AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸ್ಥಿತಿ ಬೇಗ ಸುಧಾರಿಸಲಿ: ಪಾಕ್​ನಲ್ಲಿರುವ ಇಂಗ್ಲೆಂಡ್ ಆಟಗಾರನ ಪ್ರಾರ್ಥನೆ

PSL 2025: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕ್ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕೈಗೊಂಡಿದೆ. ಈ ಕಾರ್ಯಾಚರಣೆಯ ಭಾಗವಾಗಿ ಪಾಕ್​ನಲ್ಲಿನ 9 ಸ್ಥಳಗಳ ಮೇಲೆ ಇಂಡಿಯನ್ ಆರ್ಮಿ ವಾಯು ದಾಳಿ ನಡೆಸಿದೆ. ಈ ದಾಳಿ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿರುವ ವಿದೇಶಿ ಆಟಗಾರರು ಆತಂಕಕ್ಕೊಳಗಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: May 08, 2025 | 11:54 AM

Share
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (PSL 2025) ಭಾಗವಹಿಸಿರುವ ವಿದೇಶಿ ಆಟಗಾರರಿಗೆ ಆತಂಕ ಶುರುವಾಗಿದೆ. ಅದರಲ್ಲೂ ಪಾಕ್ ಮೇಲೆ ಭಾರತ ಯುದ್ಧ ಘೋಷಿಸಲಿದೆಯಾ ಎಂಬ ಟೆನ್ಶನ್​ನಲ್ಲಿದ್ದಾರೆ ಪಿಎಸ್​ಎಲ್​ನ ಫಾರಿನ್ ಪ್ಲೇಯರ್ಸ್.

1 / 6
ಇದರ ನಡುವೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿರುವ ಇಂಗ್ಲೆಂಡ್​ನ ವಿಕೆಟ್ ಕೀಪರ್ ಬ್ಯಾಟರ್ ಸ್ಯಾಮ್ ಬಿಲ್ಲಿಂಗ್ಸ್​, ಭಾರತ ಮತ್ತು ಪಾಕಿಸ್ತಾನ್ ನಡುವಣ ಪರಿಸ್ಥಿತಿ ಆದಷ್ಟು ಬೇಗ ಸುಧಾರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್​ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

2 / 6
ಈ ಬಾರಿಯ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಸ್ಯಾಮ್ ಬಿಲ್ಲಿಂಗ್ ಲಾಹೋರ್ ಖಲಂದರ್ಸ್ ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ.  ಇದೀಗ ಬಿಲ್ಲಿಂಗ್ಸ್ ಸೇರಿದಂತೆ ಇಂಗ್ಲೆಂಡ್​ನ ಹಲವು ಆಟಗಾರರು ಅರ್ಧದಲ್ಲೇ ಟೂರ್ನಿ ತೊರೆಯುವ ಬಗ್ಗೆ ಪಿಎಸ್​​ಎಲ್ ಆಯೋಜಕರೊಂದಿಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

3 / 6
ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಇಂಗ್ಲೆಂಡ್​ನ ಜೇಮ್ಸ್ ವಿನ್ಸ್, ಟಾಮ್ ಕರನ್, ಸ್ಯಾಮ್ ಬಿಲ್ಲಿಂಗ್ಸ್, ಕ್ರಿಸ್ ಜೋರ್ಡಾನ್, ಡೇವಿಡ್ ವಿಲ್ಲಿ, ಲ್ಯೂಕ್ ವುಡ್ ಮತ್ತು ಟಾಮ್ ಕೊಹ್ಲರ್-ಕ್ಯಾಡ್ಮೋರ್ ಕಾಣಿಸಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧದ ಭೀತಿ ಹಿನ್ನಲೆ ಈ ಆಟಗಾರರು ತವರಿಗೆ ವಾಪಾಸಾಗುವ ಸಾಧ್ಯತೆ ಹೆಚ್ಚಿದೆ.

4 / 6
ಅಂದಹಾಗೆ ಸ್ಯಾಮ್ ಬಿಲ್ಲಿಂಗ್ ಈ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ 27 ಇನಿಂಗ್ಸ್ ಆಡಿದ್ದ ಬಿಲ್ಲಿಂಗ್ಸ್ 3 ಅರ್ಧಶತಕಗಳೊಂದಿಗೆ ಒಟ್ಟು 503 ರನ್ ಕಲೆಹಾಕಿದ್ದರು.

5 / 6
ಆದರೆ ಈ ಬಾರಿಯ ಐಪಿಎಲ್​ನಲ್ಲಿ ಅವಕಾಶ ಸಿಗದಿರುವ ಕಾರಣ ಅವರು ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದರು. ಇದೀಗ ಯುದ್ಧದ ಭೀತಿ ಹಿನ್ನಲೆಯಲ್ಲಿ ಉಭಯ ದೇಶಗಳ ಪರಿಸ್ಥಿತಿಯು ಆದಷ್ಟು ಬೇಗ ಸುಧಾರಿಸಲಿ ಎಂದು ಪ್ರಾರ್ಥಿಸುತ್ತಿರುವುದಾಗಿ ಸ್ಯಾಮ್ ಬಿಲ್ಲಿಂಗ್ಸ್ ತಿಳಿಸಿದ್ದಾರೆ.

6 / 6
ಅರಸು ದಾಖಲೆ ಬ್ರೇಕ್ ಮಾಡಲಿರುವ ಸಿಎಂ ಸಿದ್ದರಾಮಯ್ಯಗೆ ​​ಜೋಶಿ ಟಕ್ಕರ್

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ

ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ

ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ