ICC World Cup 2023: ಏಕದಿನ ವಿಶ್ವಕಪ್​ನಿಂದ 8 ಆಟಗಾರರು ಔಟ್

ICC ODI World Cup 2023: ಈ ಆಟಗಾರರು ವಿಶ್ವಕಪ್​ನಿಂದ ಹೊರಗುಳಿಯಲು ಮುಖ್ಯ ಕಾರಣ ಗಾಯದ ಸಮಸ್ಯೆ. ಅಂದರೆ ವರ್ಲ್ಡ್​ಕಪ್​ ತಂಡದಲ್ಲಿ ಸ್ಥಾನ ಪಡೆದಿದ್ದ ಈ ಆಟಗಾರರು ಆ ಬಳಿಕ ಫಿಟ್​ನೆಸ್ ಕಾರಣದಿಂದಾಗಿ ಹೊರಬಿದ್ದಿದ್ದಾರೆ. ಹೀಗೆ ವಿಶ್ವಕಪ್​ ಟೂರ್ನಿಯಿಂದ ಹೊರಗುಳಿದ 8 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Oct 02, 2023 | 9:23 PM

ಬಹುನಿರೀಕ್ಷಿತ ಏಕದಿನ ವಿಶ್ವಕಪ್​ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿರುವ ಈ ಬಾರಿಯ ವಿಶ್ವಕಪ್​ನಿಂದ ಒಟ್ಟು 8 ಪ್ರಮುಖ ಆಟಗಾರರು ಹೊರಗುಳಿದಿದ್ದಾರೆ.

1 / 10
ಈ ಆಟಗಾರರು ವಿಶ್ವಕಪ್​ನಿಂದ ಹೊರಗುಳಿಯಲು ಮುಖ್ಯ ಕಾರಣ ಗಾಯದ ಸಮಸ್ಯೆ. ಅಂದರೆ ವರ್ಲ್ಡ್​ಕಪ್​ ತಂಡದಲ್ಲಿ ಸ್ಥಾನ ಪಡೆದಿದ್ದ ಈ ಆಟಗಾರರು ಆ ಬಳಿಕ ಫಿಟ್​ನೆಸ್ ಕಾರಣದಿಂದಾಗಿ ಹೊರಬಿದ್ದಿದ್ದಾರೆ. ಹೀಗೆ ವಿಶ್ವಕಪ್​ ಟೂರ್ನಿಯಿಂದ ಹೊರಗುಳಿದ 8 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

2 / 10
1- ಅನ್ರಿಕ್ ನೋಕಿಯಾ: ಸೌತ್ ಆಫ್ರಿಕಾ ತಂಡದ ಬಲಗೈ ವೇಗಿ ಅನ್ರಿಕ್ ನೋಕಿಯಾ ಈ ಬಾರಿಯ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಬೆನ್ನು ನೋವಿನ ಸಮಸ್ಯೆಯ ಕಾರಣ ಇದೀಗ ವರ್ಲ್ಡಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ.

3 / 10
2- ಆಷ್ಟನ್ ಅಗರ್: ಆಸ್ಟ್ರೇಲಿಯಾ ತಂಡದ ಸ್ಪಿನ್ನರ್ ಆಷ್ಟನ್ ಅಗರ್ ಈ ಬಾರಿಯ ವಿಶ್ವಕಪ್ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಎಡಗೈ ಬೆರಳಿನ ಗಾಯದ ಕಾರಣ ಇದೀಗ ಟೂರ್ನಿಯಿಂದ ಹೊರಬಿದ್ದಿದ್ದಾರೆ.

4 / 10
3- ವನಿಂದು ಹಸರಂಗ: ಶ್ರೀಲಂಕಾದ ತಂಡದ ಪ್ರಮುಖ ಆಲ್​ರೌಂಡರ್ ವನಿಂದು ಹಸರಂಗ ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿಲ್ಲ.

5 / 10
4- ಸಿಸಂದಾ ಮಗಲಾ: ಈ ಬಾರಿಯ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಸೌತ್ ಆಫ್ರಿಕಾ ತಂಡದ ವೇಗಿ ಸಿಸಂದಾ ಮಗಲಾ ಅವರ ಮೊಣಕಾಲಿಗೆ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ.

6 / 10
5- ಇಬಾದತ್ ಹೊಸೈನ್: ಬಾಂಗ್ಲಾದೇಶ್ ತಂಡದ ಪ್ರಮುಖ ಬೌಲರ್ ಇಬಾದತ್ ಹೊಸೈನ್ ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ. ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಇಬಾದತ್ ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.

7 / 10
6- ದುಷ್ಮಂತ ಚಮೀರಾ: ಶ್ರೀಲಂಕಾ ತಂಡದ ಬಲಗೈ ವೇಗಿ ದುಷ್ಮಂತ ಚಮೀರಾ ಭುಜದ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಈ ಬಾರಿಯ ವಿಶ್ವಕಪ್​ನಿಂದ ಚಮೀರಾ ಕೂಡ ಹೊರಗುಳಿದಿದ್ದಾರೆ.

8 / 10
7- ನಸೀಮ್ ಶಾ: ಪಾಕಿಸ್ತಾನ್ ತಂಡದ ಯುವ ವೇಗಿ ನಸೀಮ್ ಶಾ ಭುಜದ ಗಾಯಕ್ಕೆ ತುತ್ತಾದ ಕಾರಣ ಏಕದಿನ ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ.

9 / 10
8- ಅಕ್ಷರ್ ಪಟೇಲ್: ವಿಶ್ವಕಪ್​ಗೆ ಆಯ್ಕೆ ಮಾಡಲಾಗಿದ್ದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಅಕ್ಷರ್ ಪಟೇಲ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಏಷ್ಯಾಕಪ್ ಪಂದ್ಯದ ವೇಳೆ ಅವರ ಎಡ ತೊಡೆ ಭಾಗಕ್ಕೆ ಗಾಯವಾಗಿತ್ತು. ಇದೀಗ ಅವರ ಬದಲಿಗೆ ಅಶ್ವಿನ್​ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

10 / 10
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್