ದಿ ಹಂಡ್ರೆಡ್​ನಲ್ಲಿ ಸಾವಿರ… ಹೊಸ ಇತಿಹಾಸ ನಿರ್ಮಿಸಿದ ಫಿಲ್ ಸಾಲ್ಟ್

Updated on: Aug 10, 2025 | 10:53 AM

The Hundred League: 100 ಎಸೆತಗಳ ಟೂರ್ನಿ ದಿ ಹಂಡ್ರೆಡ್ ಲೀಗ್ ಶುರುವಾಗಿ ಮೂರು ವರ್ಷಗಳು ಕಳೆದಿವೆ. ಇದೀಗ ನಾಲ್ಕನೇ ಸೀಸನ್​ ಮೂಲಕ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಹೊಸ ಇತಿಹಾಸ ರಚಿಸಿದ್ದಾರೆ. ಅದು ಸಹ ಟೂರ್ನಿಯಲ್ಲಿ ಸಾವಿರ ರನ್ ಪೂರೈಸುವ ಮೂಲಕ. ಅಂದರೆ ದಿ ಹಂಡ್ರೆಡ್​ ಲೀಗ್​ನಲ್ಲಿ 1000 ರನ್​ ಕಲೆಹಾಕಿದ ಏಕೈಕ ಬ್ಯಾಟರ್ ಆಗಿ ಫಿಲ್ ಸಾಲ್ಟ್ ಹೊರಹೊಮ್ಮಿದ್ದಾರೆ.

1 / 6
ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್​ನಲ್ಲಿ (The Hundred) ಫಿಲ್ ಸಾಲ್ಟ್ (Phil Salt) ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಈ ಟೂರ್ನಿಯ ಐದನೇ ಪಂದ್ಯದ ಮೂಲಕ ಸಾಲ್ಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ದಿ ಹಂಡ್ರೆಡ್ ಲೀಗ್​ನಲ್ಲಿ ಟಾಪ್ ರನ್ ಸರದಾರನಾಗುವ ಮೂಲಕ ಎಂಬುದು ವಿಶೇಷ.

2 / 6
ಲಂಡನ್​ನ ಕೆನ್ನಿಂಗ್ಟನ್ ಓವಲ್​​ ಮೈದಾನದಲ್ಲಿ ನಡೆದ ಈ ಟೂರ್ನಿಯ  5ನೇ ಪಂದ್ಯದಲ್ಲಿ ಓವಲ್ ಇನ್ವಿನ್ಸಿಬಲ್ಸ್ ಹಾಗೂ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಓವಲ್ ಇನ್ವಿನ್ಸಿಬಲ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಕ್ಕೆ ಫಿಲ್ ಸಾಲ್ಟ್ ಉತ್ತಮ ಆರಂಭ ಒದಗಿಸಿದ್ದರು.

3 / 6
ಆರಂಭಿಕನಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ ಕೇವಲ 32 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 41 ರನ್ ಬಾರಿಸಿದರು. 41 ರನ್​ಗಳೊಂದಿಗೆ ದಿ ಹಂಡ್ರೆಡ್ ಲೀಗ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಫಿಲ್ ಸಾಲ್ಟ್ ಪಾಲಾಯಿತು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಸದರ್ನ್ ಬ್ರೇವ್ ತಂಡದ ನಾಯಕ ಜೇಮ್ಸ್ ವಿನ್ಸ್ ಹೆಸರಿನಲ್ಲಿತ್ತು.

4 / 6
ಇದೀಗ ಜೇಮ್ಸ್​ ವಿನ್ಸ್ ಅವರನ್ನು ಹಿಂದಿಕ್ಕಿ ಫಿಲ್ ಸಾಲ್ಟ್ ಅಗ್ರಸ್ಥಾನಕ್ಕೇರಿದ್ದಾರೆ. ದಿ ಹಂಡ್ರೆಡ್ ಲೀಗ್​ನಲ್ಲಿ ಈವರೆಗೆ 37 ಇನಿಂಗ್ಸ್ ಆಡಿರುವ ಸಾಲ್ಟ್ 7 ಅರ್ಧಶತಕಗಳೊಂದಿಗೆ ಒಟ್ಟು 1036 ರನ್​ಗಳಿಸಿದ್ದಾರೆ. ಈ ಮೂಲಕ ದಿ ಹಂಡ್ರೆಡ್ ಲೀಗ್​ನಲ್ಲಿ ಸಾವಿರ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇದೀಗ ಜೇಮ್ಸ್​ ವಿನ್ಸ್ ಅವರನ್ನು ಹಿಂದಿಕ್ಕಿ ಫಿಲ್ ಸಾಲ್ಟ್ ಅಗ್ರಸ್ಥಾನಕ್ಕೇರಿದ್ದಾರೆ. ದಿ ಹಂಡ್ರೆಡ್ ಲೀಗ್​ನಲ್ಲಿ ಈವರೆಗೆ 36 ಇನಿಂಗ್ಸ್ ಆಡಿರುವ ಸಾಲ್ಟ್ 7 ಅರ್ಧಶತಕಗಳೊಂದಿಗೆ ಒಟ್ಟು 995 ರನ್​ಗಳಿಸಿದ್ದಾರೆ. ಈ ಮೂಲಕ ದಿ ಹಂಡ್ರೆಡ್ ಲೀಗ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
ಇನ್ನು ಫಿಲ್ ಸಾಲ್ಟ್ ಅವರ ಈ ಭರ್ಜರಿ ದಾಖಲೆಯ ಹೊರತಾಗಿಯೂ ಈ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು ಸೋಲನುಭವಿಸಿದೆ. ಮ್ಯಾಂಚೆಸ್ಟರ್ ಒರಿಜಿನಲ್ಸ್ ನೀಡಿದ 129 ರನ್​ಗಳ ಟಾರ್ಗೆಟ್​ ಬೆನ್ನತ್ತಿದ ಓವಲ್ ಇನ್ವಿನ್ಸಿಬಲ್ಸ್ ತಂಡವು 57 ಎಸೆತಗಳಲ್ಲಿ ಗುರಿ ಮುಟ್ಟುವ ಮೂಲಕ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.