Pat Cummins: ವಿಶ್ವ ದಾಖಲೆ ನಿರ್ಮಿಸಿದ ಪ್ಯಾಟ್ ಕಮಿನ್ಸ್
TV9 Web | Updated By: ಝಾಹಿರ್ ಯೂಸುಫ್
Updated on:
Jan 03, 2024 | 12:28 PM
Pat Cummins Record: ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಪ್ಯಾಟ್ ಕಮಿನ್ಸ್ ಅವರ ಮಾರಕ ದಾಳಿಗೆ ತತ್ತರಿಸಿತು. 18 ಓವರ್ಗಳನ್ನು ಎಸೆದ ಕಮಿನ್ಸ್ ಕೇವಲ 61 ರನ್ ನೀಡಿ 5 ವಿಕೆಟ್ ಕಬಳಿಸಿದರು.
1 / 6
ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ತನ್ನ ಸಹ ಆಟಗಾರ ನಾಥನ್ ಲಿಯಾನ್ ಅವರ ವಿಕೆಟ್ ದಾಖಲೆಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.
2 / 6
ಸಿಡ್ನಿಯಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ 57 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಈ ಐದು ವಿಕೆಟ್ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
3 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ಹೆಸರಿನಲ್ಲಿತ್ತು. 69 ಟೆಸ್ಟ್ ಇನಿಂಗ್ಸ್ಗಳ ಮೂಲಕ ಲಿಯಾನ್ ಒಟ್ಟು 162 ವಿಕೆಟ್ ಕಬಳಿಸಿದ್ದರು. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.
4 / 6
ಇದೀಗ 69 ಟೆಸ್ಟ್ ಇನಿಂಗ್ಸ್ಗಳಲ್ಲಿ ಒಟ್ಟು 163 ವಿಕೆಟ್ ಉರುಳಿಸಿ ಪ್ಯಾಟ್ ಕಮಿನ್ಸ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
5 / 6
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ರವಿಚಂದ್ರನ್ ಅಶ್ವಿನ್ ಹೆಸರಿನಲ್ಲಿದೆ. 57 ಟೆಸ್ಟ್ ಇನಿಂಗ್ಸ್ಗಳಿಂದ ಒಟ್ಟು 148 ವಿಕೆಟ್ ಕಬಳಿಸಿರುವ ಅಶ್ವಿನ್ WTC ವಿಕೆಟ್ ಸರದಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.
6 / 6
ಸಿಡ್ನಿ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಪ್ಯಾಟ್ ಕಮಿನ್ಸ್ ಅವರ ಮಾರಕ ದಾಳಿಗೆ ತತ್ತರಿಸಿತು. 18 ಓವರ್ಗಳನ್ನು ಎಸೆದ ಕಮಿನ್ಸ್ ಕೇವಲ 61 ರನ್ ನೀಡಿ 5 ವಿಕೆಟ್ ಕಬಳಿಸಿದರು. ಪರಿಣಾಮ ಪಾಕಿಸ್ತಾನ್ ತಂಡವು ಮೊದಲ ಇನಿಂಗ್ಸ್ನಲ್ಲಿ 313 ರನ್ಗಳಿಗೆ ಆಲೌಟ್ ಆಗಿದೆ.