Paul Stirling: ಹೊಸ ವಿಶ್ವ ದಾಖಲೆ ಬರೆದ ಪೌಲ್ ಸ್ಟಿರ್ಲಿಂಗ್

| Updated By: ಝಾಹಿರ್ ಯೂಸುಫ್

Updated on: Mar 16, 2024 | 9:04 AM

Paul Stirling Record: ಐರ್ಲೆಂಡ್ ಪರ 135 ಟಿ20 ಪಂದ್ಯಗಳನ್ನಾಡಿರುವ ಪೌಲ್ ಸ್ಟಿರ್ಲಿಂಗ್ ಒಟ್ಟು 3463 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಟಿ20 ಕ್ರಿಕೆಟ್​ನಲ್ಲಿ ಯಾರೂ ಮಾಡದ ವಿಶೇಷ ಸಾಧನೆಯೊಂದಿಗೆ ಸ್ಟಿರ್ಲಿಂಗ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 6
ಶಾರ್ಜಾದಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 2 ಫೋರ್​ಗಳನ್ನು ಬಾರಿಸುವ ಮೂಲಕ ಐರ್ಲೆಂಡ್ ಆರಂಭಿಕ ಆಟಗಾರ ಪೌಲ್ ಸ್ಟಿರ್ಲಿಂಗ್ (Paul Stirling) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಫೋರ್​ಗಳೊಂದಿಗೆ ಎಂಬುದು ವಿಶೇಷ.

2 / 6
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 400 ಕ್ಕೂ ಅಧಿಕ ಫೋರ್​ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ಪೌಲ್​ ಸ್ಟಿರ್ಲಿಂಗ್ ಪಾಲಾಗಿದೆ. ಅಲ್ಲದೆ ಈ ಸಾಧನೆ ಮಾಡಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 6
ಇದಕ್ಕೂ ಮುನ್ನ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ದಾಖಲೆ ಪಾಕಿಸ್ತಾನದ ಬಾಬರ್ ಆಝಂ ಹೆಸರಿನಲ್ಲಿತ್ತು. ಬಾಬರ್ 103 ಟಿ20 ಇನಿಂಗ್ಸ್​ಗಳಲ್ಲಿ ಒಟ್ಟು 395 ಫೋರ್​ಗಳನ್ನು ಬಾರಿಸಿ ದಾಖಲೆ ನಿರ್ಮಿಸಿದ್ದರು.

4 / 6
ಇದೀಗ ಪೌಲ್ ಸ್ಟಿರ್ಲಿಂಗ್ 134 ಟಿ20 ಇನಿಂಗ್ಸ್​ಗಳಲ್ಲಿ ಒಟ್ಟು 401 ಫೋರ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 400+ ಫೋರ್ ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 109 ಟಿ20 ಇನಿಂಗ್ಸ್​ಗಳಲ್ಲಿ ಒಟ್ಟು 361 ಫೋರ್​ಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ.

6 / 6
ಐರ್ಲೆಂಡ್-ಅಫ್ಘಾನಿಸ್ತಾನ್ ಪಂದ್ಯ: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 149 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 18.4 ಓವರ್​ಗಳಲ್ಲಿ 111 ರನ್​​ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಐರ್ಲೆಂಡ್​ ತಂಡವು 38 ರನ್​ಗಳ ಜಯ ಸಾಧಿಸಿದೆ.