Prasidh Krishna: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಆಟಗಾರ: ಇಲ್ಲಿದೆ ಫೋಟೋಸ್

| Updated By: ಝಾಹಿರ್ ಯೂಸುಫ್

Updated on: Jun 08, 2023 | 2:22 PM

Prasidh Krishna Marriage: 2021 ರಲ್ಲಿ ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದ ಪ್ರಸಿದ್ಧ್ ಕೃಷ್ಣ ಇದುವರೆಗೆ 14 ಏಕದಿನ ಪಂದ್ಯಗಳನ್ನಾಡಿದ್ದಾರೆ.

1 / 6
ಟೀಮ್ ಇಂಡಿಯಾ ಆಟಗಾರ, ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ (Prasidh Krishna) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುವಾರ ತಮ್ಮ ಬಹುಕಾಲದ ಗೆಳತಿ ರಚನಾ ಕೃಷ್ಣ (Rachana Krishna) ಅವರೊಂದಿಗೆ ಸಾಂಪ್ರದಾಯಿಕ ಶೈಲಿಯಲ್ಲಿ ಸಪ್ತಪದಿ ತುಳಿದರು.

2 / 6
ಮಂಗಳವಾರ ನಿಶ್ಚಿತಾರ್ಥದೊಂದಿಗೆ ಹಳದಿ ಸಮಾರಂಭದಲ್ಲಿ ಮಾಡಿಕೊಂಡಿದ್ದ ಈ ಜೋಡಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

3 / 6
ಇನ್ನು ಈ ಸರಳ ಸಮಾರಂಭದಲ್ಲಿ ಪ್ರಸಿದ್ಧ್ ಕೃಷ್ಣ ಅವರ ಕುಟುಂಬಸ್ಥರು ಮತ್ತು ಆಪ್ತರು ಮಾತ್ರ ಕಾಣಿಸಿಕೊಂಡಿದ್ದರು.

4 / 6
ಪ್ರಸಿದ್ಧ್ ಕೃಷ್ಣ ಅವರ ಬಾಳ ಸಂಗಾತಿ ರಚನಾ ಕೃಷ್ಣ ಟೆಕ್ಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಪದವಿ ಮಾಡಿರುವ ರಚನಾ ಅಮೆರಿಕ ಮೂಲದ ಪ್ರಸಿದ್ಧ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

5 / 6
2021 ರಲ್ಲಿ ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದ ಪ್ರಸಿದ್ಧ್ ಕೃಷ್ಣ ಇದುವರೆಗೆ 14 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 5.32 ರ ಸರಾಸರಿಯಲ್ಲಿ ರನ್ ನೀಡಿ ಒಟ್ಟು 25 ವಿಕೆಟ್​ಗಳನ್ನು ಕಬಳಿಸಿದ್ದಾರೆ.

6 / 6
ಹಾಗೆಯೇ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಬೌಲರ್​ ಆಗಿರುವ ಪ್ರಸಿದ್ಧ್ ಕೃಷ್ಣ ಈ ಬಾರಿ ಗಾಯದ ಕಾರಣ ಕಣಕ್ಕಿಳಿದಿರಲಿಲ್ಲ. ಇನ್ನು ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 51 ಐಪಿಎಲ್ ಪಂದ್ಯಗಳನ್ನಾಡಿರುವ ಕರ್ನಾಟಕ ವೇಗಿ 49 ವಿಕೆಟ್​ಗಳನ್ನು ಪಡೆದಿದ್ದಾರೆ.