AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ದಾಖಲೆ ಉಡೀಸ್: ಪಾಕ್ ದಾಂಡಿಗನ ವಿಶ್ವ ದಾಖಲೆ

ACC Mens U19 Asia Cup 2025: ಕಿರಿಯರ ಏಷ್ಯಾಕಪ್ ಟೂರ್ನಿಯ ಮೊದಲೆರಡು ಪಂದ್ಯಗಳಲ್ಲೇ ಭಾರತ ಮತ್ತು ಪಾಕಿಸ್ತಾನ್ ಬ್ಯಾಟರ್​​ಗಳು ಅಬ್ಬರಿಸಿದ್ದಾರೆ. ಮೊದಲ ಮ್ಯಾಚ್​​ನಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರ ಪ್ರದರ್ಶಿಸಿದರೆ, ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನದ ಸಮೀರ್ ಮಿನ್​ಹಾಸ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 14, 2025 | 7:54 AM

Share
ಅಂಡರ್​-19 ಏಷ್ಯಾಕಪ್ ಟೂರ್ನಿಯ ಮೊದಲ ದಿನವೇ ದಾಖಲೆಗಳು ನಿರ್ಮಾಣವಾಗಿದೆ. ಹೀಗೆ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಭಾರತದ ವೈಭವ್ ಸೂರ್ಯವಂಶಿ (Vaibhav Suryavanshi) ಹಾಗೂ ಪಾಕಿಸ್ತಾನದ ಸಮೀರ್ ಮಿನ್​ಹಾಸ್ (Sameer Minhas). ಮೊದಲ ಪಂದ್ಯದಲ್ಲಿ ವೈಭವ್ ಭರ್ಜರಿ ಸೆಂಚುರಿ ಸಿಡಿಸಿದರೆ, ಎರಡನೇ ಪಂದ್ಯದಲ್ಲಿ ಸಮೀರ್ ಶತಕ ಬಾರಿಸಿದರು.

1 / 6
ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ನಡೆದ ಯುಎಇ ವಿರುದ್ಧದ ಮೊದಲ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 95 ಎಸೆತಗಳಲ್ಲಿ 14 ಭರ್ಜರಿ ಸಿಕ್ಸ್ ಹಾಗೂ 9 ಫೋರ್​​ಗಳೊಂದಿಗೆ 171 ರನ್​ ಬಾರಿಸಿದ್ದರು. ಈ ಮೂಲಕ ಅಂಡರ್-19 ಏಷ್ಯಾಕಪ್ 2025 ಟೂರ್ನಿಯಲ್ಲಿ ಗರಿಷ್ಠ ಸ್ಕೋರ್​​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

2 / 6
ಈ ದಾಖಲೆ ನಿರ್ಮಾಣವಾಗಿ ದಿನ ಕಳೆಯುವ ಮುನ್ನವೇ ಸಮೀರ್ ಮಿನ್​ಹಾಸ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ದುಬೈನ ಸೆವೆನ್ಸ್ ಸ್ಟೇಡಿಯಂನಲ್ಲಿ ನಡೆದ ಮಲೇಷ್ಯಾ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಮೀರ್ 148 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 11 ಫೋರ್​​ಗಳೊಂದಿಗೆ ಅಜೇಯ 177 ರನ್ ಬಾರಿಸಿದ್ದಾರೆ. ಈ ಮೂಲಕ ಅಂಡರ್-19 ಏಷ್ಯಾಕಪ್ 2025 ಟೂರ್ನಿಯಲ್ಲಿ ಗರಿಷ್ಠ ಸ್ಕೋರ್​​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 6
ಅಷ್ಟೇ ಅಲ್ಲದೆ ಯೂತ್ ಒಡಿಐ ಕ್ರಿಕೆಟ್​ನ ಪಾದಾರ್ಪಣೆ ಪಂದ್ಯದಲ್ಲೇ ಗರಿಷ್ಠ ಸ್ಕೋರ್​​ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕೂಡ ಸಮೀರ್ ಮಿನ್​​ಹಾಸ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ವೆಸ್ಟ್ ಇಂಡೀಸ್​ ಆಟಗಾರನ ಹೆಸರಿನಲ್ಲಿತ್ತು.

4 / 6
2002 ರಲ್ಲಿ ಸ್ಕಾಟ್​​ಲೆಂಡ್ ವಿರುದ್ಧದ ಯೂತ್ ಒಡಿಐ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪರ ಕಣಕ್ಕಿಳಿದಿದ್ದ ಡೊನೊವೆನ್ ಪಾಗೊನ್ 176 ರನ್ ಬಾರಿಸಿದ್ದರು. ಈ ಮೂಲಕ ಚೊಚ್ಚಲ ಯೂತ್ ಒಡಿಐ ಮ್ಯಾಚ್​​ನಲ್ಲಿ ಅತೀ ಹೆಚ್ಚು ರನ್​​ ಗಳಿಸಿದ ಬ್ಯಾಟ್ಸ್​​ಮನ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಬರೋಬ್ಬರಿ 13 ವರ್ಷಗಳ ಬಳಿಕ ಈ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಸಮೀರ್ ಮಿನ್​​ಹಾಸ್ ಯಶಸ್ವಿಯಾಗಿದ್ದಾರೆ. ಮಲೇಷ್ಯಾ ವಿರುದ್ಧದ ಪಂದ್ಯದಲ್ಲಿ ಸಮೀರ್ ಅಜೇಯ 177 ರನ್​​​ಗಳಿಸಿ ಚೊಚ್ಚಲ ಯೂತ್ ಒಡಿಐ ಪಂದ್ಯದಲ್ಲಿ ಗರಿಷ್ಠ ಸ್ಕೋರ್​​ಗಳಿಸಿದ ಬ್ಯಾಟರ್​ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ