ನಿವೃತ್ತಿ ಬೆನ್ನಲ್ಲೇ ಅಶ್ವಿನ್​ರ ವಿಶ್ವ ದಾಖಲೆ ಮುರಿದ ಆಸ್ಟ್ರೇಲಿಯನ್ನರು

|

Updated on: Jan 06, 2025 | 11:57 AM

Ravichandran Ashwin's Record: ರವಿಚಂದ್ರನ್ ಅಶ್ವಿನ್ ಬರೆದ ವಿಶ್ವ ದಾಖಲೆಯನ್ನು ಆಸ್ಟ್ರೇಲಿಯಾ ಬೌಲರ್​ಗಳು ಮುರಿದಿದ್ದಾರೆ. ಈ ದಾಖಲೆ ಮುರಿಯುವುದರೊಂದಿಗೆ ಪ್ಯಾಟ್ ಕಮಿನ್ಸ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಯಾರಿಂದಲೂ ಸಾಧ್ಯವಾಗದ ವಿಶೇಷ ಮೈಲುಗಲ್ಲನ್ನು ಮುಟ್ಟುವ ಮೂಲಕ ಎಂಬುದು ವಿಶೇಷ.

1 / 6
ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನದಲ್ಲಿದ್ದರು. ಆದರೆ ಇದೀಗ ಆಸ್ಟ್ರೇಲಿಯಾ ಬೌಲರ್​​ಗಳಾದ ಪ್ಯಾಟ್ ಕಮಿನ್ಸ್ ಹಾಗೂ ನಾಥನ್ ಲಿಯಾನ್ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ.

2 / 6
ಬ್ರಿಸ್ಬೇನ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೂಲಕ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ನೀಡಿದ್ದರು. ಈ ನಿವೃತ್ತಿ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಅಶ್ವಿನ್ ದಾಖಲೆ ಮುರಿಯುವಲ್ಲಿ ಆಸೀಸ್ ಬೌಲರ್​​ಗಳು ಯಶಸ್ವಿಯಾಗಿದ್ದಾರೆ.

3 / 6
2019 ರಿಂದ 2024 ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಒಟ್ಟು 41 ಪಂದ್ಯಗಳನ್ನಾಡಿರುವ ರವಿಚಂದ್ರನ್ ಅಶ್ವಿನ್ 78 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 1479 ಓವರ್​ಗಳನ್ನು ಎಸೆದಿರುವ ಅಶ್ವಿನ್ ಒಟ್ಟು 195 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು.

4 / 6
ಟೀಮ್ ಇಂಡಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಒಂದು ವಿಕೆಟ್ ಕಬಳಿಸುವುದರೊಂದಿಗೆ ನಾಥನ್ ಲಿಯಾನ್, ಅಶ್ವಿನ್ ಅವರ ದಾಖಲೆಯನ್ನು ಮುರಿದಿದ್ದಾರೆ. 2019 ರಿಂದ ವಿಶ್ವ ಟೆಸ್ಟ್ ಚಾಂಪಿಯನ್ಸ್​ ಸರಣಿಯಲ್ಲಿ 85 ಇನಿಂಗ್ಸ್​ಗಳಲ್ಲಿ 1932 ಓವರ್ ಎಸೆದಿರುವ ನಾಥನ್ ಲಿಯಾನ್ ಈವರೆಗೆ 196 ವಿಕೆಟ್ ಕಬಳಿಸಿದ್ದಾರೆ.

5 / 6
ನಾಥನ್ ಲಿಯಾನ್, ಅಶ್ವಿನ್ ಅವರ ದಾಖಲೆ ಮುರಿದ ಬೆನ್ನಲ್ಲೇ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಇಬ್ಬರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದು ವಿಶೇಷ. ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಒಟ್ಟು 5 ವಿಕೆಟ್ ಪಡೆದ ಪ್ಯಾಟ್ ಕಮಿನ್ಸ್ ವಿಶ್ವ ಟೆಸ್ಟ್ ಚಾಂಪಿಯನ್ಸ್​ ಸರಣಿಯಲ್ಲಿ 200 ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

6 / 6
ಪ್ಯಾಟ್ ಕಮಿನ್ಸ್ ಈ ಸಾಧನೆ ಮಾಡಲು ತೆಗೆದುಕೊಂಡಿದ್ದು 47 ಟೆಸ್ಟ್ ಪಂದ್ಯಗಳನ್ನು. 2019 ರಿಂದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿ ಆಡುತ್ತಿರುವ ಕಮಿನ್ಸ್ ಒಟ್ಟು 88 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 1535.5 ಓವರ್​ಗಳನ್ನು ಎಸೆದು ಒಟ್ಟು 200 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇನ್ನೂರು ವಿಕೆಟ್ ಪೂರೈಸಿದ ವಿಶ್ವದ ಮೊದಲ ಬೌಲರ್ ಎಂಬ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದಾರೆ.