ಟಿ20 ವಿಶ್ವಕಪ್ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್
T20 World Cup 2026 Australia Squad: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ 15 ಸದಸ್ಯರುಗಳ ಬಲಿಷ್ಠ ತಂಡವನ್ನು ರೂಪಿಸಿದೆ. ಈ ತಂಡದಿಂದ ಇಬ್ಬರು ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ.
Updated on: Jan 31, 2026 | 2:09 PM

T20 World Cup 2026: ಟಿ20 ವಿಶ್ವಕಪ್ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಇಬ್ಬರು ಸ್ಟಾರ್ ಆಟಗಾರರು ಸ್ಥಾನ ಪಡೆದಿಲ್ಲ. ಅಂದರೆ ಈ ಹಿಂದೆ ಟಿ20 ವಿಶ್ವಕಪ್ಗಾಗಿ ಪ್ರಕಟಿಸಲಾದ ತಾತ್ಕಾಲಿಕ ತಂಡದಲ್ಲಿ ಸ್ಥಾನ ಪಡೆದಿದ್ದ ಇಬ್ಬರು ತಂಡದಿಂದ ಕೈ ಬಿಡಲಾಗಿದೆ.

Pat (2)

ಮತ್ತೊಂದಡೆ ತಾತ್ಕಾಲಿಕ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಮ್ಯಾಥ್ಯೂ ಶಾರ್ಟ್ ಅವರು ಸಹ ತಂಡದಿಂದ ಹೊರಬಿದ್ದಿದ್ದಾರೆ. ಬಿಗ್ ಬ್ಯಾಷ್ ಲೀಗ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಚ್ ರೆನ್ಶಾಗೆ ಅವಕಾಶ ಕಲ್ಪಿಸುವ ಸಲುವಾಗಿ ಮ್ಯಾಥ್ಯೂ ಶಾರ್ಟ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

ಇನ್ನು ಸ್ಟೀವ್ ಸ್ಮಿತ್ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಇದಾಗ್ಯೂ ಅನುಭವಿ ಆಲ್ರೌಂಡರ್ ಆಗಿ ಗ್ಲೆನ್ ಮ್ಯಾಕ್ಸ್‌ವೆಲ್ ಆಯ್ಕೆಯಾಗಿದ್ದಾರೆ. ಹಾಗೆಯೇ ಗಾಯದಿಂದ ಬಳಲುತ್ತಿದ್ದ ಜೋಶ್ ಹೇಝಲ್‌ವುಡ್ ಕೂಡ ಸಂಪೂರ್ಣ ಫಿಟ್ ಆಗಿದ್ದು, ಹೀಗಾಗಿ ಅವರು ಸಹ ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಟಿ20 ವಿಶ್ವಕಪ್ಗೆ ಆಸ್ಟ್ರೇಲಿಯಾ ತಂಡ ಈ ಕೆಳಗಿನಂತಿದೆ...

ಟಿ20 ವಿಶ್ವಕಪ್ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.
