AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ಪಂದ್ಯಗಳಲ್ಲಿ 7 ಬಾರಿ 5 ವಿಕೆಟ್​: ದಾಖಲೆಗಳ ಮೇಲೆ ದಾಖಲೆ ಬರೆದ ಜಯಸೂರ್ಯ

Prabath Jayasuriya: ಶ್ರೀಲಂಕಾ ತಂಡದ 32 ವರ್ಷದ ಸ್ಪಿನ್ನರ್ ಪ್ರಬಾತ್ ಜಯಸೂರ್ಯ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದ್ದಾರೆ. 2022 ರಲ್ಲಿ ಪಾದಾರ್ಪಣೆ ಮಾಡಿದ್ದ ಪ್ರಬಾತ್ ಇದೀಗ ಕೇವಲ 10 ಪಂದ್ಯಗಳಿಂದ 67 ವಿಕೆಟ್ ಕಬಳಿಸಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅಲ್ಲದೆ ಇನ್ನೂ ಹಲವು ದಾಖಲೆಗಳ ಹೊಸ್ತಿಲಲ್ಲಿದ್ದಾರೆ.

TV9 Web
| Edited By: |

Updated on: Feb 06, 2024 | 11:42 AM

Share
ಶ್ರೀಲಂಕಾ ತಂಡದ ಎಡಗೈ ಸ್ಪಿನ್ನರ್ ಪ್ರಬಾತ್ ಜಯಸೂರ್ಯ (Prabath Jayasuriya) ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಅದು ಕೂಡ ಕೇವಲ 8 ಟೆಸ್ಟ್ ಪಂದ್ಯಗಳಲ್ಲಿ 7 ಬಾರಿ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಎಂಬುದು ವಿಶೇಷ.

1 / 8
ಕೊಲಂಬೊದಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿದ್ದ ಪ್ರಬಾತ್ ಜಯಸೂರ್ಯ ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್ ಪಡೆದು ಮಿಂಚಿದರು. ಈ ಭರ್ಜರಿ ಪ್ರದರ್ಶನದೊಂದಿಗೆ ಲಂಕಾ ಸ್ಪಿನ್ನರ್ ಹಲವು ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

2 / 8
ಈ ಪಂದ್ಯದಲ್ಲಿ ಒಟ್ಟು 8 ವಿಕೆಟ್ ಕಬಳಿಸುವುದರೊಂದಿಗೆ ಮೊದಲ 10 ಟೆಸ್ಟ್ ಪಂದ್ಯಗಳಿಂದ ಅತ್ಯಧಿಕ ವಿಕೆಟ್ ಪಡೆದ ಸ್ಪಿನ್ನರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ ಮೌರಿಸ್ ಡಬ್ಲ್ಯೂ ಟೇಟ್ ಹೆಸರಿನಲ್ಲಿತ್ತು. ಟೇಟ್ ಮೊದಲ 10 ಪಂದ್ಯಗಳಿಂದ 65 ವಿಕೆಟ್​ ಕಬಳಿಸಿ ಈ ದಾಖಲೆ ಬರೆದಿದ್ದರು. ಇದೀಗ ಪ್ರಬಾತ್ ಜಯಸೂರ್ಯ 67 ವಿಕೆಟ್ ಉರುಳಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3 / 8
ಹಾಗೆಯೇ ಮೊದಲ 10 ಪಂದ್ಯಗಳಿಂದ ಅತ್ಯಧಿಕ ವಿಕೆಟ್ ಪಡೆದ ಏಷ್ಯನ್ ಹಾಗೂ ವಿಶ್ವದ ಮೂರನೇ ಬೌಲರ್​ ಎಂಬ ದಾಖಲೆಯನ್ನು ಪ್ರಬಾತ್ ನಿರ್ಮಿಸಿದ್ದಾರೆ. ಈ ಪಟ್ಟಿಯಲ್ಲಿ ಮೊದಲ 10 ಟೆಸ್ಟ್​ಗಳಲ್ಲಿ 71 ವಿಕೆಟ್‌ಗಳನ್ನು ಪಡೆದ ಇಂಗ್ಲೆಂಡ್‌ನ ಥಾಮಸ್ ರಿಚರ್ಡ್‌ಸನ್ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಚಾರ್ಲ್ಸ್ ಟರ್ನರ್ (69 ವಿಕೆಟ್ಸ್​) ದ್ವಿತೀಯ ಸ್ಥಾನದಲ್ಲಿದ್ದಾರೆ. ಇದೀಗ 67 ವಿಕೆಟ್​ಗಳೊಂದಿಗೆ ಪ್ರಬಾತ್ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

4 / 8
ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಪ್ರಬಾತ್ 5 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಕಳೆದ 8 ಟೆಸ್ಟ್ ಪಂದ್ಯಗಳಲ್ಲಿ 7 ಬಾರಿ ಐದು ವಿಕೆಟ್ ಪಡೆದ ವಿಶೇಷ ದಾಖಲೆಯನ್ನು ಕೂಡ ಬರೆದಿದ್ದಾರೆ. ಅಂದರೆ ಅತೀ ಕಡಿಮೆ ಟೆಸ್ಟ್​ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಪಡೆದ ದಾಖಲೆ ಪ್ರಬಾತ್ ಜಯಸೂರ್ಯ ಪಾಲಾಗಿದೆ.

5 / 8
ಹಾಗೆಯೇ ಶ್ರೀಲಂಕಾದಲ್ಲಿ ಅತೀ ಹೆಚ್ಚು ಬಾರಿ 5 ವಿಕೆಟ್​ಗಳನ್ನು ಪಡೆದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೂ ಪ್ರಬಾತ್ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ 45 ಬಾರಿ 5 ವಿಕೆಟ್ ಕಬಳಿಸಿದ ಮುತ್ತಯ್ಯ ಮುರಳೀಧರನ್ ಅಗ್ರಸ್ಥಾನದಲ್ಲಿದ್ದರೆ, ರಂಗನಾ ಹೆರಾತ್ (26 ಬಾರಿ) ದ್ವಿತೀಯ ಸ್ಥಾನದಲ್ಲಿದ್ದಾರೆ. ಇದೀಗ ಕೇವಲ 10 ಪಂದ್ಯಗಳಿಂದ 7 ಬಾರಿ 5 ವಿಕೆಟ್ ಕಬಳಿಸಿ ಪ್ರಬಾತ್ ಜಯಸೂರ್ಯ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

6 / 8
ಇದಲ್ಲದೆ ಮೊದಲ ಹತ್ತು ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ಬಾರಿ 'ಮ್ಯಾನ್ ಆಫ್ ದಿ ಮ್ಯಾಚ್' ಪ್ರಶಸ್ತಿ ಪಡೆದ ವಿಶ್ವ ದಾಖಲೆ ಕೂಡ ಪ್ರಬಾತ್ ಪಾಲಾಗಿದೆ. ಅಂದರೆ ಕಳೆದ ಹತ್ತು ಪಂದ್ಯಗಳಲ್ಲಿ ಲಂಕಾ ಸ್ಪಿನ್ನರ್ 4 ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ.

7 / 8
ಸದ್ಯ 10 ಪಂದ್ಯಗಳಲ್ಲಿ 7 ಬಾರಿ 5 ವಿಕೆಟ್, 2 ಬಾರಿ 4 ವಿಕೆಟ್ ಪಡೆದಿರುವ ಪ್ರಬಾತ್ ಜಯಸೂರ್ಯ 67 ವಿಕೆಟ್​ಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಈ ಸಂಚಲನವು ಮುಂಬರುವ ದಿನಗಳಲ್ಲಿ ಯಾವ ಮಟ್ಟದಲ್ಲಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

8 / 8
TV9 Web
TV9 Web

TV9 Kannada

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!