AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್​ ವಿಶ್ವ ದಾಖಲೆ ಮುರಿದ ಪರ್ತ್​ ಸ್ಕಾಚರ್ಸ್​

T20 World Records: ಟಿ20 ಲೀಗ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಆಸ್ಟ್ರೇಲಿಯಾದ ಟಿ20 ಲೀಗ್ ತಂಡ ಪರ್ತ್​ ಸ್ಕಾಚರ್ಸ್. ಪರ್ತ್ ಪಡೆಯ ಅಮೋಘ ಪ್ರದರ್ಶನದೊಂದಿಗೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ದಾಖಲೆ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

ಝಾಹಿರ್ ಯೂಸುಫ್
|

Updated on: Jan 26, 2026 | 9:56 AM

Share
ಟಿ20 ಲೀಗ್ ಕ್ರಿಕೆಟ್​ನಲ್ಲಿ ಪರ್ತ್​ ಸ್ಕಾಚರ್ಸ್ (Perth Scorchers)  ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಮುಂಬೈ ಇಂಡಿಯನ್ಸ್ (MI) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳ ಭರ್ಜರಿ ದಾಖಲೆಗಳನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. 

1 / 6
ಬಿಗ್ ಬ್ಯಾಷ್ ಲೀಗ್​ನ 15ನೇ ಸೀಸನ್​ನಲ್ಲಿ ಪರ್ತ್​ ಸ್ಕಾಚರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಫೈನಲ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ನೀಡಿದ 133 ರನ್​ಗಳ ಗುರಿಯನ್ನು ಪರ್ತ್​ ಸ್ಕಾಚರ್ಸ್ ತಂಡವು ಕೇವಲ 17.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಪರ್ತ್ ಪಡೆ 6ನೇ ಬಾರಿ ಬಿಗ್ ಬ್ಯಾಷ್​ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

2 / 6
ಇದರೊಂದಿಗೆ ಲೀಗ್ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ತಂಡವೆಂಬ ಖ್ಯಾತಿ ಪರ್ತ್​ ಸ್ಕಾಚರ್ಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಹೆಸರಿನಲ್ಲಿತ್ತು.

3 / 6
ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು. 2010 ರಲ್ಲಿ ಮೊದಲ ಬಾರಿ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದ್ದ ಸಿಎಸ್​ಕೆ ಆ ಬಳಿಕ 2011, 2018, 2021, 2023 ರಲ್ಲಿ ಚಾಂಪಿಯನ್ ಪಟ್ಟಕ್ಕೇರಿದ್ದರು.

4 / 6
ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಕೂಡ ಐಪಿಎಲ್​ನಲ್ಲಿ 5 ಬಾರಿ ಟ್ರೋಫಿ ಎತ್ತಿ ಹಿಡಿದಿದ್ದರು. 2013, 2015, 2017, 2019, 2020 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಮುಂಬೈ ಇಂಡಿಯನ್ಸ್ ಒಂದೇ ಲೀಗ್​ನಲ್ಲಿ 5 ಬಾರಿ ಪ್ರಶಸ್ತಿ ಗೆದ್ದ ತಂಡ ಎನಿಸಿಕೊಂಡಿತ್ತು.

5 / 6
ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ 6ನೇ ಬಾರಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಪರ್ತ್​ ಸ್ಕಾಚರ್ಸ್ ತಂಡ ಯಶಸ್ವಿಯಾಗಿದೆ. 2013–14, 2014–15, 2016–17, 2021–22, 2022–23 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಪರ್ತ್ ಪಡೆ ಇದೀಗ 2025-26ರ ಸೀಸನ್​ನಲ್ಲೂ ಕಿರೀಟ ಮುಡಿಗೇರಿಸಿಕೊಂಡಿದೆ. ಈ ಮೂಲಕ ಟಿ20 ಲೀಗ್ ಟೂರ್ನಿಯಲ್ಲಿ ಅತ್ಯಧಿಕ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ತಂಡವೆಂಬ ವಿಶ್ವ ದಾಖಲೆಯನ್ನು ಪರ್ತ್​ ಸ್ಕಾಚರ್ಸ್ ತನ್ನದಾಗಿಸಿಕೊಂಡಿದೆ.

6 / 6
Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ

ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ

ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?

ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ

ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು

ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ

ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು

ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು

‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?

ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ