ಇದೇ ವೇಳೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ವಿಶೇಷ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕೊಹ್ಲಿ, ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರನ್ನು ಭೇಟಿಯಾದದ್ದು ದೊಡ್ಡ ಗೌರವ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ನಮ್ಮನ್ನು ಆಹ್ವಾನಿಸಿದಕ್ಕಾಗಿ ಪ್ರಧಾನಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.