IPL 2025: ಹಳೆಯ ದಾಖಲೆ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಪಂಜಾಬ್ ಬಾಯ್ಸ್

Updated on: Apr 27, 2025 | 10:54 AM

IPL 2025 KKR vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 44ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 201 ರನ್ ಕಲೆಹಾಕಿತು. ಮೊದಲ ಇನಿಂಗ್ಸ್ ಮುಕ್ತಾಯದ ಬೆನ್ನಲ್ಲೇ ಮಳೆ ಬಂದ ಕಾರಣ ಈ ಪಂದ್ಯವನ್ನು ರದ್ದುಗೊಳಿಸಲಾಗಿದೆ.

1 / 7
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 44ನೇ ಪಂದ್ಯದ ಮೂಲಕ ಪಂಜಾಬ್ ಕಿಂಗ್ಸ್ ಆರಂಭಿಕರಾದ ಪ್ರಭ್​ಸಿಮ್ರಾನ್ ಸಿಂಗ್ ಹಾಗೂ ಪ್ರಿಯಾಂಶ್ ಆರ್ಯ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 120 ರನ್​ಗಳ ಜೊತೆಯಾಟದೊಂದಿಗೆ ಎಂಬುದು ವಿಶೇಷ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು.

2 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್​ಗೆ ಬರೋಬ್ಬರಿ 120 ರನ್​ಗಳ ಜೊತೆಯಾಟವಾಡಿದರು.

3 / 7
ಇದರೊಂದಿಗೆ ಪಂಜಾಬ್ ಕಿಂಗ್ಸ್ ಪರ ಅತ್ಯಧಿಕ ರನ್​ಗಳ ಜೊತೆಯಾಟವಾಡಿದ ಆರಂಭಿಕ ಜೋಡಿ ಎಂಬ ಹೆಗ್ಗಳಿಕೆಯು ಪ್ರಿಯಾಂಶ್ ಆರ್ಯ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ ಹಾಗೂ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

4 / 7
2018 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ರಿಸ್ ಗೇಲ್ ಹಾಗೂ ಕೆಎಲ್ ರಾಹುಲ್ ಬರೋಬ್ಬರಿ 116 ರನ್​ಗಳ ಜೊತೆಯಾಟವಾಡುವ ಮೂಲಕ ಈ ದಾಖಲೆ ಬರೆದಿದ್ದರು. ಇದೀಗ 120 ರನ್​ಗಳ ಜೊತೆಯಾಟದೊಂದಿಗೆ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಈ ದಾಖಲೆಯನ್ನು ಮುರಿದಿದ್ದಾರೆ.

5 / 7
ಇನ್ನು ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್​ಗಳ ಜೊತೆಯಾಟವಾಡಿದ ಅನ್​ಕ್ಯಾಪ್ಡ್​ ಆರಂಭಿಕ ಜೋಡಿ ಎಂಬ ಹೆಗ್ಗಳಿಕೆಯನ್ನು ಪ್ರಿಯಾಂಶ್ ಆರ್ಯ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ನಮನ್ ಓಜಾ ಮತ್ತು ಮೈಕೆಲ್ ಲಂಬ್ ಹೆಸರಿನಲ್ಲಿತ್ತು.

6 / 7
2010 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್) ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ನಮನ್ ಓಜಾ ಮತ್ತು ಮೈಕೆಲ್ ಲಂಬ್ 109 ರನ್​ಗಳ ಜೊತೆಯಾಟವಾಡಿದ್ದರು. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಅನ್​ಕ್ಯಾಪ್ಡ್ ಆರಂಭಿಕ ಜೋಡಿ ಎನಿಸಿಕೊಂಡಿದ್ದರು.

7 / 7
ಇದೀಗ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿರದ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಪಂಜಾಬ್ ಕಿಂಗ್ಸ್ ಪರ ಮೊದಲ ವಿಕೆಟ್​ಗೆ 120 ರನ್​ಗಳ ಜೊತೆಯಾಟವಾಡಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ರನ್​ಗಳ ಜೊತೆಯಾಟವಾಡಿದ ಅನ್​ಕ್ಯಾಪ್ಡ್ ಆರಂಭಿಕ ಜೋಡಿ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.