AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗೂ ಸಾಧ್ಯವಾಗದೇ ಇರುವುದನ್ನು ಸಾಧಿಸಿ ತೋರಿಸಿದ ಪಾತುಮ್ ನಿಸ್ಸಂಕಾ

Pathum Nissanka: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ಪರ ಆರಂಭಿಕನಾಗಿ ಕಣಕ್ಕಿಳಿದ ಪಾತುಮ್ ನಿಸ್ಸಂಕಾ 52 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 10 ಫೋರ್​ಗಳನ್ನು ಒಳಗೊಂಡಂತೆ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ವಿಶೇಷ ದಾಖಲೆಯನ್ನು ಕೂಡ ಪಾತುಮ್ ನಿಸ್ಸಂಕಾ ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 17, 2026 | 8:56 AM

Share
T20 World Cup 2026: ಟಿ20 ವಿಶ್ವಕಪ್​ 2026ರ ಮೊದಲ ಶತಕ ಮೂಡಿಬಂದಿದೆ. ಅದು ಸಹ ಶ್ರೀಲಂಕಾದ ಆರಂಭಿಕ ದಾಂಡಿಗ ಪಾತುಮ್ ನಿಸ್ಸಂಕಾ (Pathum Nissanka) ಬ್ಯಾಟ್​ನಿಂದ. ಈ ಸೆಂಚುರಿ ಮೂಡಿಬಂದಿರುವುದು ಆಸ್ಟ್ರೇಲಿಯಾ ವಿರುದ್ಧ ಎಂಬುದೇ ಇಲ್ಲಿ ವಿಶೇಷ. 

1 / 6
ಪಲ್ಲೆಕೆಲೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 30ನೇ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರ್​ಗಳಲ್ಲಿ 181 ರನ್​ಗಳನ್ನು ಪೇರಿಸಿದರು.

2 / 6
182 ರನ್​ಗಳ ಕಠಿಣ ಗುರಿ ಪಡೆದ ಶ್ರೀಲಂಕಾ ತಂಡಕ್ಕೆ ಪಾತುಮ್ ನಿಸ್ಸಂಕಾ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಆಸೀಸ್ ವೇಗಿಗಳನ್ನು ಟಾರ್ಗೆಟ್ ಮಾಡಿದ್ದ ನಿಸ್ಸಂಕಾ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬೆನ್ನಲ್ಲೇ ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತು ನೀಡಿದ ಪಾತುಮ್ ಆಸ್ಟ್ರೇಲಿಯಾ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಲಾರಂಭಿಸಿದರು.

3 / 6
ಪರಿಣಾಮ ಪಾತುಮ್ ನಿಸ್ಸಂಕಾ ಬ್ಯಾಟ್​ನಿಂದ 52 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಶತಕದೊಂದಿಗೆ ಟಿ20 ವಿಶ್ವಕಪ್​​ ಇತಿಹಾಸದಲ್ಲೇ ಆಸ್ಟ್ರೇಲಿಯಾ ವಿರುದ್ಧ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ನಿಸ್ಸಂಕಾ ತಮ್ಮದಾಗಿಸಿಕೊಂಡರು.

4 / 6
ಇದಕ್ಕೂ ಮುನ್ನ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗರಿಷ್ಠ ಸ್ಕೋರ್​ ಗಳಿಸಿದ ದಾಖಲೆ ಪಾಕಿಸ್ತಾನದ ಉಮರ್ ಅಕ್ಮಲ್ ಹೆಸರಿನಲ್ಲಿತ್ತು. 2014 ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಉಮರ್ ಅಕ್ಮಲ್ 94 ರನ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಆಸ್ಟ್ರೇಲಿಯಾ ಬೌಲರ್​ಗಳ ಬೆಂಡೆತ್ತುವ ಮೂಲಕ ಪಾತುಮ್ ನಿಸ್ಸಂಕಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಆಸ್ಟ್ರೇಲಿಯಾ ವಿರುದ್ಧ ಶತಕ ಸಿಡಿಸಿದ ಮೊದಲ ಹಾಗೂ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಂದ್ಯದಲ್ಲಿ 52 ಎಸೆತಗಳನ್ನು ಎದುರಿಸಿದ ನಿಸ್ಸಂಕಾ 5 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಅಜೇಯ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಶ್ರೀಲಂಕಾ ತಂಡವು 18 ಓವರ್​ಗಳಲ್ಲಿ 184 ರನ್​ಗಳಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್

ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ

ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ

ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ

ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ

ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!

ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ

ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ