AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟಕ ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ಬಾಂಗ್ಲಾ ಬ್ಯಾಟರ್

United Arab Emirates vs Bangladesh: ಯುಎಇ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ಭರ್ಜರಿ ಜಯ ಸಾಧಿಸಿದೆ. ಶಾರ್ಜಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 197 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಇ ತಂಡವು 164 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: May 18, 2025 | 2:04 PM

ಬಾಂಗ್ಲಾದೇಶ್ ತಂಡದ ಯುವ ಆರಂಭಿಕ ದಾಂಡಿಗ ಪರ್ವೇಝ್ ಹೊಸೇನ್ ಎಮೊನ್ (Parvez Hossain Emon) ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬಾಂಗ್ಲಾದೇಶ್ ಪರ ಅತೀ ವೇಗದ ಟಿ20 ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಇ ತಂಡದ ನಾಯಕ ಮೊಹಮ್ಮದ್ ವಸೀಮ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡಕ್ಕೆ ಪರ್ವೇಝ್ ಹೊಸೇನ್ ಎಮೊನ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಪರ್ವೇಝ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು.

2 / 5
ಅಲ್ಲದೆ ಕೇವಲ 54 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಪರ್ವೇಝ್ ಹೊಸೇನ್ ಎಮೊನ್ ಬ್ಯಾಟ್ ಮೇಲೆತ್ತಿದರು. ಇದರೊಂದಿಗೆ ಬಾಂಗ್ಲಾದೇಶ್ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ದಾಖಲೆ ಪರ್ವೇಝ್ ಹೊಸೇನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ತಮೀಮ್ ಇಕ್ಬಾಲ್ ಹೆಸರಿನಲ್ಲಿತ್ತು.

3 / 5
2016 ರಲ್ಲಿ ಒಮಾನ್ ವಿರುದ್ಧದ ಪಂದ್ಯದಲ್ಲಿ ತಮೀಮ್ ಇಕ್ಬಾಲ್ 63 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಟಿ20 ಕ್ರಿಕೆಟ್​ನಲ್ಲಿ ಬಾಂಗ್ಲಾ ಬ್ಯಾಟರ್ ಸಿಡಿಸಿದ ಅತೀ ವೇಗದ ಶತಕವಾಗಿತ್ತು. ಇದೀಗ 8 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ 22 ವರ್ಷದ ಪರ್ವೇಝ್ ಹೊಸೇನ್ ಎಮೊನ್ ಯಶಸ್ವಿಯಾಗಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ 54 ಎಸೆತಗಳನ್ನು ಎದುರಿಸಿದ ಪರ್ವೇಝ್ ಹೊಸೇನ್ ಎಮೊನ್ 9 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 197 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಇ ತಂಡವು 20 ಓವರ್​ಗಳಲ್ಲಿ 164 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬಾಂಗ್ಲಾದೇಶ್ ತಂಡವು 27 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Follow us
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್

ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ

ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ

ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ

ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ

ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ

VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ

ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ