ತನ್ನದೇ ಆಟಗಾರನಿಗೆ 2 ವರ್ಷಗಳ ನಿಷೇಧ ಹೇರಿದ ಪಾಕ್ ಕ್ರಿಕೆಟ್ ಮಂಡಳಿ

Updated on: Aug 07, 2026 | 10:02 PM

Pakistan cricket: ಪಾಕಿಸ್ತಾನದ ಯುವ ಕ್ರಿಕೆಟ್ ಆಲ್‌ರೌಂಡರ್ ಹಮ್ಜಾ ನಜರ್ ಅವರಿಗೆ PCB ಎರಡು ವರ್ಷಗಳ ಕಾಲ ಕ್ರಿಕೆಟ್ ನಿಷೇಧಿಸಿದೆ. ವೀಸಾ ಅರ್ಜಿ ಪ್ರಕ್ರಿಯೆಯಲ್ಲಿ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ 1 ಮಿಲಿಯನ್ ಪಾಕಿಸ್ತಾನಿ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದ ಹಮ್ಜಾ ಅವರ ಭವಿಷ್ಯಕ್ಕೆ ಇದು ದೊಡ್ಡ ಹಿನ್ನಡೆಯಾಗಿದೆ.

1 / 5
ಪಾಕಿಸ್ತಾನದ ಯುವ ಆಲ್‌ರೌಂಡರ್ ಹಮ್ಜಾ ನಜರ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ಎರಡು ವರ್ಷಗಳ ಕಾಲ ನಿಷೇಧಿಸಿದೆ. ಇದರ ಜೊತೆಗೆ 1 ಮಿಲಿಯನ್ ಪಾಕಿಸ್ತಾನಿ ರೂಪಾಯಿಯನ್ನು ದಂಡವಾಗಿ ವಿಧಿಸಿದೆ.

2 / 5
ಅಷ್ಟಕ್ಕೂ ಈ ಯುವ ಆಟಗಾರನ ಮೇಲೆ ಪಿಸಿಬಿ ಈ ರೀತಿಯ ಕಠಿಣ ಕ್ರಮ ಜರುಗಿಸಲು ಕಾರಣವೇನು ಎಂಬುದನ್ನು ನೋಡುವುದಾದರೆ.. ಹಮ್ಜಾ ನಜರ್ ತಮ್ಮ ವೀಸಾ ಅರ್ಜಿ ಪ್ರಕ್ರಿಯೆಯ ಸಮಯದಲ್ಲಿ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ವಿಷಯದ ಬಗ್ಗೆ ಆಂತರಿಕ ತನಿಖೆಯನ್ನು ಪೂರ್ಣಗೊಳಿಸಿದ ನಂತರ ಪಿಸಿಬಿ ಆಗಸ್ಟ್ 6 ರಂದು ಈ ನಿರ್ಧಾರ ಪ್ರಕಟಿಸಿದೆ.

3 / 5
27 ವರ್ಷದ ಹಮ್ಜಾ ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದರು. ಹೀಗಾಗಿ ಅವರನ್ನು ಇತ್ತೀಚಿನ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಪಾಕಿಸ್ತಾನದ ಟೆಸ್ಟ್ ತಂಡದಲ್ಲಿ ಸೇರಿಸಿಕೊಳ್ಳಬಹುದು ಎಂಬ ವರದಿಗಳಿದ್ದವು. ಆದರೆ, ವೀಸಾ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿ ಸಿಕ್ಕಿಬಿದ್ದ ಹಮ್ಜಾ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.

4 / 5
ಈ ಕ್ರಮದ ಬಗ್ಗೆ ಪ್ರಕಟಣೆ ಹೊರಡಿಸಿರುವ ಪಿಸಿಬಿ, ಅಧಿಕೃತ ದಾಖಲೆಗಳಲ್ಲಿ ತಪ್ಪಾದ ಅಥವಾ ಅಪೂರ್ಣ ಮಾಹಿತಿಯನ್ನು ಒದಗಿಸುವ ಬಗ್ಗೆ ಶೂನ್ಯ ಸಹಿಷ್ಣುತೆ ನೀತಿಯನ್ನು ಪಿಸಿಬಿ ಹೊಂದಿದೆ. ಪಾಕಿಸ್ತಾನ ಕ್ರಿಕೆಟ್‌ನೊಂದಿಗೆ ಸಂಬಂಧ ಹೊಂದಿರುವ ಪ್ರತಿಯೊಬ್ಬರೂ ಸಮಗ್ರತೆ ಮತ್ತು ವೃತ್ತಿಪರತೆಯನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ತಪ್ಪು ಮಾಹಿತಿ ಒದಗಿಸುವುದು, ಮಾಹಿತಿಯನ್ನು ಮರೆಮಾಚುವುದನ್ನು ಪಿಸಿಬಿ ಬಹಳ ಗಂಭೀರವಾಗಿ ಪರಿಗಣಿಸುತ್ತದೆ ಎಂದಿದೆ.

5 / 5
ಹಮ್ಜಾ ನಜರ್ ಒಬ್ಬ ಆಫ್-ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ಆಗಿದ್ದು,16 ಪ್ರಥಮ ದರ್ಜೆ ಪಂದ್ಯಗಳಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳನ್ನು ಒಳಗೊಂಡಂತೆ 748 ರನ್ ಗಳಿಸಿದ್ದಾರೆ. ಬೌಲಿಂಗ್‌ನಲ್ಲಿ 26 ವಿಕೆಟ್‌ಗಳನ್ನು ಪಡೆದಿದ್ದಾರೆ ಮತ್ತು ಇನ್ನಿಂಗ್ಸ್‌ನಲ್ಲಿ ಎರಡು ಬಾರಿ ಐದು ವಿಕೆಟ್‌ಗಳನ್ನು ಪಡೆದಿದ್ದಾರೆ. ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅವರು 15 ಪಂದ್ಯಗಳನ್ನು ಆಡಿದ್ದು, 18 ವಿಕೆಟ್‌ಗಳ ಜೊತೆಗೆ ಒಂದು ಅರ್ಧಶತಕವನ್ನು ಬಾರಿಸಿದ್ದಾರೆ.

Loading...
Unable to load recommendations.
Follow Us