AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಇಂಡಿಯನ್ಸ್ ಸೋತರೆ 2 ತಂಡಗಳು ಔಟ್..!

Ipl 2026 playoff scenarios: ಇಂಡಿಯನ್ ಪ್ರೀಮಿಯರ್ ಲೀಗ್ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 3 ಮೂರು ತಂಡಗಳು ಪ್ಲೇಆಫ್​ಗೇರಿದರೆ, 4 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಪ್ಲೇಆಫ್​ನ ಒಂದು ಸ್ಥಾನಕ್ಕಾಗಿ ಮೂರು ತಂಡಗಳ ನಡುವೆ ಪೈಪೋಟಿ ಇದೆ. ಈ ತಂಡಗಳ ಭವಿಷ್ಯ ನಿರ್ಧರಿಸಲಿರುವುದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:May 24, 2026 | 7:32 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮೂರು ತಂಡಗಳಿಗೆ ನಿರ್ಣಾಯಕ. (PC: IPL)

1 / 6
ಅಂದರೆ ಈ ಮ್ಯಾಚ್​ ಮೂಲಕ ಪ್ಲೇಆಫ್ ಆಡಲಿರುವ 4ನೇ ತಂಡ ಯಾವುದು ಎಂಬುದು ಬಹುತೇಕ ನಿರ್ಧಾರವಾಗಲಿದೆ. ಏಕೆಂದರೆ ಈಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋತರೆ, ಪ್ಲೇಆಫ್​ ರೇಸ್​ನಲ್ಲಿರುವ ಎರಡು ತಂಡಗಳು ಹೊರಬೀಳಲಿದೆ. ಆ ತಂಡಗಳಾವುವು ಎಂದರೆ... (PC: IPL)

2 / 6
ಪಂಜಾಬ್ ಕಿಂಗ್ಸ್​: ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಮುಖಾಮುಖಿಯಲ್ಲಿ ಆರ್​ಆರ್ ಪಡೆ ಗೆದ್ದರೆ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ. ಇತ್ತ 15 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ. (PC: IPL)

3 / 6
ಕೊಲ್ಕತ್ತಾ ನೈಟ್ ರೈಡರ್ಸ್​: ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್​ ತಂಡ ಗೆದ್ದರೆ ಮಾತ್ರ ಕೆಕೆಆರ್ ತಂಡಕ್ಕೆ ಪ್ಲೇಆಫ್​ಗೇರಲು ಅವಕಾಶ ಇರಲಿದೆ. ಒಂದು ವೇಳೆ ಆರ್​ಆರ್ ತಂಡ ಜಯ ಸಾಧಿಸಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಪ್ಲೇಆಫ್​ ರೇಸ್​​ನಿಂದ ಹೊರಬಳಲಿದೆ. (PC: IPL)

4 / 6
ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಒಟ್ಟು 14 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ (15 ಅಂಕಗಳು) ತಂಡವನ್ನು ಹಿಂದಿಕ್ಕಿ ಪ್ಲೇಆಫ್​ಗೇರಲಿದೆ. (PC: IPL)

5 / 6
ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡವು ಕೊನೆಯ ಮ್ಯಾಚ್​ನಲ್ಲಿ ಗೆದ್ದರೂ ಒಟ್ಟು 15 ಅಂಕಳನ್ನು ಮಾತ್ರ ಪಡೆಯಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡದ ಗೆಲುವುದನ್ನು ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳು ಎದುರು ನೋಡಲಿದೆ. (PC: IPL)

6 / 6

Published On - 7:31 am, Sun, 24 May 26

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us