
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮೂರು ತಂಡಗಳಿಗೆ ನಿರ್ಣಾಯಕ. (PC: IPL)

ಅಂದರೆ ಈ ಮ್ಯಾಚ್ ಮೂಲಕ ಪ್ಲೇಆಫ್ ಆಡಲಿರುವ 4ನೇ ತಂಡ ಯಾವುದು ಎಂಬುದು ಬಹುತೇಕ ನಿರ್ಧಾರವಾಗಲಿದೆ. ಏಕೆಂದರೆ ಈಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋತರೆ, ಪ್ಲೇಆಫ್ ರೇಸ್ನಲ್ಲಿರುವ ಎರಡು ತಂಡಗಳು ಹೊರಬೀಳಲಿದೆ. ಆ ತಂಡಗಳಾವುವು ಎಂದರೆ... (PC: IPL)

ಪಂಜಾಬ್ ಕಿಂಗ್ಸ್: ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಮುಖಾಮುಖಿಯಲ್ಲಿ ಆರ್ಆರ್ ಪಡೆ ಗೆದ್ದರೆ 16 ಅಂಕಗಳೊಂದಿಗೆ ಪ್ಲೇಆಫ್ಗೆ ಪ್ರವೇಶಿಸಲಿದೆ. ಇತ್ತ 15 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ. (PC: IPL)

ಕೊಲ್ಕತ್ತಾ ನೈಟ್ ರೈಡರ್ಸ್: ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಗೆದ್ದರೆ ಮಾತ್ರ ಕೆಕೆಆರ್ ತಂಡಕ್ಕೆ ಪ್ಲೇಆಫ್ಗೇರಲು ಅವಕಾಶ ಇರಲಿದೆ. ಒಂದು ವೇಳೆ ಆರ್ಆರ್ ತಂಡ ಜಯ ಸಾಧಿಸಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಪ್ಲೇಆಫ್ ರೇಸ್ನಿಂದ ಹೊರಬಳಲಿದೆ. (PC: IPL)

ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಒಟ್ಟು 14 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ (15 ಅಂಕಗಳು) ತಂಡವನ್ನು ಹಿಂದಿಕ್ಕಿ ಪ್ಲೇಆಫ್ಗೇರಲಿದೆ. (PC: IPL)

ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಕೊನೆಯ ಮ್ಯಾಚ್ನಲ್ಲಿ ಗೆದ್ದರೂ ಒಟ್ಟು 15 ಅಂಕಳನ್ನು ಮಾತ್ರ ಪಡೆಯಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಗೆಲುವುದನ್ನು ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳು ಎದುರು ನೋಡಲಿದೆ. (PC: IPL)
Published On - 7:31 am, Sun, 24 May 26