IPL 2025 vs PSL 2025: ಐಪಿಎಲ್ಗೆ ಟಕ್ಕರ್ ಕೊಡಲು ಪಿಎಸ್ಎಲ್ ರೆಡಿ..!
IPL 2025 vs PSL 2025: ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರಲೇಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದ ಪಾಕ್ ಕ್ರಿಕೆಟ್ ಮಂಡಳಿಯು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಬಿಸಿಸಿಐ ಬೇಡಿಕೆಯಂತೆ ಐಸಿಸಿಯು ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವಂತೆ ಸೂಚಿಸಿದೆ. ಈ ಸೂಚನೆ ಬೆನ್ನಲ್ಲೇ ಇದೀಗ ಪಾಕ್ ಕ್ರಿಕೆಟ್ ಮಂಡಳಿ ಐಪಿಎಲ್ಗೆ ಟಕ್ಕರ್ ಕೊಡಲು ಮುಂದಾಗಿರುವುದೇ ಅಚ್ಚರಿ.
Updated on: Dec 14, 2024 | 9:54 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಹಾಗೂ ಪಾಕಿಸ್ತಾನ್ ಸೂಪರ್ ಲೀಗ್ (PSL 2025) ಮುಖಾಮುಖಿಯಾಗುವುದು ಖಚಿತವಾಗಿದೆ. ಅಂದರೆ ಒಂದೇ ಅವಧಿಯಲ್ಲಿ ಇತ್ತ ಭಾರತದಲ್ಲಿ ಐಪಿಎಲ್ ನಡೆದರೆ, ಅತ್ತ ಪಾಕಿಸ್ತಾನದಲ್ಲಿ ಪಿಎಸ್ಎಲ್ ಜರುಗಲಿದೆ. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮುಂದಾಗಿದೆ.

ಪ್ರಸ್ತುತ ಮಾಹಿತ ಪ್ರಕಾರ, ಏಪ್ರಿಲ್ 8 ರಿಂದ ಪಾಕಿಸ್ತಾನ್ ಸೂಪರ್ ಲೀಗ್ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯವನ್ನು ಮೇ 19 ರಂದು ಆಯೋಜಿಸಲು ನಿರ್ಧರಿಸಲಾಗಿದೆ.

ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗುವುದು ಮಾರ್ಚ್ 15 ರಿಂದ. ಹಾಗೆಯೇ ಫೈನಲ್ ಪಂದ್ಯವು ಮೇ 25 ರಂದು ನಡೆಯುವ ಸಾಧ್ಯತೆ ಹೆಚ್ಚು. ಅಂದರೆ ಐಪಿಎಲ್ ಮಧ್ಯದಲ್ಲೇ ಪಿಎಸ್ಎಲ್ ಆಯೋಜಿಸಲು ಪಿಸಿಬಿ ಪ್ಲ್ಯಾನ್ ರೂಪಿಸಲಾಗಿದೆ.

2025ರ ಚಾಂಪಿಯನ್ಸ್ ಟ್ರೋಫಿ ಆಯೋಜನೆಯ ವಿಷಯದಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಭಾರೀ ಮುಖಭಂಗವಾಗಿದ್ದು, ಬಿಸಿಸಿಐ ಬೇಡಿಕೆಯಂತೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಐಸಿಸಿ ಸೂಚಿಸಿದೆ. ಅಲ್ಲದೆ ಇದಕ್ಕೆ ಪಿಸಿಬಿ ಕೂಡ ಸಮ್ಮತಿ ಸೂಚಿಸಿದೆ.

ಈ ಸಮ್ಮತಿ ಸೂಚನೆಯ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಟಕ್ಕರ್ ಕೊಡಲು ಮುಂದಾಗಿದೆ. ಅದರಂತೆ ಐಪಿಎಲ್ ಅವಧಿಯಲ್ಲೇ ಪಾಕಿಸ್ತಾನ್ ಸೂಪರ್ ಲೀಗ್ ಆಯೋಜಿಸುವ ಭಂಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಇದರಿಂದ ಪಿಎಸ್ಎಲ್ ಲಾಭಗಳಿಸಲಿದೆಯಾ ಅಥವಾ ನಷ್ಟದೊಂದಿಗೆ ಪ್ರಪಾತಕ್ಕೆ ಕುಸಿಯಲಿದೆಯಾ ಕಾದು ನೋಡಬೇಕಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



