ಸಾಲ್ಟ್ ಸಿಡಿಲಬ್ಬರ… ದಿ ಹಂಡ್ರೆಡ್ನಲ್ಲಿ ಭರ್ಜರಿ ದಾಖಲೆ
Phil Salt: ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿದಿದ್ದ ಫಿಲ್ ಸಾಲ್ಟ್ 13 ಇನಿಂಗ್ಸ್ಗಳಲ್ಲಿ 403 ರನ್ ಬಾರಿಸಿ ಅಬ್ಬರಿಸಿದ್ದರು. ಇದೀಗ ದಿ ಹಂಡ್ರೆಡ್ ಲೀಗ್ನಲ್ಲಿ ಸಾಲ್ಟ್ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ಅಲ್ಲದೆ ಮೊದಲ ಪಂದ್ಯದಲ್ಲೇ ಭರ್ಜರಿ ಅರ್ಧಶತಕ ಬಾರಿಸಿ ಮಿಂಚಿದ್ದಾರೆ.
Updated on: Aug 07, 2025 | 8:54 AM

ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ನಲ್ಲಿ (The Hundred) ಫಿಲ್ ಸಾಲ್ಟ್ (Phil Salt) ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಈ ಟೂರ್ನಿಯ ಐದನೇ ಪಂದ್ಯದ ಮೂಲಕ ಸಾಲ್ಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ದಿ ಹಂಡ್ರೆಡ್ ಲೀಗ್ನಲ್ಲಿ ಟಾಪ್ ರನ್ ಸರದಾರನಾಗುವ ಮೂಲಕ ಎಂಬುದು ವಿಶೇಷ.

ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಟೂರ್ನಿಯ 5ನೇ ಪಂದ್ಯದಲ್ಲಿ ಓವಲ್ ಇನ್ವಿನ್ಸಿಬಲ್ಸ್ ಹಾಗೂ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಓವಲ್ ಇನ್ವಿನ್ಸಿಬಲ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಕ್ಕೆ ಫಿಲ್ ಸಾಲ್ಟ್ ಉತ್ತಮ ಆರಂಭ ಒದಗಿಸಿದ್ದರು.

ಆರಂಭಿಕನಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ ಕೇವಲ 32 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 1 ಫೋರ್ನೊಂದಿಗೆ 41 ರನ್ ಬಾರಿಸಿದರು. 41 ರನ್ಗಳೊಂದಿಗೆ ದಿ ಹಂಡ್ರೆಡ್ ಲೀಗ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಫಿಲ್ ಸಾಲ್ಟ್ ಪಾಲಾಯಿತು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಸದರ್ನ್ ಬ್ರೇವ್ ತಂಡದ ನಾಯಕ ಜೇಮ್ಸ್ ವಿನ್ಸ್ ಹೆಸರಿನಲ್ಲಿತ್ತು.

ಇದೀಗ ಜೇಮ್ಸ್ ವಿನ್ಸ್ ಅವರನ್ನು ಹಿಂದಿಕ್ಕಿ ಫಿಲ್ ಸಾಲ್ಟ್ ಅಗ್ರಸ್ಥಾನಕ್ಕೇರಿದ್ದಾರೆ. ದಿ ಹಂಡ್ರೆಡ್ ಲೀಗ್ನಲ್ಲಿ ಈವರೆಗೆ 37 ಇನಿಂಗ್ಸ್ ಆಡಿರುವ ಸಾಲ್ಟ್ 7 ಅರ್ಧಶತಕಗಳೊಂದಿಗೆ ಒಟ್ಟು 1036 ರನ್ಗಳಿಸಿದ್ದಾರೆ. ಈ ಮೂಲಕ ದಿ ಹಂಡ್ರೆಡ್ ಲೀಗ್ನಲ್ಲಿ ಸಾವಿರ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಜೇಮ್ಸ್ ವಿನ್ಸ್ ಅವರನ್ನು ಹಿಂದಿಕ್ಕಿ ಫಿಲ್ ಸಾಲ್ಟ್ ಅಗ್ರಸ್ಥಾನಕ್ಕೇರಿದ್ದಾರೆ. ದಿ ಹಂಡ್ರೆಡ್ ಲೀಗ್ನಲ್ಲಿ ಈವರೆಗೆ 36 ಇನಿಂಗ್ಸ್ ಆಡಿರುವ ಸಾಲ್ಟ್ 7 ಅರ್ಧಶತಕಗಳೊಂದಿಗೆ ಒಟ್ಟು 995 ರನ್ಗಳಿಸಿದ್ದಾರೆ. ಈ ಮೂಲಕ ದಿ ಹಂಡ್ರೆಡ್ ಲೀಗ್ನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಫಿಲ್ ಸಾಲ್ಟ್ ಹೆಸರಿಗೆ ಸೇರ್ಪಡೆಯಾದ ಈ ದಾಖಲೆಯ ಹೊರತಾಗಿಯೂ ಈ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು ಸೋಲನುಭವಿಸಿದೆ. ಮ್ಯಾಂಚೆಸ್ಟರ್ ಒರಿಜಿನಲ್ಸ್ ನೀಡಿದ 131 ರನ್ಗಳ ಟಾರ್ಗೆಟ್ ಬೆನ್ನತ್ತಿದ ಸದರ್ನ್ ಬ್ರೇವ್ ತಂಡವು 99 ಎಸೆತಗಳಲ್ಲಿ ಗುರಿ ಮುಟ್ಟುವ ಮೂಲಕ 1 ವಿಕೆಟ್ನ ರೋಚಕ ಜಯ ಸಾಧಿಸಿದೆ.
