- Kannada News Photo gallery Cricket photos Paul Stirling becomes 1st player to hit 400 fours in T20Is
Paul Stirling: ಹೊಸ ವಿಶ್ವ ದಾಖಲೆ ಬರೆದ ಪೌಲ್ ಸ್ಟಿರ್ಲಿಂಗ್
Paul Stirling Record: ಐರ್ಲೆಂಡ್ ಪರ 135 ಟಿ20 ಪಂದ್ಯಗಳನ್ನಾಡಿರುವ ಪೌಲ್ ಸ್ಟಿರ್ಲಿಂಗ್ ಒಟ್ಟು 3463 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಟಿ20 ಕ್ರಿಕೆಟ್ನಲ್ಲಿ ಯಾರೂ ಮಾಡದ ವಿಶೇಷ ಸಾಧನೆಯೊಂದಿಗೆ ಸ್ಟಿರ್ಲಿಂಗ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
Updated on: Mar 16, 2024 | 9:04 AM

ಶಾರ್ಜಾದಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 2 ಫೋರ್ಗಳನ್ನು ಬಾರಿಸುವ ಮೂಲಕ ಐರ್ಲೆಂಡ್ ಆರಂಭಿಕ ಆಟಗಾರ ಪೌಲ್ ಸ್ಟಿರ್ಲಿಂಗ್ (Paul Stirling) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಫೋರ್ಗಳೊಂದಿಗೆ ಎಂಬುದು ವಿಶೇಷ.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 400 ಕ್ಕೂ ಅಧಿಕ ಫೋರ್ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ಪೌಲ್ ಸ್ಟಿರ್ಲಿಂಗ್ ಪಾಲಾಗಿದೆ. ಅಲ್ಲದೆ ಈ ಸಾಧನೆ ಮಾಡಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ದಾಖಲೆ ಪಾಕಿಸ್ತಾನದ ಬಾಬರ್ ಆಝಂ ಹೆಸರಿನಲ್ಲಿತ್ತು. ಬಾಬರ್ 103 ಟಿ20 ಇನಿಂಗ್ಸ್ಗಳಲ್ಲಿ ಒಟ್ಟು 395 ಫೋರ್ಗಳನ್ನು ಬಾರಿಸಿ ದಾಖಲೆ ನಿರ್ಮಿಸಿದ್ದರು.

ಇದೀಗ ಪೌಲ್ ಸ್ಟಿರ್ಲಿಂಗ್ 134 ಟಿ20 ಇನಿಂಗ್ಸ್ಗಳಲ್ಲಿ ಒಟ್ಟು 401 ಫೋರ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 400+ ಫೋರ್ ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 109 ಟಿ20 ಇನಿಂಗ್ಸ್ಗಳಲ್ಲಿ ಒಟ್ಟು 361 ಫೋರ್ಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.

ಐರ್ಲೆಂಡ್-ಅಫ್ಘಾನಿಸ್ತಾನ್ ಪಂದ್ಯ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 149 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 18.4 ಓವರ್ಗಳಲ್ಲಿ 111 ರನ್ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಐರ್ಲೆಂಡ್ ತಂಡವು 38 ರನ್ಗಳ ಜಯ ಸಾಧಿಸಿದೆ.




