ಕಳಪೆ ಫಾರ್ಮ್ನಿಂದ ಹೊರಬರಲು ವಿರಾಟ್ ಕೊಹ್ಲಿಗೆ ವಿಶೇಷ ಸಲಹೆ ನೀಡಿದ ಪ್ರೇಮಾನಂದ ಮಹಾರಾಜ್
Virat Kohli: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ ಕೇವಲ 190 ರನ್ ಮಾತ್ರ ಕಲೆಹಾಕಿದ್ದರು. ಈ ಕಳಪೆಯಾಟದ ಬೆನ್ನಲ್ಲೇ ಇದೀಗ ಕಿಂಗ್ ಕೊಹ್ಲಿ ಆಧ್ಯಾತ್ಮಿಕ ಗುರೂಜಿಯನ್ನು ಭೇಟಿಯಾಗಿದ್ದಾರೆ. 2023 ರಲ್ಲಿ ಪ್ರೇಮಾನಂದ ಜಿ ಮಹಾರಾಜ್ ಅವರನ್ನು ಭೇಟಿಯಾದ ಬಳಿಕ ಕೊಹ್ಲಿ ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ್ದರು. ಹೀಗಾಗಿ 2025 ರಲ್ಲಿ ಕೊಹ್ಲಿ ಮತ್ತೆ ಫಾರ್ಮ್ ಕಂಡುಕೊಳ್ಳುವ ನಿರೀಕ್ಷೆಯಿದೆ.