India T20 Squad: ಭಾರತ ತಂಡದಿಂದ 10 ಆಟಗಾರರು ಹೊರಕ್ಕೆ..!

India T20 Squad: ಹಾರ್ದಿಕ್ ಪಾಂಡ್ಯ ಅಲ್ಲದೆ ಇನ್ನೂ ಕೆಲ ಆಟಗಾರರು ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿಲ್ಲ. ಈ ಬಾರಿ ಭಾರತ ಟಿ20 ತಂಡದಿಂದ ಹೊರಗುಳಿದಿರುವ ಆಟಗಾರರು ಯಾರೆಲ್ಲಾ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Jan 08, 2024 | 7:23 AM

ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಅಂದರೆ ಈ ಹಿಂದೆ ಟಿ20 ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ತಂಡದಲ್ಲಿ ಕಾಣಿಸಿಕೊಂಡಿಲ್ಲ.

1 / 13
ಹಾರ್ದಿಕ್ ಪಾಂಡ್ಯ ಅಲ್ಲದೆ ಇನ್ನೂ ಕೆಲ ಆಟಗಾರರು ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿಲ್ಲ. ಹಾಗಿದ್ರೆ ಈ ಬಾರಿ ಭಾರತ ಟಿ20 ತಂಡದಿಂದ ಹೊರಗುಳಿದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

2 / 13
1- ಸೂರ್ಯಕುಮಾರ್ ಯಾದವ್: ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದ ಸೂರ್ಯಕುಮಾರ್ ಯಾದವ್ ಈ ಬಾರಿ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಸೂರ್ಯ ಅಫ್ಘಾನ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ.

3 / 13
2- ಹಾರ್ದಿಕ್ ಪಾಂಡ್ಯ: ಕಳೆದ ಒಂದು ವರ್ಷದಿಂದ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಕೂಡ ಫಿಟ್​ನೆಸ್ ಸಮಸ್ಯೆಯ ಕಾರಣ ಹೊರಗುಳಿದಿದ್ದಾರೆ.

4 / 13
3- ಯುಜ್ವೇಂದ್ರ ಚಹಲ್: ಟಿ20 ಕ್ರಿಕೆಟ್​ನ ಯಶಸ್ವಿ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಯುಜ್ವೇಂದ್ರ ಚಹಲ್ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ.

5 / 13
4- ಕೆಎಲ್ ರಾಹುಲ್: ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕೆಎಲ್ ರಾಹುಲ್ ಅವರನ್ನು ಕೂಡ ಟಿ20 ತಂಡದಿಂದ ಕೈ ಬಿಡಲಾಗಿದೆ.

6 / 13
5- ರುತುರಾಜ್ ಗಾಯಕ್ವಾಡ್: ಭಾರತ ತಂಡದ ಯುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಸೌತ್ ಆಫ್ರಿಕಾ ವಿರುದ್ಧದ ಸರಣಿ ವೇಳೆ ಗಾಯಗೊಂಡಿದ್ದರು. ಹೀಗಾಗಿ ಅವರು ಕೂಡ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.

7 / 13
6- ಇಶಾನ್ ಕಿಶನ್: ಟೀಮ್ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರನ್ನು ಸಹ ಅಫ್ಘಾನ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿಲ್ಲ.

8 / 13
7- ರವೀಂದ್ರ ಜಡೇಜಾ: ಭಾರತ ತಂಡದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಅವರು ವಿಶ್ರಾಂತಿಯ ಕಾರಣ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ.

9 / 13
8- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಸತತ ಪಂದ್ಯಗಳನ್ನಾಡಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

10 / 13
9- ಜಸ್​ಪ್ರೀತ್ ಬುಮ್ರಾ: ಭಾರತ ತಂಡದ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ ಕೂಡ ಸತತ ಪಂದ್ಯಗಳನ್ನಾಡಿ ಬಳಲಿದ್ದು, ಹೀಗಾಗಿ ಅಫ್ಘಾನ್ ವಿರುದ್ಧ ಟಿ20 ಸರಣಿಯ ವೇಳೆ ವಿಶ್ರಾಂತಿ ಪಡೆದಿದ್ದಾರೆ.

11 / 13
10- ಶ್ರೇಯಸ್ ಅಯ್ಯರ್: ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಸಹ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾಗಿಲ್ಲ.

12 / 13
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಕೇಶ್ ಕುಮಾರ್.

13 / 13
Follow us