AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಹಾಗೂ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆದ ಆಟಗಾರರ ಪಟ್ಟಿ ಇಲ್ಲಿದೆ

Asia Cup 2025 India Squad: ಏಷ್ಯಾಕಪ್​​ ಟೂರ್ನಿಗೆ 15 ಸದಸ್ಯರುಗಳ ಟೀಮ್ ಇಂಡಿಯಾವನ್ನು ಹೆಸರಿಸಲಾಗಿದೆ. 15 ಸದಸ್ಯರುಗಳಲ್ಲಿ 2024 ರಲ್ಲಿ ಟಿ20 ವಿಶ್ವಕಪ್ ಆಡಿದ 8 ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟಿ20 ವಿಶ್ವಕಪ್ ಹಾಗೂ ಏಷ್ಯಾಕಪ್​ ತಂಡಗಳಲ್ಲಿ ಸ್ಥಾನ ಪಡೆಯುವಲ್ಲಿ ಎಂಟು ಆಟಗಾರರು ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Aug 21, 2025 | 10:25 AM

Share
ಟಿ20 ವಿಶ್ವಕಪ್​ 2024 ರಲ್ಲಿ ಭಾರತ ತಂಡದ ಪರ ಕಾಣಿಸಿಕೊಂಡ 8 ಆಟಗಾರರು ಮಾತ್ರ ಈ ಬಾರಿಯ ಏಷ್ಯಾಕಪ್​ಗೆ ಆಯ್ಕೆಯಾಗಿದ್ದಾರೆ. ಅಂದರೆ 15 ಸದಸ್ಯರುಗಳಲ್ಲಿ 7 ಮಂದಿಗೆ ಈ ಬಾರಿಯ ಏಷ್ಯಾಕಪ್ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಅದರಂತೆ ಭಾರತ ಟಿ20 ವಿಶ್ವಕಪ್ ತಂಡ ಹಾಗೂ ಏಷ್ಯಾಕಪ್ 2025ರ ತಂಡಗಳಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 11
ಸೂರ್ಯಕುಮಾರ್ ಯಾದವ್: 2024ರ ಟಿ20 ವಿಶ್ವಕಪ್​ನಲ್ಲಿ ಸೂರ್ಯಕುಮಾರ್ ಯಾದವ್ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ 199 ರನ್​ ಕಲೆಹಾಕುವ ಮೂಲಕ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಏಷ್ಯಾಕಪ್​ಗೆ ಭಾರತ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ.

2 / 11
ಶಿವಂ ದುಬೆ: ಟಿ20 ವಿಶ್ವಕಪ್​ನಲ್ಲಿ ಭಾರತದ ಪರ ಆಲ್​ರೌಂಡರ್ ಆಗಿ ಕಾಣಿಸಿಕೊಂಡಿದ್ದ ಶಿವಂ ದುಬೆ 8 ಇನಿಂಗ್ಸ್​ಗಳ ಮೂಲಕ ಒಟ್ಟು 133 ರನ್​ ಕಲೆಹಾಕಿದ್ದರು. ಇದೀಗ ಏಷ್ಯಾಕಪ್​ಗೂ ಆಲ್​ರೌಂಡರ್ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಎಡಗೈ ದಾಂಡಿಗ ಶಿವಂ ದುಬೆ ಯಶಸ್ವಿಯಾಗಿದ್ದಾರೆ. 

3 / 11
ಸಂಜು ಸ್ಯಾಮ್ಸನ್: 2024ರ ಟಿ20 ವಿಶ್ವಕಪ್​ನಲ್ಲಿ ಎರಡನೇ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದರು. ಇದಾಗ್ಯೂ ಅವರಿಗೆ ಒಂದೇ ಒಂದು ಪಂದ್ಯದಲ್ಲಿ ಚಾನ್ಸ್ ಸಿಕ್ಕಿರಲಿಲ್ಲ. ಇದೀಗ ಏಷ್ಯಾಕಪ್​ ತಂಡಕ್ಕೆ ಮುಖ್ಯ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಈ ಬಾರಿಯ ಏಷ್ಯಾಕಪ್​ನಲ್ಲಿ ಸ್ಯಾಮ್ಸನ್ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

4 / 11
ಹಾರ್ದಿಕ್ ಪಾಂಡ್ಯ; ಟಿ20 ವಿಶ್ವಕಪ್ ಗೆಲುವಿನ ರೂವಾರಿಗಳಲ್ಲಿ ಒಬ್ಬೆರೆನಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಕೂಡ ಈ ಬಾರಿಯ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 2024ರ ವಿಶ್ವಕಪ್​ನಲ್ಲಿ ಬ್ಯಾಟಿಂಗ್​ನಲ್ಲಿ 144 ರನ್​ಗಳ ಕೊಡುಗೆ ನೀಡಿದ್ದ ಪಾಂಡ್ಯ ಬೌಲಿಂಗ್​ನಲ್ಲಿ 11 ವಿಕೆಟ್ ಕಬಳಿಸಿದ್ದರು. ಹೀಗಾಗಿ ಈ ಬಾರಿ ಕೂಡ ಹಾರ್ದಿಕ್ ಕಡೆಯಿಂದ ಆಲ್​ರೌಂಡರ್ ಪ್ರದರ್ಶನವನ್ನು ನಿರೀಕ್ಷಿಸಬಹುದು.

5 / 11
ಅಕ್ಷರ್ ಪಟೇಲ್: ಏಷ್ಯಾಕಪ್ ತಂಡದಲ್ಲಿ ಸ್ಪಿನ್ ಆಲ್​ರೌಂಡರ್ ಆಗಿ ಆಯ್ಕೆಯಾಗಿರುವ ಅಕ್ಷರ್ ಪಟೇಲ್ ಕೂಡ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದರು. 8 ಪಂದ್ಯಗಳಿಂದ 9 ವಿಕೆಟ್ ಪಡೆದಿದ್ದ ಅಕ್ಷರ್ ಬ್ಯಾಟಿಂಗ್​ ಮೂಲಕ 92 ರನ್​ಗಳ ಕೊಡುಗೆ ನೀಡಿದ್ದರು. ಹೀಗಾಗಿ ಏಷ್ಯಾಕಪ್​ನಲ್ಲೂ ಅಕ್ಷರ್ ಪಟೇಲ್ ಕಡೆಯಿಂದ ಉತ್ತಮ ಪ್ರದರ್ಶನವನ್ನು ಎದುರು ನೋಡಬಹುದು.

6 / 11
ಕುಲ್ದೀಪ್ ಯಾದವ್: 2024ರ ಟಿ20 ವಿಶ್ವಕಪ್​ನಲ್ಲಿ ಸ್ಪಿನ್ನರ್ ಕುಲ್ದೀಪ್ ಯಾದವ್ ಒಟ್ಟು 5 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ 10 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದರು. ಇದೀಗ ಏಷ್ಯಾಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲೂ ಅನುಭವಿ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.

7 / 11
ಜಸ್​ಪ್ರೀತ್ ಬುಮ್ರಾ: ಟಿ20 ವಿಶ್ವಕಪ್​​ ಫೈನಲ್ ಪಂದ್ಯದ ಗೆಲುವಿನ ರೂವಾರಿ ಜಸ್​ಪ್ರೀತ್ ಬುಮ್ರಾ ಸಹ ಏಷ್ಯಾಕಪ್​ ಮೂಲಕ ಟಿ20 ಕ್ರಿಕೆಟ್​ಗೆ ಮರಳುತ್ತಿದ್ದಾರೆ. ಅಂದರೆ 2024ರ ಟಿ20 ವಿಶ್ವಕಪ್​ನಲ್ಲಿ 8 ಪಂದ್ಯಗಳಿಂದ 15 ವಿಕೆಟ್ ಕಬಳಿಸಿ ಮಿಂಚಿದ್ದ ಬುಮ್ರಾ ಆ ಬಳಿಕ ಭಾರತದ ಪರ ಟಿ20 ಪಂದ್ಯವಾಡಿರಲಿಲ್ಲ. ಇದೀಗ ಏಷ್ಯಾಕಪ್ ಮೂಲಕ ಮತ್ತೆ ಚುಟುಕು ಕ್ರಿಕೆಟ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ.

8 / 11
ಅರ್ಷದೀಪ್ ಸಿಂಗ್: ಟಿ20 ವಿಶ್ವಕಪ್ 2024 ರಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಅರ್ಷದೀಪ್ ಸಿಂಗ್. 8 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದ ಅರ್ಷದೀಪ್ ಒಟ್ಟು 17 ವಿಕೆಟ್ ಪಡೆದು ಮಿಂಚಿದ್ದರು. ಇದೀಗ ಏಷ್ಯಾಕಪ್ ತಂಡದಲ್ಲೂ ಪ್ರಮುಖ ವೇಗಿಯಾಗಿ ಅರ್ಷದೀಪ್ ಸಿಂಗ್ ಸ್ಥಾನ ಪಡೆದಿದ್ದಾರೆ.

9 / 11
ಟಿ20 ವಿಶ್ವಕಪ್ 2024 ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್ ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್ ) , ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

10 / 11
ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

11 / 11

Published On - 10:24 am, Thu, 21 August 25

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್