- Kannada News Photo gallery Cricket photos Priyansh Arya, Prabhsimran Singh Script History in IPL 2025
IPL 2025: ಹಳೆಯ ದಾಖಲೆ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಪಂಜಾಬ್ ಬಾಯ್ಸ್
IPL 2025 KKR vs PBKS: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 44ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 201 ರನ್ ಕಲೆಹಾಕಿತು. ಮೊದಲ ಇನಿಂಗ್ಸ್ ಮುಕ್ತಾಯದ ಬೆನ್ನಲ್ಲೇ ಮಳೆ ಬಂದ ಕಾರಣ ಈ ಪಂದ್ಯವನ್ನು ರದ್ದುಗೊಳಿಸಲಾಗಿದೆ.
Updated on: Apr 27, 2025 | 10:54 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 44ನೇ ಪಂದ್ಯದ ಮೂಲಕ ಪಂಜಾಬ್ ಕಿಂಗ್ಸ್ ಆರಂಭಿಕರಾದ ಪ್ರಭ್ಸಿಮ್ರಾನ್ ಸಿಂಗ್ ಹಾಗೂ ಪ್ರಿಯಾಂಶ್ ಆರ್ಯ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 120 ರನ್ಗಳ ಜೊತೆಯಾಟದೊಂದಿಗೆ ಎಂಬುದು ವಿಶೇಷ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್ಸಿಮ್ರಾನ್ ಸಿಂಗ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್ಗೆ ಬರೋಬ್ಬರಿ 120 ರನ್ಗಳ ಜೊತೆಯಾಟವಾಡಿದರು.

ಇದರೊಂದಿಗೆ ಪಂಜಾಬ್ ಕಿಂಗ್ಸ್ ಪರ ಅತ್ಯಧಿಕ ರನ್ಗಳ ಜೊತೆಯಾಟವಾಡಿದ ಆರಂಭಿಕ ಜೋಡಿ ಎಂಬ ಹೆಗ್ಗಳಿಕೆಯು ಪ್ರಿಯಾಂಶ್ ಆರ್ಯ ಹಾಗೂ ಪ್ರಭ್ಸಿಮ್ರಾನ್ ಸಿಂಗ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ ಹಾಗೂ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

2018 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ರಿಸ್ ಗೇಲ್ ಹಾಗೂ ಕೆಎಲ್ ರಾಹುಲ್ ಬರೋಬ್ಬರಿ 116 ರನ್ಗಳ ಜೊತೆಯಾಟವಾಡುವ ಮೂಲಕ ಈ ದಾಖಲೆ ಬರೆದಿದ್ದರು. ಇದೀಗ 120 ರನ್ಗಳ ಜೊತೆಯಾಟದೊಂದಿಗೆ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್ಸಿಮ್ರಾನ್ ಸಿಂಗ್ ಈ ದಾಖಲೆಯನ್ನು ಮುರಿದಿದ್ದಾರೆ.

ಇನ್ನು ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ಗಳ ಜೊತೆಯಾಟವಾಡಿದ ಅನ್ಕ್ಯಾಪ್ಡ್ ಆರಂಭಿಕ ಜೋಡಿ ಎಂಬ ಹೆಗ್ಗಳಿಕೆಯನ್ನು ಪ್ರಿಯಾಂಶ್ ಆರ್ಯ ಹಾಗೂ ಪ್ರಭ್ಸಿಮ್ರಾನ್ ಸಿಂಗ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ನಮನ್ ಓಜಾ ಮತ್ತು ಮೈಕೆಲ್ ಲಂಬ್ ಹೆಸರಿನಲ್ಲಿತ್ತು.

2010 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್) ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ನಮನ್ ಓಜಾ ಮತ್ತು ಮೈಕೆಲ್ ಲಂಬ್ 109 ರನ್ಗಳ ಜೊತೆಯಾಟವಾಡಿದ್ದರು. ಈ ಮೂಲಕ ಐಪಿಎಲ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಅನ್ಕ್ಯಾಪ್ಡ್ ಆರಂಭಿಕ ಜೋಡಿ ಎನಿಸಿಕೊಂಡಿದ್ದರು.

ಇದೀಗ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿರದ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್ಸಿಮ್ರಾನ್ ಸಿಂಗ್ ಪಂಜಾಬ್ ಕಿಂಗ್ಸ್ ಪರ ಮೊದಲ ವಿಕೆಟ್ಗೆ 120 ರನ್ಗಳ ಜೊತೆಯಾಟವಾಡಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ಗಳ ಜೊತೆಯಾಟವಾಡಿದ ಅನ್ಕ್ಯಾಪ್ಡ್ ಆರಂಭಿಕ ಜೋಡಿ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
