AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACC: ಜಯ್ ಶಾ ಸ್ಥಾನಕ್ಕೆ ಪಾಕ್ ಕ್ರಿಕೆಟ್ ಮಂಡಳಿಯ ಹಾಲಿ ಅಧ್ಯಕ್ಷರ ಆಯ್ಕೆ

Asian Cricket Council: ಮೊಹ್ಸಿನ್ ನಖ್ವಿ ಅವರನ್ನು ಎಸಿಸಿಯ ಹೊಸ ಅಧ್ಯಕ್ಷರನ್ನಾಗಿ ಮಾಡಬಹುದು ಎಂದು ಹೇಳಲಾಗುತ್ತಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿರುವ ನಖ್ವಿ ಅವರನ್ನು ಸರದಿ ನೀತಿಯ ಅಡಿಯಲ್ಲಿ ಎಸಿಸಿಯ ಹೊಸ ಅಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jul 30, 2024 | 6:33 PM

Share
ಪ್ರಸ್ತುತ ಬಿಸಿಸಿಐ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಜಯ್​ ಶಾ, ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ ಎಂಬ ಸುದ್ದಿಗೆ ಇತ್ತೀಚಿನ ದಿನಗಳಲ್ಲಿ ವೇಗ ಸಿಕ್ಕಿದೆ. ಜಯ್​ ಶಾ, ಪ್ರಸ್ತುತ ಬಿಸಿಸಿಐ ಕಾರ್ಯದರ್ಶಿ ಹುದ್ದೆಯ ಜೊತೆಗೆ 2021 ರಿಂದ ಏಷ್ಯನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರೂ ಆಗಿದ್ದಾರೆ.

1 / 6
ಆದರೆ ಈ ವರ್ಷಾಂತ್ಯಕ್ಕೆ ಏಷ್ಯನ್ ಕ್ರಿಕೆಟ್ ಮಂಡಳಿಯಲ್ಲಿ  ಅವರ ಅಧಿಕಾರಾವಧಿ ಮುಗಿಯಲಿದೆ. ಇಂತಹ ಪರಿಸ್ಥಿತಿಯಲ್ಲಿ, ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಹೊಸ ಅಧ್ಯಕ್ಷರಾಗಿ ಜಯ್ ಶಾ ಅವರ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಈ ರೇಸ್‌ನಲ್ಲಿ ಪಾಕಿಸ್ತಾನದ ಓರ್ವ ಅನುಭವಿ ಮುಂಚೂಣಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

2 / 6
ವರದಿಗಳ ಪ್ರಕಾರ, ಮೊಹ್ಸಿನ್ ನಖ್ವಿ ಅವರನ್ನು ಎಸಿಸಿಯ ಹೊಸ ಅಧ್ಯಕ್ಷರನ್ನಾಗಿ ಮಾಡಬಹುದು ಎಂದು ಹೇಳಲಾಗುತ್ತಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪ್ರಸ್ತುತ ಅಧ್ಯಕ್ಷರಾಗಿರುವ ನಖ್ವಿ ಅವರನ್ನು ಸರದಿ ನೀತಿಯ ಅಡಿಯಲ್ಲಿ ಎಸಿಸಿಯ ಹೊಸ ಅಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

3 / 6
ಇತ್ತೀಚೆಗಷ್ಟೇ ಎಸಿಸಿ ಸಭೆಯಲ್ಲಿ ಅಧ್ಯಕ್ಷ ಸ್ಥಾನದ ವಿಷಯ ಚರ್ಚೆಯಾಗಿದ್ದು, ನಖ್ವಿ ಮುಂದಿನ ಅಧ್ಯಕ್ಷರಾಗುವ ಸ್ಪರ್ಧೆಯಲ್ಲಿದ್ದಾರೆ. ಎಸಿಸಿ ಈ ವರ್ಷದ ಕೊನೆಯಲ್ಲಿ ಸಭೆ ಸೇರಲಿದ್ದು, ಅಲ್ಲಿ ಈ ವಿಷಯದ ಬಗ್ಗೆ ನಿರ್ಧಾರವನ್ನು ನೀಡಬಹುದು.

4 / 6
ಜಯ್ ಷಾ ಅವರ ಅಧಿಕಾರಾವಧಿಯಲ್ಲಿ, ಎಸಿಸಿ 2022 ರಲ್ಲಿ ಟಿ20 ಸ್ವರೂಪದಲ್ಲಿ ಏಷ್ಯಾಕಪ್ ಅನ್ನು ಮತ್ತು 2023 ರಲ್ಲಿ ಏಕದಿನ ಸ್ವರೂಪದಲ್ಲಿ ಏಷ್ಯಾಕಪ್ ಅನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಇದಲ್ಲದೇ, ಮುಂದಿನ ಎರಡು ಏಷ್ಯಾಕಪ್‌ಗಳ ಆತಿಥ್ಯದ ಬಗ್ಗೆಯೂ ಇತ್ತೀಚೆಗೆ ಚರ್ಚೆ ನಡೆದಿದ್ದು, ಅದರ ಪ್ರಕಾರ 2025ರ ಪುರುಷರ ಏಷ್ಯಾಕಪ್‌ಗೆ ಭಾರತ ಆತಿಥ್ಯ ವಹಿಸಲಿದೆ.

5 / 6
ಈ ಟೂರ್ನಿ 20 ಓವರ್‌ ಮಾದರಿಯಲ್ಲಿ ನಡೆಯಲಿದ್ದು, ಇದರಲ್ಲಿ 6 ತಂಡಗಳು ಭಾಗವಹಿಸಲಿವೆ. ಅದೇ ಸಮಯದಲ್ಲಿ, 2027 ರ ಏಷ್ಯಾಕಪ್ ಅನ್ನು ಬಾಂಗ್ಲಾದೇಶದಲ್ಲಿ ಆಯೋಜಿಸಲಾಗುತ್ತಿದ್ದು,  2027ರ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!

‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ

ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ

ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ

ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು