
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ ಈಗಾಗಲೇ ತಾತ್ಕಾಲಿಕ ತಂಡವನ್ನು ಘೋಷಿಸಿದೆ. ಈ ತಂಡದಲ್ಲಿ ಸ್ಥಾನ ಪಡೆದಿರುವ ಪ್ರಮುಖ ಆಟಗಾರ ಮೊದಲ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ.

ಆಸ್ಟ್ರೇಲಿಯಾ ತಂಡದಲ್ಲಿರುವ ಸ್ಟಾರ್ ಆಲ್ ರೌಂಡರ್ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯಿಂದ ಹೊರಗಿಡಲಾಗಿದೆ.

ಇದೀಗ ಫೆಬ್ರವರಿ 11ರ ವೇಳೆಗೆ ಅವರು ಸಂಪೂರ್ಣ ಫಿಟ್ ನೆಸ್ ಸಾಧಿಸುವುದಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಖಚಿತಪಡಿಸಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡದ ಮೊದಲ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ಕಣಕ್ಕಿಳಿಯುವುದಿಲ್ಲ ಎಂಬುದು ಸಹ ಕನ್ಫರ್ಮ್ ಆಗಿದೆ.

ಆಸ್ಟ್ರೇಲಿಯಾ ತಂಡವು ಫೆಬ್ರವರಿ 11 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯದಲ್ಲಿ ಕಮಿನ್ಸ್ ಹೊರತುಪಡಿಸಿ ಆಸ್ಟ್ರೇಲಿಯಾ ಪಡೆಯ ಉಳಿದೆಲ್ಲಾ ಆಟಗಾರರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಟಿ20 ವಿಶ್ವಕಪ್ಗೆ ಆಸ್ಟ್ರೇಲಿಯಾ ತಂಡ (ತಾತ್ಕಾಲಿಕ): ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.