ಪಿಯೂಷ್ ಚಾವ್ಲಾ ಭಾರತದ ಪರ ಎಲ್ಲಾ ಮೂರು ಮಾದರಿಗಳಲ್ಲಿ ಕ್ರಿಕೆಟ್ ಆಡಿದ್ದಾರೆ. 2006 ರಲ್ಲಿ ಟೀಂ ಇಂಡಿಯಾ ಪರ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಆದರೆ ಕಳೆದ 12 ವರ್ಷಗಳಿಂದ ಟೀಂ ಇಂಡಿಯಾದಲ್ಲಿ ಚಾವ್ಲಾಗೆ ಅವಕಾಶ ಸಿಕ್ಕಿಲ್ಲ. ಭಾರತದ ಪರ ಚಾವ್ಲಾ 2 ಟೆಸ್ಟ್, 25 ಏಕದಿನ ಮತ್ತು 7 ಟಿ20 ಪಂದ್ಯಗಳನ್ನು ಆಡಿದ್ದಾರೆ.