ಟೀಮ್ ಇಂಡಿಯಾದಿಂದ 6 ಆಟಗಾರರು ಔಟ್..!

Updated on: Jun 22, 2026 | 7:40 AM

India vs England: ಐರ್ಲೆಂಡ್ ವಿರುದ್ಧದ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಜುಲೈ 1 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಮೊದಲಿಗೆ 5 ಮ್ಯಾಚ್​ಗಳ ಟಿ20 ಸರಣಿಯನ್ನು ಆಡಲಾಗುತ್ತದೆ. ಇದಾದ ಬಳಿಕ ಭಾರತ ಮತ್ತು ಇಂಗ್ಲೆಂಡ್ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.

1 / 8
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್​​ಮನ್ ಗಿಲ್ ಮುನ್ನಡೆಸಲಿದ್ದು, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಹಿಂದೆ ಭಾರತ ಏಕದಿನ ತಂಡದಲ್ಲಿ ಕಾಣಿಸಿಕೊಂಡಿದ್ದ ಆರು ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಆ ಆಟಗಾರರು ಯಾರೆಂದರೆ... (PC: BCCI)

2 / 8
ರವೀಂದ್ರ ಜಡೇಜಾ: ಟೀಮ್ ಇಂಡಿಯಾದ ಅನುಭವಿ ಆಲ್​ರೌಂಡರ್ ರವೀಂದ್ರ ಜಡೇಜಾ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಅವರ ಬದಲಿಗೆ ಆಲ್​ರೌಂಡರ್ ಆಗಿ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ. (PC: gettyimages)

3 / 8
ಮೊಹಮ್ಮದ್ ಸಿರಾಜ್: ಭಾರತ ಏಕದಿನ ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದ ಮೊಹಮ್ಮದ್ ಸಿರಾಜ್ ಅವರನ್ನು ಈ ಬಾರಿ ಆಯ್ಕೆ ಮಾಡಲಾಗಿಲ್ಲ. ವಿಶ್ರಾಂತಿಯ ನೀಡುವ ಸಲುವಾಗಿ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಅವರ ಬದಲಿಗೆ ಯುವ ವೇಗಿ ಗುರ್ನೂರ್ ಬ್ರಾರ್ ಆಯ್ಕೆಯಾಗಿದ್ದಾರೆ. (PC: gettyimages)

4 / 8
ಹಾರ್ದಿಕ್ ಪಾಂಡ್ಯ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಅವರನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ನಿತೀಶ್ ಕುಮಾರ್ ರೆಡ್ಡಿ ಭಾರತ ಏಕದಿನ ತಂಡದಲ್ಲಿ ಮುಂದುವರೆದಿದ್ದಾರೆ. (PC: gettyimages)

5 / 8
ಯಶಸ್ವಿ ಜೈಸ್ವಾಲ್: ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯ ಕೊನೆಯ ಮ್ಯಾಚ್​ನಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಕೂಡ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿಲ್ಲ. ವಿರಾಟ್ ಕೊಹ್ಲಿಯ ಪುನರಾಗಮನದ ಹಿನ್ನಲೆ ಜೈಸ್ವಾಲ್ ಅವರನ್ನು ಕೈ ಬಿಡಲಾಗಿದೆ. (PC: gettyimages)

6 / 8
ಹರ್ಷ್ ದುಬೆ: ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೂಲಕ ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದ ಹರ್ಷ್ ದುಬೆಯನ್ನು ಕೂಡ ಇಂಗ್ಲೆಂಡ್ ಸರಣಿಯಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಅನುಭವಿ ಆಲ್​ರೌಂಡರ್ ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. (PC: BCCI)

7 / 8
ಪ್ರಿನ್ಸ್ ಯಾದವ್: ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿದಿದ್ದ ಪ್ರಿನ್ಸ್ ಯಾದವ್ ಕೂಡ ತಂಡದಿಂದ ಹೊರಬಿದ್ದಿದ್ದಾರೆ. ಹರ್ಷಿತ್ ರಾಣಾ ಅವರ ಆಗಮನದೊಂದಿಗೆ ಪ್ರಿನ್ಸ್​ ಯಾದವ್ ಅವಕಾಶ ವಂಚಿತರಾಗಿದ್ದಾರೆ. (PC: BCCI)

8 / 8
ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್.

Follow Us