಕ್ಕಿರುವ ಹಿನ್ನಲೆ ಇಂಗ್ಲೆಂಡ್ ಪ್ರಜೆಯಾಗಿ ಅವರು ಐಪಿಎಲ್​ ಹರಾಜಿಗಾಗಿ ಹೆಸರು ರಿಜಿಸ್ಟರ್ ಮಾಡಿಕೊಳ್ಳಬಹುದು. (PC: Google)

5 / 5
2008ರ ಮುಂಬೈ ದಾಳಿಯ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪಾಕಿಸ್ತಾನಿ ಆಟಗಾರರನ್ನು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುವುದನ್ನು ನಿಷೇಧಿಸಿದೆ. ಆದರೆ ಪ್ರಸ್ತುತ ಅಮಿರ್ ಬ್ರಿಟಿಷ್ ಪೌರತ್ವ ಹೊಂದಿರುವುದರಿಂದ, ಅವರು ಬ್ರಿಟಿಷ್ ಪ್ರಜೆಯಾಗಿ ಐಪಿಎಲ್ ಹರಾಜಿನಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ಹೀಗಾಗಿ ಮುಂದಿನ ವರ್ಷ ಅಮಿರ್ ಹರಾಜಿನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ. (PC: Google)

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us