
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯದ ವೇಳೆ ಯುವ ವೇಗಿ ಪ್ರಸಿದ್ಧ್ ಕೃಷ್ಣ ಗಾಯಕ್ಕೆ ತುತ್ತಾದರು. ಇದರಿಂದಾಗಿ ಅವರು ಪಂದ್ಯದ ನಡುವೆಯೇ ಬೌಲಿಂಗ್ ನಿಲ್ಲಿಸಿ ಪೆವಿಲಿಯನ್ ಸೇರಿಕೊಂಡರು. ಗಾಯದಿಂದಾಗಿ ಪ್ರಸಿದ್ಧ್ ಮತ್ತೆ ಮೈದಾನಕ್ಕೆ ಮರಳಲಿಲ್ಲ. ಹೀಗಾಗಿ ಪ್ರಸಿದ್ಧ್ ಕೊನೆಯ ಏಕದಿನ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗುತಿತ್ತು(PC-PTI).
ಆದರೀಗ ಖಚಿತ ಮಾಹಿತಿ ಹೊರಬಿದ್ದಿದ್ದು, ಮಂಡಿರಜ್ಜು ಗಾಯದಿಂದ ಬಳಲುತ್ತಿರುವ ಪ್ರಸಿದ್ಧ್ ಕೃಷ್ಣ ಅಕ್ಟೋಬರ್ 3 ರಂದು ಚಂಡೀಗಢದಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. ಕೊನೆಯ ಏಕದಿನ ಪಂದ್ಯ ಮಾತ್ರವಲ್ಲದೆ ಪ್ರಸಿದ್ಧ್ ದೀರ್ಘ ಕಾಲದವರೆಗೆ ಕ್ರಿಕೆಟ್‌ನಿಂದ ದೂರ ಉಳಿಯಬಹುದು ಎನ್ನಲಾಗುತ್ತಿದೆ(PC-PTI).
ಗುವಾಹಟಿಯಲ್ಲಿ ನಡೆದ ಹೈ-ಸ್ಕೋರಿಂಗ್ ಪಂದ್ಯದಲ್ಲಿ, ಪ್ರಸಿದ್ಧ್ ಕೃಷ್ಣ ಕೇವಲ ಐದು ಓವರ್ ಬೌಲಿಂಗ್ ಮಾಡಿ 45 ರನ್‌ಗಳಿಗೆ 1 ವಿಕೆಟ್ ಪಡೆದರು. ಇನ್ನಿಂಗ್ಸ್‌ನ ಆರಂಭದಲ್ಲಿ ನಾಲ್ಕು ಓವರ್‌ಗಳ ಮೊದಲ ಸ್ಪೆಲ್ ಬೌಲಿಂಗ್ ಮಾಡಿದ ಪ್ರಸಿದ್ಧ್, ನಂತರ 31 ನೇ ಓವರ್‌ನಲ್ಲಿ ತಮ್ಮ ಎರಡನೇ ಸ್ಪೆಲ್‌ಗೆ ಮರಳಿದರು, ಆದರೆ ಕೇವಲ ಒಂದು ಓವರ್ ಬೌಲಿಂಗ್ ಮಾಡಿದ ನಂತರ ಗಾಯದಿಂದ ಮೈದಾನವನ್ನು ತೊರೆದರು(PC-PTI).
ಪಂದ್ಯದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಭಾರತ ತಂಡದ ಬ್ಯಾಟಿಂಗ್ ಕೋಚ್ ಸೀತಾಂಶು ಕೊಟಕ್, ಪ್ರಸಿದ್ಧ್ ಕೃಷ್ಣ ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದಾರೆ. ವೈದ್ಯಕೀಯ ತಂಡವು ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ದೃಢಪಡಿಸಿದ್ದರು. ಆದರೀಗ ಪ್ರಸಿದ್ಧ್ ಅವರ ಗಾಯವೂ ಗಂಭೀರವಾಗಿದ್ದು, ಅವರನ್ನು ಕೊನೆಯ ಏಕದಿನ ಪಂದ್ಯದಿಂದ ಹೊರಗಿಡಲಾಗಿದೆ(PC-PTI).
ಪ್ರಸಿದ್ಧ್ ಕೃಷ್ಣ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತೀಯ ತಂಡದ ಭಾಗವಾಗಿಲ್ಲ. ಹೀಗಾಗಿ ಅವರಿಗೆ ಚೇತರಿಸಿಕೊಳ್ಳಲು ಸ್ವಲ್ಪ ಸಮಯ ಸಿಗಲಿದೆ ಆದರೆ ಅಕ್ಟೋಬರ್ 22 ರಂದು ಪ್ರಾರಂಭವಾಗುವ ನ್ಯೂಜಿಲೆಂಡ್ ಪ್ರವಾಸದ ವೇಳೆಗೆ ಪ್ರಸಿದ್ಧ್ ಚೇತರಿಸಿಕೊಳ್ಳದಿದ್ದರೆ ಅದು ತಂಡಕ್ಕೆ ದುಬಾರಿಯಾಗಬಹುದು(PC-PTI).
ಪ್ರಸಿದ್ಧ್ ಕೃಷ್ಣ ಪ್ರಸ್ತುತ ಭಾರತದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿದ್ದು, ಇದುವರೆಗೆ ಒಂಬತ್ತು ಟೆಸ್ಟ್, 30 ಏಕದಿನ ಮತ್ತು ಎಂಟು ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ, ಅವರು ಟೆಸ್ಟ್‌ನಲ್ಲಿ 32 ವಿಕೆಟ್‌ಗಳು, ಏಕದಿನ ಪಂದ್ಯಗಳಲ್ಲಿ 53 ವಿಕೆಟ್‌ಗಳು ಮತ್ತು ಟಿ20ಯಲ್ಲಿ ಒಂಬತ್ತು ವಿಕೆಟ್‌ಗಳನ್ನು ಪಡೆದಿದ್ದಾರೆ(PC-PTI).