ಆಸ್ಟ್ರೇಲಿಯಾಗೆ ಬಿಗ್ ಶಾಕ್: ಭಾರತದ ವಿರುದ್ಧದ ಸರಣಿಯಿಂದ ಸ್ಟಾರ್ ಆಟಗಾರ ಔಟ್

Updated on: Sep 02, 2025 | 3:10 PM

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಪಂದ್ಯಗಳನ್ನಾಡಲಿದೆ. ಈ ಸರಣಿಯ ಬಳಿಕ ಉಭಯ ತಂಡಗಳು 5 ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಎರಡು ಸರಣಿಗಳಿಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗಲಿದ್ದಾರೆ.

1 / 5
ಆಸ್ಟ್ರೇಲಿಯಾ ಏಕದಿನ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಭಾರತದ ವಿರುದ್ಧ ಸರಣಿಯಿಂದ ಹೊರಗುಳಿಯುವುದು ಖಚಿತವಾಗಿದೆ. ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿರುವ ಕಮಿನ್ಸ್ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದೇ ಕಾರಣದಿಂದ ಕಮಿನ್ಸ್ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

ಆಸ್ಟ್ರೇಲಿಯಾ ಏಕದಿನ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಭಾರತದ ವಿರುದ್ಧ ಸರಣಿಯಿಂದ ಹೊರಗುಳಿಯುವುದು ಖಚಿತವಾಗಿದೆ. ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿರುವ ಕಮಿನ್ಸ್ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದೇ ಕಾರಣದಿಂದ ಕಮಿನ್ಸ್ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

2 / 5

ಇದೀಗ ಭಾರತದ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಗೂ ಅವರು ಅಲಭ್ಯರಾಗಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಿಂದ ಕಮಿನ್ಸ್ ಹೊರಗುಳಿಯುತ್ತಿರುವ ಕಾರಣ ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.

3 / 5

ಇನ್ನು ನವೆಂಬರ್ ವೇಳೆಗೆ ಸಂಪೂರ್ಣವಾಗಿ ಗುಣಮುಖರಾದರೆ ಮಾತ್ರ ಪ್ಯಾಟ್ ಕಮಿನ್ಸ್ ಆ್ಯಶಸ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಟೆಸ್ಟ್ ಸರಣಿಯು ನವೆಂಬರ್ 21 ರಿಂದ ಶುರುವಾಗಲಿದೆ.

4 / 5

ಈ ಸರಣಿಯು ಆಸ್ಟ್ರೇಲಿಯಾ ಪಾಲಿಗೆ ಮಹತ್ವದ್ದಾಗಿದ್ದು, ಹೀಗಾಗಿ ಪ್ಯಾಟ್ ಕಮಿನ್ಸ್ ಅವರ ಗಾಯದ ಬಗ್ಗೆ ನಿಗಾವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ವೈದ್ಯರುಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಅದರಂತೆ ಕಮಿನ್ಸ್ ಮುಂದಿನ ಒಂದೆರಡು ತಿಂಗಳುಗಳು ಕಾಲ ಮೈದಾನದಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು.

5 / 5

ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

Published On - 12:50 pm, Tue, 2 September 25

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us