IPL 2026: ಐಪಿಎಲ್ ಪಾಯಿಂಟ್ಸ್ ಟೇಬಲ್ನಲ್ಲಿ ಮಹತ್ವದ ಬದಲಾವಣೆ
IPL 2026 Points table: ಇಂಡಿಯನ್ ಪ್ರೀಮಿಯರ್ ಲೀಗ್ನ 29ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವನ್ನು ಪಂಜಾಬ್ ಕಿಂಗ್ಸ್ (PBKS) ತಂಡವು 54 ರನ್ಗಳಿಂದ ಸೋಲಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಐಪಿಎಲ್ ಪಾಯಿಂಟ್ಸ್ ಟೇಬಲ್ನಲ್ಲೂ ಮಹತ್ದದ ಬದಲಾವಣೆಯಾಗಿದೆ.
Updated on:Apr 20, 2026 | 12:17 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 29 ಪಂದ್ಯಗಳು ಮುಗಿದಿವೆ. ಈ ಇಪ್ಪತ್ತೊಂದು ಪಂದ್ಯಗಳಲ್ಲಿ ಕೊನೆಯ ಮ್ಯಾಚ್ ಆಡಿರುವುದು ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು 54 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಗಿದ್ರೆ ನೂತನ ಪಾಯಿಂಟ್ಸ್ ಟೇಬಲ್ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡೋಣ...

1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 5 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇನ್ನು ಕೆಕೆಆರ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಅಂದರೆ ಒಟ್ಟು 6 ಮ್ಯಾಚ್ಗಳ ಮೂಲಕ ಪಂಜಾಬ್ ಕಿಂಗ್ಸ್ 11 ಅಂಕಗಳನ್ನು ಪಡೆದುಕೊಂಡಿದ್ದು, ಈ ಮೂಲಕ +1.420 ನೆಟ್ ರನ್ ರೇಟ್ನೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

2- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ತಂಡವು ಈವರೆಗೆ ಆಡಿರುವುದು 6 ಪಂದ್ಯಗಳನ್ನು ಮಾತ್ರ. ಈ ಆರು ಮ್ಯಾಚ್ಗಳಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೆ, ಸಿಎಸ್ಕೆ, ಎಲ್ಎಸ್ಜಿ, ಎಸ್ಆರ್ಹೆಚ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಈ ಮೂಲಕ 8 ಅಂಕ ಹಾಗೂ +1.171 ನೆಟ್ ರನ್ ರೇಟ್ನೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ ದ್ವಿತೀಯ ಸ್ಥಾನವನ್ನು ಅಲಂಕರಿಸಿದೆ.

3- ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಈವರೆಗೆ 6 ಪಂದ್ಯಗಳನ್ನಾಡಿದೆ. ಈ ವೇಳೆ ಸಿಎಸ್ಕೆ, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಹಾಗೂ ಆರ್ಸಿಬಿ ವಿರುದ್ಧ ಜಯ ಸಾಧಿಸಿದೆ. ಇನ್ನು ಕೆಕೆಆರ್ ಹಾಗೂ ಎಸ್ಆರ್ಹೆಚ್ ವಿರುದ್ಧ ಸೋಲು ಕಂಡಿದೆ. ಈ ಮೂಲಕ ಒಟ್ಟು 8 ಅಂಕಗಳೊಂದಿಗೆ +0.599 ನೆಟ್ ರನ್ ರೇಟ್ ಪಡೆಯುವ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಅಲಂಕರಿಸಿದೆ.

4- ಸನ್ರೈಸರ್ಸ್ ಹೈದರಾಬಾದ್: ಇಶಾನ್ ಕಿಶನ್ ನಾಯಕತ್ವದಲ್ಲಿ 6 ಪಂದ್ಯಗಳನ್ನಾಡಿರುವ ಸನ್ರೈಸರ್ಸ್ ಹೈದರಾಬಾದ್ ತಂಡವು ಈವರೆಗೆ 3 ಮೂರು ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 6 ಅಂಕಗಳನ್ನು ಪಡೆದಿರುವ ಎಸ್ಆರ್ಹೆಚ್ +0.566 ನೆಟ್ ರನ್ ರೇಟ್ನೊಂದಿಗೆ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

5- ಡೆಲ್ಲಿ ಕ್ಯಾಪಿಟಲ್ಸ್: ಅಕ್ಷರ್ ಪಟೇಲ್ ಮುಂದಾಳತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈವರೆಗೆ 5 ಮ್ಯಾಚ್ಗಳನ್ನು ಆಡಿದ್ದು, ಈ ವೇಳೆ 3 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದರಂತೆ ಇದೀಗ ಒಟ್ಟು 6 ಅಂಕಗಳು ಹಾಗೂ +0.310 ನೆಟ್ ರೇಟ್ ಹೊಂದಿರುವ ಡಿಸಿ ಪಡೆ ಪಾಯಿಂಟ್ಸ್ ಟೇಬಲ್ನಲ್ಲಿ ಐದನೇ ಸ್ಥಾನದಲ್ಲಿದೆ.

ಇನ್ನು ಗುಜರಾತ್ ಟೈಟಾನ್ಸ್ 6ನೇ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 7ನೇ ಸ್ಥಾನ ಪಡೆದುಕೊಂಡಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಕ್ರಮವಾಗಿ 8ನೇ ಮತ್ತು 9ನೇ ಸ್ಥಾನಗಳಲ್ಲಿ ಕಾಣಿಸಿಕೊಂಡಿದೆ. ಇನ್ನು ಈವರೆಗೆ ಒಂದು ಪಂದ್ಯ ಮಾತ್ರ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
Published On - 12:16 pm, Mon, 20 April 26




