Pat Cummins: ಭಾರತ ವಿರುದ್ಧ ಸೋಲು: ಇಂದು ಬೆಳಗ್ಗೆ ದಿಢೀರ್ ಆಸ್ಟ್ರೇಲಿಯಾಕ್ಕೆ ತೆರಳಿದ ಪ್ಯಾಟ್ ಕಮಿನ್ಸ್: ಕಾರಣವೇನು?

India vs Australia Test: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಎರಡೂವರೆ ದಿನದಲ್ಲಿ ಭಾನುವಾರವೇ ಮುಕ್ತಾಯಗೊಂಡಿತು. ಇದರ ನಡುವೆ ಸೋಲಿನ ಆಘಾತದಲ್ಲಿರುವ ಆಸ್ಟ್ರೇಲಿಯಾಕ್ಕೆ ಮತ್ತೊಂದು ಶಾಕ್ ಉಂಟಾಗಿದೆ.

Vinay Bhat
|

Updated on:Feb 20, 2023 | 9:31 AM

ಭಾರತ ಪ್ರವಾಸ ಬೆಳೆಸಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಬಾರ್ಡರ್- ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯನ್ನ ಆಡುತ್ತಿದೆ. ಈ ಬಾರಿ ತೀರಾ ಕಳಪೆ ಪ್ರದರ್ಶನ ನೀಡಿರುವ ಕಾಂಗರೂ ಪಡೆ ಆಡಿರುವ ಎರಡೂ ಪಂದ್ಯಗಳಲ್ಲಿ ಸೋಲುಂಡಿದೆ. ಇದರ ನಡುವೆ ಆಸೀಸ್​ಗೆ ಮತ್ತೊಂದು ಆಘಾತ ಉಂಟಾಗಿದೆ.

1 / 8
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಎರಡೂವರೆ ದಿನದಲ್ಲಿ ಭಾನುವಾರವೇ ಮುಕ್ತಾಯಗೊಂಡಿತು. ಇದರ ನಡುವೆ ಸೋಲಿನ ಆಘಾತದಲ್ಲಿರುವ ಆಸ್ಟ್ರೇಲಿಯಾಕ್ಕೆ ಮತ್ತೊಂದು ಶಾಕ್ ಉಂಟಾಗಿದೆ.

2 / 8
ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಇಂದು ಬೆಳಗ್ಗೆ ದಿಢಿರ್ ತಮ್ಮ ಮನೆಗೆ ತೆರಳಿದ್ದಾರೆ. ಕುಟುಂಬದಲ್ಲಿ ಅನಾರೋಗ್ಯ ಸಮಸ್ಯೆ ಕಂಡು ಬಂದಿರುವುದರಿಂದ ಅವರು ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿ ಆಗಿದೆ.

3 / 8
ನ್ಯೂಸ್​ಕ್ರಾಪ್ ಮಾಡಿರವ ವರದಿಯ ಪ್ರಕಾರ, ಕಮಿನ್ಸ್ ಅವರು ಕೆಲವು ದಿನಗಳ ಮಟ್ಟಿಗಷ್ಟೆ ಸಿಡ್ನಿಗೆ ತೆರಳಿದ್ದಾರೆ. ಮೂರನೇ ಟೆಸ್ಟ್ ಮಾರ್ಚ್ 1 ರಿಂದ ಆರಂಭವಾಗಲಿದೆ. ಈ ಹೊತ್ತಿಗೆ ಅವರು ಪುನಃ ತಂಡ ಸೇರಿಕೊಳ್ಳಬಹುದು ಎಂದು ಹೇಳಲಾಗಿದೆ. ಆದರೆ, ಕಮಿನ್ಸ್ ಭಾರತಕ್ಕೆ ಮರಳುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

4 / 8
ಈಗಾಗಲೇ ಆಸ್ಟ್ರೇಲಿಯಾ ಡೇವಿಡ್ ವಾರ್ನರ್ ಅವರ ಅಲಭ್ಯತೆಯಲ್ಲಿದೆ. ವಾರ್ನರ್​ ಎರಡನೇ ಟೆಸ್ಟ್ ಪಂದ್ಯ ಆಡುವಾಗ ಚೆಂಡು ಅವರ ಹೆಲ್ಮೆಟ್​ಗೆ ಬಡಿದು ಗಾಯಗೊಂಡಿದ್ದರು. ಹೀಗಾಗಿ ಅವರು ಸೆಕೆಂಡ್ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಕೂಡ ಮಾಡಲಿಲ್ಲ. ತೃತೀಯ ಟೆಸ್ಟ್​ನಲ್ಲಿ ಇವರು ಕಣಕ್ಕಿಳಿಯುತ್ತಾ ಎಂಬುದು ನೋಡಬೇಕಿದೆ.

5 / 8
ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲೆರಡು ಟೆಸ್ಟ್ ಪಂದ್ಯ ಮುಕ್ತಾಯಗೊಂಡಿದೆ. ಈ ಎರಡೂ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸುವ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಅಲ್ಲದೆ ಬಾರ್ಡರ್- ಗವಾಸ್ಕರ್ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ.

6 / 8
ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್ ತಂತ್ರ ಅರಿಯುವಲ್ಲಿ ವಿಫಲರಾದ ಪ್ಯಾಟ್ ಕಮಿನ್ಸ್ ಪಡೆ ಹೀನಾಯ ಸೋಲುಂಡಿತು. ದ್ವಿತೀಯ ಪಂದ್ಯದಲ್ಲೂ ಇದೇ ಮುಂದುವರೆಯಿತು. ಇಲ್ಲಿ ಜಡೇಜಾ, ಅಶ್ವಿನ್​ಗೆ ವೇಗಿಗಳು ಕೂಡ ಸಾಥ್ ನೀಡಿದರು. ಇದೀಗ ತೃತೀಯ ಕದನಕ್ಕೆ ಉಭಯ ತಂಡಗಳು ಸಜ್ಜಾಗಬೇಕಿದೆ.

7 / 8
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಮಾರ್ಚ್ 5 ರವರೆಗೆ ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಬೆಳಗ್ಗೆ 09:30 ಕ್ಕೆ ಆರಂಭವಾಗಲಿದೆ. ಒಂಬತ್ತು ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಇರಲಿದೆ.

8 / 8

Published On - 9:31 am, Mon, 20 February 23

Follow us
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ