AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಓವರ್‌ಗಳಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಪ್ರಸಿದ್ಧ್ ಕೃಷ್ಣ

India vs England 2nd Test: ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 587 ರನ್​ ಕಲೆಹಾಕಿದರೆ, ಇಂಗ್ಲೆಂಡ್ ಪ್ರಥಮ ಇನಿಂಗ್ಸ್​ನಲ್ಲಿ 407 ರನ್​ಗಳಿಸಿ ಆಲೌಟ್ ಆಗಿತ್ತು. ಇನ್ನು ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 427 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಅದರಂತೆ ಇದೀಗ ಇಂಗ್ಲೆಂಡ್ ತಂಡವು ಕೊನೆಯ ಇನಿಂಗ್ಸ್​ನಲ್ಲಿ 608 ರನ್​ಗಳ ಗುರಿ ಪಡೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Jul 06, 2025 | 11:05 AM

Share
ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಮುಕ್ತಾಯದ ವೇಳೆ ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ಒಟ್ಟು 16 ಓವರ್​ಗಳನ್ನು ಎಸೆದಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ 13 ಓವರ್ ಬೌಲಿಂಗ್ ಮಾಡಿದ್ದ ಪ್ರಸಿದ್ಧ್, ದ್ವಿತೀಯ ಇನಿಂಗ್ಸ್​ನಲ್ಲಿ 3 ಓವರ್​ಗಳನ್ನು ಎಸೆದಿದ್ದಾರೆ.

1 / 6
ಈ 16 ಓವರ್​ಗಳೊಂದಿಗೆ ಪ್ರಸಿದ್ಧ್ ಕೃಷ್ಣ ಟೆಸ್ಟ್ ಕ್ರಿಕೆಟ್​ನಲ್ಲಿ 100 ಓವರ್​ಗಳನ್ನು ಪೂರೈಸಿದ್ದಾರೆ. ಈವರೆಗೆ 5 ಟೆಸ್ಟ್ ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ ವೇಗಿ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಎಸೆದಿರುವುದು ಬರೋಬ್ಬರಿ 636 ಎಸೆತಗಳು. ಅಂದರೆ 106 ಓವರ್​ಗಳು. ಈ ಮೂಲಕ ನೀಡಿರುವುದು ಬರೋಬ್ಬರಿ 535 ರನ್​ಗಳು.

2 / 6
ಇದರೊಂದಿಗೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಮೊದಲ 100 ಓವರ್​ಗಳಲ್ಲಿ ಅತ್ಯಧಿಕ ರನ್ ನೀಡಿದ ಬೌಲರ್ ಎಂಬ ಕಳಪೆ ದಾಖಲೆಯೊಂದು ಪ್ರಸಿದ್ಧ್ ಕೃಷ್ಣ ಪಾಲಾಗಿದೆ. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಇದ್ದದ್ದು ಟೀಮ್ ಇಂಡಿಯಾದ ಮಾಜಿ ವೇಗಿಯ ಹೆಸರಿನಲ್ಲಿ ಎಂಬುದು ವಿಶೇಷ. 

3 / 6
ಭಾರತದ ಪರ 9 ಟೆಸ್ಟ್ ಪಂದ್ಯಗಳನ್ನಾಡಿರುವ ವರುಣ್ ಆರೋನ್ ಮೊದಲ 100 ಓವರ್​ಗಳಲ್ಲಿ 480 ರನ್​ಗಳನ್ನು ನೀಡಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಆರಂಭಿಕ ನೂರು ಓವರ್​ಗಳಲ್ಲಿ ಅತೀ ಹೆಚ್ಚು ರನ್ ನೀಡಿದ ಬೌಲರ್ ಎಂಬ ಕಳಪೆ ದಾಖಲೆಯನ್ನು ವರುಣ್ ನಿರ್ಮಿಸಿದ್ದರು.

4 / 6
ಇದೀಗ ಈ ದಾಖಲೆಯನ್ನು ಪ್ರಸಿದ್ಧ್ ಕೃಷ್ಣ ಮುರಿದಿದ್ದಾರೆ. ಅದು ಕೂಡ 100 ಓವರ್​ಗಳಲ್ಲಿ ಬರೋಬ್ಬರಿ 510 ರನ್​ಗಳನ್ನು ನೀಡುವ ಮೂಲಕ ಎಂಬುದು ವಿಶೇಷ. ಅಂದರೆ ಪ್ರಸಿದ್ಧ್ ತನ್ನ ಟೆಸ್ಟ್ ಕೆರಿಯರ್​ನ ಮೊದಲ 600 ಎಸೆತಗಳಲ್ಲಿ 510 ರನ್​ಗಳನ್ನು ನೀಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲ 100 ಓವರ್​ಗಳಲ್ಲಿ ಅತ್ಯಧಿಕ ರನ್ ನೀಡಿದ ಬೌಲರ್ ಎನಿಸಿಕೊಂಡಿದ್ದಾರೆ.

5 / 6
ಇನ್ನು 5 ಟೆಸ್ಟ್ ಪಂದ್ಯಗಳ 9 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಪ್ರಸಿದ್ಧ್ ಕೃಷ್ಣ ಈವರೆಗೆ 13 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಆದರೆ ಈ ವೇಳೆ ಪ್ರತಿ ಓವರ್​ಗೆ 5.05 ಸರಾಸರಿಯಲ್ಲಿ ರನ್ ನೀಡಿದ್ದಾರೆ. ಹೀಗಾಗಿ ಎಡ್ಜ್​ಬಾಸ್ಟನ್ ಟೆಸ್ಟ್ ಪಂದ್ಯದ ಅಂತಿಮ ದಿನದಾಟದಲ್ಲಿ ಉತ್ತಮ ಬೌಲಿಂಗ್ ಸಂಘಟಿಸದಿದ್ದರೆ ಮುಂದಿನ ಪಂದ್ಯದಿಂದ ಹೊರಬೀಳುವುದು ಖಚಿತ ಎನ್ನಬಹುದು.

6 / 6
Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ

ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು

ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ

ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು

ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ

ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ

ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ

ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್

ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು