
ಪಾಕಿಸ್ತಾನ ಸೂಪರ್ ಲೀಗ್ 2026 ರ 17 ನೇ ಪಂದ್ಯದಲ್ಲಿ ಕರಾಚಿ ಕಿಂಗ್ಸ್ ಹಾಗೂ ಪೇಶಾವರ್ ಝಲ್ಮಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಬರ್ ಆಝಂ ನಾಯಕತ್ವದ ಪೇಶಾವರ್ ಝಲ್ಮಿ ತಂಡವು 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 246 ರನ್ ಗಳಿಸಿತು. ತಂಡದ ಪರ ಬಿರುಗಾಳಿಯ ಇನ್ನಿಂಗ್ಸ್ ಆಡಿದ ಬಾಬರ್ ಟಿ20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯನ್ನು ಸಹ ಮುರಿದರು.

ಈ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಬಾಬರ್ ಆಝಂ ಅಜೇಯ 87 ರನ್ ಗಳಿಸಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 10 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ಈ ಇನ್ನಿಂಗ್ಸ್ ಮೂಲಕ ಬಾಬರ್ ಟಿ20 ಕ್ರಿಕೆಟ್‌ನಲ್ಲಿ 12,000 ರನ್ ಪೂರ್ಣಗೊಳಿಸುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದರು.

ಕೇವಲ 343 ಇನ್ನಿಂಗ್ಸ್‌ಗಳಲ್ಲಿ 12,000 ರನ್‌ಗಳ ಗಡಿ ದಾಟಿದ ಬಾಬರ್, ಟಿ20 ಸ್ವರೂಪದಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 12,000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಬಾಬರ್ಗಿಂತ ಮೊದಲು, ಈ ದಾಖಲೆಯನ್ನು ವೆಸ್ಟ್ ಇಂಡೀಸ್ ದಂತಕಥೆ ಕ್ರಿಸ್ ಗೇಲ್ ಹೊಂದಿದ್ದರು.

ಗೇಲ್ 343 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು. ಆದಾಗ್ಯೂ, ಬಾಬರ್ ಗೇಲ್‌ಗಿಂತ ಐದು ಕಡಿಮೆ ಇನ್ನಿಂಗ್ಸ್‌ಗಳನ್ನು ಆಡಿ 12,000 ರನ್‌ಗಳ ಗಡಿ ದಾಟಿದ್ದಾರೆ. ಏತನ್ಮಧ್ಯೆ, ವಿರಾಟ್ ಕೊಹ್ಲಿ ಈಗ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, 12,000 ಟಿ20 ರನ್‌ಗಳನ್ನು ಪೂರೈಸಲು 360 ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡರು.

ಬಾಬರ್ ಜೊತೆಗೆ, ಕುಸಲ್ ಮೆಂಡಿಸ್ ಕೂಡ ಪೇಶಾವರ್ ಝಲ್ಮಿ ಪರ ಸ್ಮರಣೀಯ ಇನ್ನಿಂಗ್ಸ್ ಆಡಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅವರು 52 ಎಸೆತಗಳಲ್ಲಿ 109 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 14 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳು ಸೇರಿದ್ದವು. ಏತನ್ಮಧ್ಯೆ, ಅಬ್ದುಲ್ ಸಮದ್ 12 ಎಸೆತಗಳಲ್ಲಿ ಅಜೇಯ 40 ರನ್ ಗಳಿಸಿ ತಂಡವು ಈ ದೊಡ್ಡ ಮೊತ್ತವನ್ನು ತಲುಪಲು ಸಹಾಯ ಮಾಡಿದರು.