- Kannada News Photo gallery Cricket photos Prabath Jayasuriya reaches 100 Test wickets in just 32 innings
ಜಸ್ಟ್ 32 ಇನಿಂಗ್ಸ್ನಲ್ಲಿ ವಿಶ್ವ ದಾಖಲೆ ಬರೆದ ಪ್ರಭಾತ್ ಜಯಸೂರ್ಯ
South Africa vs Sri Lanka: ಡರ್ಬನ್ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪ್ರಥಮ ಇನಿಂಗ್ಸ್ನಲ್ಲಿ 191 ರನ್ ಕಲೆಹಾಕಿದರೆ, ಶ್ರೀಲಂಕಾ 42 ರನ್ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ 366 ರನ್ ಬಾರಿಸಿ ಡಿಕ್ಲೇರ್ ಘೋಷಿಸಿದೆ.
Updated on: Nov 30, 2024 | 9:54 AM

ಡರ್ಬನ್ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಶ್ರೀಲಂಕಾ ಸ್ಪಿನ್ನರ್ ಪ್ರಭಾತ್ ಜಯಸೂರ್ಯ ಹೊಸ ದಾಖಲೆ ಬರೆದಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 2 ವಿಕೆಟ್ ಕಬಳಿಸಿದ್ದ ಪ್ರಭಾತ್ ದ್ವಿತೀಯ ಇನಿಂಗ್ಸ್ನಲ್ಲಿ ಮತ್ತೆರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಈ ನಾಲ್ಕು ವಿಕೆಟ್ಗಳೊಂದಿಗೆ ಪ್ರಭಾತ್ ಜಯಸೂರ್ಯ ಟೆಸ್ಟ್ ಕ್ರಿಕೆಟ್ನಲ್ಲಿ 100 ವಿಕೆಟ್ಗಳ ಸಾಧನೆ ಮಾಡಿದ್ದಾರೆ. ಅದು ಕೂಡ ಕೇವಲ 32 ಇನಿಂಗ್ಸ್ ಮೂಲಕ ಎಂಬುದು ವಿಶೇಷ. ಇದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಕಡಿಮೆ ಇನಿಂಗ್ಸ್ ಮೂಲಕ ನೂರು ವಿಕೆಟ್ ಕಬಳಿಸಿದ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯ ಮೊದಲೆರಡು ಸ್ಥಾನಗಳಲ್ಲಿ ಆಸ್ಟ್ರೇಲಿಯಾದ ಚಾರ್ಲಿ ಟರ್ನರ್ ಹಾಗೂ ಕ್ಲಾರಿ ಗ್ರಿಮೆಟ್ಟ್ ಇದ್ದಾರೆ. ಟರ್ನರ್ 30 ಇನಿಂಗ್ಸ್ ಮೂಲಕ 100 ವಿಕೆಟ್ ಕಬಳಿಸಿದರೆ, ಗ್ರಿಮೆಟ್ಟ 31 ಇನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ್ದರು. ಇದೀಗ 32 ಇನಿಂಗ್ಸ್ 100 ವಿಕೆಟ್ ಉರುಳಿಸಿ ಪ್ರಭಾತ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

ಶ್ರೀಲಂಕಾ ಪರ 17 ಟೆಸ್ಟ್ ಪಂದ್ಯಗಳಲ್ಲಿ 32 ಇನಿಂಗ್ಸ್ ಆಡಿರುವ ಪ್ರಭಾತ್ ಜಯಸೂರ್ಯ ಈವರೆಗೆ 5513 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 101 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 100 ವಿಕೆಟ್ಳ ಸಾಧನೆ ಮಾಡಿದ ಏಷ್ಯನ್ ಬೌಲರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪ್ರಥಮ ಇನಿಂಗ್ಸ್ನಲ್ಲಿ 191 ರನ್ ಕಲೆಹಾಕಿದರೆ, ಶ್ರೀಲಂಕಾ 42 ರನ್ಗಳಿಗೆ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ 366 ರನ್ ಬಾರಿಸಿ ಡಿಕ್ಲೇರ್ ಘೋಷಿಸಿದೆ. ಅತ್ತ ಮೊದಲ ಇನಿಂಗ್ಸ್ನಲ್ಲಿ 149 ರನ್ಗಳ ಹಿನ್ನಡೆ ಹೊಂದಿದ್ದ ಶ್ರೀಲಂಕಾ ತಂಡವು ಈ ಪಂದ್ಯದಲ್ಲಿ ಗೆಲ್ಲಲು ದ್ವಿತೀಯ ಇನಿಂಗ್ಸ್ನಲ್ಲಿ 516 ರನ್ ಕಲೆಹಾಕಬೇಕು.



















