MI vs RR: ಮೊದಲ ಓವರ್​ನಲ್ಲಿ ಸಿಕ್ಸರ್; ರೋಹಿತ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್

Updated on: May 24, 2026 | 6:10 PM

Yashasvi Jaiswal Shatters Rohit Sharma's Record: ಐಪಿಎಲ್ 2026 ಪ್ಲೇಆಫ್‌ನ ನಾಲ್ಕನೇ ಸ್ಥಾನಕ್ಕಾಗಿ ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಕೆಕೆಆರ್ ಪೈಪೋಟಿ ನಡೆಸುತ್ತಿವೆ. ಮುಂಬೈ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ನ ಯಶಸ್ವಿ ಜೈಸ್ವಾಲ್ 27 ರನ್ ಗಳಿಸಿ, ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ರೋಹಿತ್ ಶರ್ಮಾ ಅವರ ದೊಡ್ಡ ದಾಖಲೆಯನ್ನು ಮುರಿದರು.

1 / 5
ಐಪಿಎಲ್ 2026 ರ ಪ್ಲೇಆಫ್‌ನಲ್ಲಿ ನಾಲ್ಕನೇ ಸ್ಥಾನಕ್ಕಾಗಿ ಮೂರು ತಂಡಗಳು ಪೈಪೋಟಿ ನಡೆಸುತ್ತಿವೆ. ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಕೆಕೆಆರ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಇಂದಿನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಸೋತರೆ, ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳಿಗೆ ಪ್ಲೇಆಫ್ ಬಾಗಿಲು ತೆರೆಯಲಿದೆ (PC- IPL).

2 / 5
ಹೀಗಾಗಿ ಮುಂಬೈ ವಿರುದ್ಧದ ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿರಾಶಾದಾಯಕ ಆರಂಭ ಪಡೆಯಿತು. ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಬೇಗನೇ ಔಟಾದರು. ಯಶಸ್ವಿ ಜೈಸ್ವಾಲ್ 17 ಎಸೆತಗಳಲ್ಲಿ 27 ರನ್ ಗಳಿಸಿ, 3 ಸಿಕ್ಸರ್ ಮತ್ತು 1 ಬೌಂಡರಿ ಬಾರಿಸಿ ಔಟಾದರೆ, ವೈಭವ್ ಕೇವಲ 4 ರನ್​ಗೆ ಔಟಾದರು (PC- IPL).

3 / 5
ಆದಾಗ್ಯೂ ಯಶಸ್ವಿ ಜೈಸ್ವಾಲ್ ಆಡಿದ 27 ರನ್​ಗಳ ಇನ್ನಿಂಗ್ಸ್‌ನಲ್ಲಿ ಹೊಡೆದ ಮೂರು ಸಿಕ್ಸರ್‌ಗಳು ವಿಶೇಷ ದಾಖಲೆಗೆ ಸಾಕ್ಷಿಯಾದವು. ಈ ಸಿಕ್ಸರ್‌ಗಳೊಂದಿಗೆ ಜೈಸ್ವಾಲ್,  ರೋಹಿತ್ ಶರ್ಮಾ ಅವರ ದೊಡ್ಡ ದಾಖಲೆಯನ್ನು ಮುರಿದರು. ದೀಪಕ್ ಚಾಹರ್ ಬೌಲ್ ಮಾಡಿದ ಇನ್ನಿಂಗ್ಸ್​ನ ಮೊದಲ ಓವರ್‌ನ ಐದನೇ ಎಸೆತದಲ್ಲಿ ಜೈಸ್ವಾಲ್ ಸಿಕ್ಸರ್ ಬಾರಿಸಿದರು (PC- IPL).

4 / 5
ಈ ಮೂಲಕ ಇನ್ನಿಂಗ್ಸ್​ನ ಮೊದಲ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್​ಗಳ ಪಟ್ಟಿಯಲ್ಲಿ ರೋಹಿತ್ ದಾಖಲೆ ಮುರಿದರು. ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ 14 ನೇ ಬಾರಿಗೆ ಈ ಸಾಧನೆ ಮಾಡಿದ್ದಾರೆ. ರೋಹಿತ್ ಶರ್ಮಾ ಈ ಹಿಂದೆ ಮೊದಲ ಓವರ್‌ನಲ್ಲಿ 13 ಬಾರಿ ಸಿಕ್ಸರ್ ಬಾರಿಸಿದ್ದರು. ವೀರೇಂದ್ರ ಸೆಹ್ವಾಗ್, ಕ್ರಿಸ್ ಗೇಲ್ ಮತ್ತು ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದು, ತಲಾ 12 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ (PC- IPL).

5 / 5
ಈ ಆವೃತ್ತಿಯಲ್ಲಿ ಲೀಗ್ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ 397 ರನ್ ಗಳಿಸಿದ್ದಾರೆ. ಮೂರು ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ 14 ಇನ್ನಿಂಗ್ಸ್​ಗಳಲ್ಲಿ ಜೈಸ್ವಾಲ್ 48 ಬೌಂಡರಿಗಳು ಮತ್ತು 18 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ ಮೂರನೇ ಸ್ಥಾನದಲ್ಲಿದ್ದಾರೆ (PC- IPL).

Follow Us