AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಕನ್ನಡಿಗ

IPL 2025 Purple Cap List: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಸೀಸನ್​-18ರ 36 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 9 ಬೌಲರ್​ಗಳು 10 ಕ್ಕಿಂತ ಅಧಿಕ ವಿಕೆಟ್ ಪಡೆದಿದ್ದಾರೆ. ಇವರಲ್ಲಿ ಐವರ ವಿಕೆಟ್​ಗಳ ಸಂಖ್ಯೆ 12 ಮುಟ್ಟಿದೆ. ಈ ಐವರಲ್ಲಿ ಕರ್ನಾಟಕದ ವೇಗ ಬೌಲರ್ ಕೂಡ ಇರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Apr 20, 2025 | 1:55 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧ ಮುಕ್ತಾಯಗೊಂಡಿದೆ. ಮೊದಲ ಸುತ್ತಿನ 7 ಪಂದ್ಯಗಳಲ್ಲಿ ಅತ್ಯಧಿಕ ವಿಕೆಟ್ ಪಡೆದಿರುವುದು ಕನ್ನಡಿಗ ಎಂಬುದು ವಿಶೇಷ. ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿರುವ ಕರ್ನಾಟಕ ವೇಗಿ ಪ್ರಸಿದ್ಧ್ ಕೃಷ್ಣ ಅತ್ಯದ್ಭುತ ಪ್ರದರ್ಶನ ಮುಂದುವರೆಸಿದ್ದಾರೆ.

1 / 6
7 ಪಂದ್ಯಗಳಲ್ಲಿ 27 ಓವರ್​ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ ಒಟ್ಟು 201 ರನ್ ನೀಡುವ ಮೂಲಕ 14 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದು ಕೂಡ ಪ್ರತಿ ಓವರ್​ನಲ್ಲಿ ಕೇವಲ 7.44 ಎಕಾನಮಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ. ಈ ಮೂಲಕ ಪರ್ಪಲ್​ ಕ್ಯಾಪ್ ರೇಸ್​ನಲ್ಲಿ ಪ್ರಸಿದ್ಧ್ ಕೃಷ್ಣ ಅಗ್ರಸ್ಥಾನ ಅಲಂಕರಿಸಿದ್ದಾರೆ.

2 / 6
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್. 7 ಪಂದ್ಯಗಳಲ್ಲಿ 28 ಓವರ್​ಗಳನ್ನು ಎಸೆದಿರುವ ಕುಲ್ದೀಪ್ ಯಾದವ್ 6.25ರ ಎಕಾನಮಿಯಲ್ಲಿ 175 ರನ್ ನೀಡುವ ಮೂಲಕ ಒಟ್ಟು 12 ವಿಕೆಟ್​ಗಳನ್ನು ಕಬಳಿಸಿದ್ದಾರೆ.

3 / 6
ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಪಿನ್ನರ್ ನೂರ್ ಅಹ್ಮದ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 7 ಪಂದ್ಯಗಳಲ್ಲಿ 24 ಓವರ್​ಗಳನ್ನು ಎಸೆದಿರುವ ನೂರ್ ಅಹ್ಮದ್ 171 ರನ್ ನೀಡುವ ಮೂಲಕ 12 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

4 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೋಶ್ ಹ್ಯಾಝಲ್​ವುಡ್ ಕೂಡ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆರ್​ಸಿಬಿ ಪರ 7 ಪಂದ್ಯಗಳಲ್ಲಿ 24.5 ಓವರ್​ಗಳನ್ನು ಎಸೆದಿರುವ ಹ್ಯಾಝಲ್​ವುಡ್ 203 ರನ್ ನೀಡುವ ಮೂಲಕ 12 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

5 / 6
ಐದನೇ ಸ್ಥಾನದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುತ್ತಿರುವ ಶಾರ್ದೂಲ್ ಠಾಕೂರ್ ಇದ್ದಾರೆ. 8 ಪಂದ್ಯಗಳಲ್ಲಿ 28 ಓವರ್​ಗಳನ್ನು ಎಸೆದಿರುವ ಶಾರ್ದೂಲ್ ಒಟ್ಟು 308 ರನ್ ಬಿಟ್ಟು ಕೊಡುವ ಮೂಲಕ 12 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಂಡಿದ್ದಾರೆ.

6 / 6
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!

ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ

ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್

ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ

ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ

ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು