ಟೀಮ್ ಇಂಡಿಯಾದಿಂದ 6 ಆಟಗಾರರು ಔಟ್..!

Updated on: Aug 19, 2025 | 3:23 PM

India Squad For Asia Cup 2025: ಸೆಪ್ಟೆಂಬರ್ 9 ರಿಂದ ಶುರುವಾಗಲಿರುವ ಏಷ್ಯಾಕಪ್ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್​ಮನ್ ಗಿಲ್ ಆಯ್ಕೆಯಾಗಿದ್ದಾರೆ. ಅದರಂತೆ ಏಷ್ಯಾಕಪ್​ಗೆ ಆಯ್ಕೆಯಾದ ಭಾರತ ತಂಡ ಈ ಕೆಳಗಿನಂತಿದೆ...

1 / 9
ಏಷ್ಯಾಕಪ್​ಗಾಗಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಹದಿನೈದು ಸದಸ್ಯರುಗಳಲ್ಲಿ 2024 ರ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿದ್ದ 6 ಆಟಗಾರರು ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಹಾಗಿದ್ರೆ ಕಳೆದ ವರ್ಷ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದು, ಈ ಬಾರಿ ಹೊರಬಿದ್ದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

2 / 9
ರೋಹಿತ್ ಶರ್ಮಾ: 2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಆದರೆ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್​ ಪಟ್ಟ ಅಲಂಕರಿಸಿದ ಬೆನ್ನಲ್ಲೇ ಹಿಟ್​ಮ್ಯಾನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಈ ಬಾರಿಯ ಏಷ್ಯಾಕಪ್ ತಂಡದ ಆಯ್ಕೆಗೆ​ ರೋಹಿತ್ ಶರ್ಮಾ ಅವರನ್ನು ಪರಿಗಣಿಸಲಾಗಿಲ್ಲ.

3 / 9
ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್ 2024 ರಲ್ಲಿ ಫೈನಲ್ ಪಂದ್ಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ಚುಟುಕು ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದರು. ಇತ್ತ ಈ ಬಾರಿ ಏಷ್ಯಾಕಪ್ ನಡೆಯುವುದು ಟಿ20 ಸ್ವರೂಪದಲ್ಲಿ. ಹೀಗಾಗಿ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ  ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. 

4 / 9
ರವೀಂದ್ರ ಜಡೇಜಾ: ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮೂರನೇ ಆಟಗಾರ ರವೀಂದ್ರ ಜಡೇಜಾ. ಚುಟುಕು ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಜಡೇಜಾ ಇದೀಗ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ನತ್ತ ಫೋಕಸ್ ಮಾಡಿದ್ದಾರೆ. ಹೀಗಾಗಿ ಅವರನ್ನೂ ಸಹ ಏಷ್ಯಾಕಪ್​ ತಂಡಕ್ಕೆ ಆಯ್ಕೆಗೆ ಪರಿಗಣಿಸಲಾಗಿಲ್ಲ.

5 / 9
ಯುಜ್ವೇಂದ್ರ ಚಹಲ್: 2024ರ ಟಿ20 ವಿಶ್ವಕಪ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ನರ್ ಆಗಿ ಸ್ಥಾನ ಪಡೆದಿದ್ದರು. ಇದಾಗ್ಯೂ ಅವರಿಗೆ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿಯಲು ಅವಕಾಶ ಸಿಕ್ಕಿರಲಿಲ್ಲ. ಅಲ್ಲದೆ 2023ರ ಬಳಿಕ ಚಹಲ್ ಭಾರತದ ಪರ ಯಾವುದೇ ಟಿ20 ಪಂದ್ಯವಾಡಿಲ್ಲ. ಇದೀಗ ಏಷ್ಯಾಕಪ್ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

6 / 9
ರಿಷಭ್ ಪಂತ್: ಟಿ20 ವಿಶ್ವಕಪ್ 2024 ರಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಕಣಕ್ಕಿಳಿದಿದ್ದರು. ಅಲ್ಲದೆ ಈ ಬಾರಿ ಏಷ್ಯಾಕಪ್​ನಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಗೊಂಡಿರುವ ಕಾರಣ ಅವರನ್ನು ಏಷ್ಯಾಕಪ್ ತಂಡದಿಂದ ಹೊರಗಿಡಲಾಗಿದೆ.

7 / 9
ಮೊಹಮ್ಮದ್ ಸಿರಾಜ್: 2024ರ ಟಿ20 ವಿಶ್ವಕಪ್ ಚಾಂಪಿಯನ್ ತಂಡದ ಭಾಗವಾಗಿದ್ದ ಮೊಹಮ್ಮದ್ ಸಿರಾಜ್ ಅವರನ್ನು ಮುಂಬರುವ ಏಷ್ಯಾಕಪ್​ಗೆ ಆಯ್ಕೆ ಮಾಡಲಾಗಿಲ್ಲ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸಿರಾಜ್​ಗೆ ವಿಶ್ರಾಂತಿ ನೀಡುವ ಸಲುವಾಗಿ ಟಿ20 ತಂಡದಿಂದ ಕೈ ಬಿಡಲಾಗಿದೆ.

8 / 9
ಟಿ20 ವಿಶ್ವಕಪ್ 2024 ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್ ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್ ) , ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

9 / 9
ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.