IPL 2025: ರಾಹುಲ್ ದ್ರಾವಿಡ್ KKR ತಂಡದ ಮೆಂಟರ್?

|

Updated on: Jul 09, 2024 | 3:12 PM

Rahul Dravdi - Gautam Gambhir: ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್ ಕೆಳಗಿಳಿದಿದ್ದಾರೆ. ಅತ್ತ ನೂತನ ಕೋಚ್ ಆಗಿ ಹೊಸ ಇನಿಂಗ್ಸ್​ ಆರಂಭಿಸಲು ಗೌತಮ್ ಗಂಭೀರ್ ತುದಿಗಾಲಲ್ಲಿ ನಿಂತಿದ್ದಾರೆ. ಇಲ್ಲಿ ಕೆಕೆಆರ್ ತಂಡದ ಮೆಂಟರ್ ಆಗಿದ್ದ ಗಂಭೀರ್ ಟೀಮ್ ಇಂಡಿಯಾಗೆ ಹೋಗುತ್ತಿದ್ದರೆ, ಟೀಮ್ ಇಂಡಿಯಾದಿಂದ ಹೊರಬಂದಿರುವ ದ್ರಾವಿಡ್ ಅವರನ್ನು ಸೆಳೆಯಲು ಕೆಕೆಆರ್ ಮುಂದಾಗಿರುವುದು ವಿಶೇಷ.

1 / 5
ಟೀಮ್ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರ ಮುಂದಿನ ನಡೆಯೇನು? ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಐಪಿಎಲ್ ಮೆಂಟರ್​. ಅಂದರೆ ದ್ರಾವಿಡ್ ಅವರನ್ನು ಮೆಂಟರ್ ಆಗಿ ನೇಮಿಸಿಕೊಳ್ಳಲು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಬಯಸಿದೆ ಎಂದು ವರದಿಯಾಗಿದೆ.

2 / 5
ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಭಾರತ ತಂಡದ ಮುಖ್ಯ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ. ಇದರ ಬೆನ್ನಲ್ಲೇ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ಫ್ರಾಂಚೈಸಿಯು ಟೀಮ್ ಇಂಡಿಯಾದ ಮಾಜಿ ಕೋಚ್ ದ್ರಾವಿಡ್ ಅವರನ್ನು ಮೆಂಟರ್ ಹುದ್ದೆಗಾಗಿ ಸಂಪರ್ಕಿಸಿದೆ ಎಂದು ತಿಳಿದು ಬಂದಿದೆ.

3 / 5
ಈ ಹಿಂದೆ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಈ ಹುದ್ದೆಯು ಅವರ ಪಾಲಿಗೆ ಹೊಸತೇನಲ್ಲ. ಅದರಲ್ಲೂ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಯಶಸ್ಸಿನ ಶಿಖರಕ್ಕೇರಿಸಿರುವ ಕಾರಣ ದ್ರಾವಿಡ್ ಅವರನ್ನು ಮೆಂಟರ್ ಆಗಿ ನೇಮಕ ಮಾಡಲು ಕೆಕೆಆರ್ ಹೆಚ್ಚಿನ ಆಸಕ್ತಿ ಹೊಂದಿದೆ.

4 / 5
ಇದಾಗ್ಯೂ ರಾಹುಲ್ ದ್ರಾವಿಡ್ ಅವರ ನಿರ್ಧಾರವೇನು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಒಂದು ವೇಳೆ ಕೆಕೆಆರ್ ಫ್ರಾಂಚೈಸಿಯ ಆಫರ್ ಒಪ್ಪಿದರೆ ಐಪಿಎಲ್ 2025 ರಲ್ಲಿ ದಿ ಗ್ರೇಟ್ ವಾಲ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾರ್ಗದರ್ಶಕರಾಗಿ ಕಾಣಿಸಿಕೊಳ್ಳಲಿದ್ದಾರೆ.

5 / 5
ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 89 ಪಂದ್ಯಗಳನ್ನಾಡಿರುವ ರಾಹುಲ್ ದ್ರಾವಿಡ್ 11 ಅರ್ಧಶತಕಗಳೊಂದಿಗೆ ಒಟ್ಟು 2174 ರನ್ ಕಲೆಹಾಕಿದ್ದಾರೆ. ಹಾಗೆಯೇ 2014 ಮತ್ತು 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮೆಂಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿ ಕೆಕೆಆರ್ ತಂಡದ ಹೊಸ ಮಾರ್ಗದರ್ಶಕರಾಗಿ ರಾಹುಲ್ ದ್ರಾವಿಡ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

Published On - 3:10 pm, Tue, 9 July 24