AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSKಗೆ ಸೋಲುಣಿಸಿ ಆಸ್ಟ್ರೇಲಿಯಾದ ವಿಶ್ವ ದಾಖಲೆ ಮುರಿದ ಪಂಜಾಬ್ ಕಿಂಗ್ಸ್

CSK vs PBKS: ಐಪಿಎಲ್​ನ 7ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 209 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.4 ಓವರ್​ಗಳಲ್ಲಿ 210 ರನ್​ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Apr 04, 2026 | 7:56 AM

Share
ಟಿ20 ಕ್ರಿಕೆಟ್​ನಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡವು ಹೊಸ ವಿಶ್ವ ದಾಖಲೆ ಬರೆದಿದೆ. ಅದು ಸಹ ಆಸ್ಟ್ರೇಲಿಯಾ (Australia) ಬರೆದಿಟ್ಟಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್​ನ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್​ ತಂಡವು 20 ಓವರ್​​ಗಳಲ್ಲಿ 5 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತು.

2 / 6
210 ರನ್​ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ನಾಯಕ ಶ್ರೇಯಸ್ ಅಯ್ಯರ್ (50) ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿ ನೆರವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು 18.4 ಓವರ್​​ಗಳಲ್ಲಿ 210 ರನ್​ ಗಳಿಸುವ ಮೂಲಕ 5 ವಿಕೆಟ್​ಗಳ ಜಯ ಸಾಧಿಸಿದೆ.

3 / 6
ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 200+ ಸ್ಕೋರ್ ಚೇಸ್ ಮಾಡಿ ಗೆದ್ದ ತಂಡವೆಂಬ ವಿಶ್ವ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು. ಇದಕ್ಕೂ ಮುನ್ನ ಈ ವರ್ಲ್ಡ್​ ರೆಕಾರ್ಡ್ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು.

4 / 6
ಆಸ್ಟ್ರೇಲಿಯಾ ತಂಡವು ಟಿ20 ಕ್ರಿಕೆಟ್​ನಲ್ಲಿ ಬರೋಬ್ಬರಿ 7 ಬಾರಿ 200+ ಸ್ಕೋರ್​ಗಳನ್ನು ಚೇಸ್ ಮಾಡಿದ್ದರು. ಈ ಮೂಲಕ ಟಿ20 ಪಂದ್ಯದಲ್ಲಿ ಅತೀ ಹೆಚ್ಚು ಬಾರಿ 200 ಕ್ಕಿಂತ ಹೆಚ್ಚಿನ ಸ್ಕೋರ್​ ಬೆನ್ನತ್ತಿದ ಗೆದ್ದ ತಂಡವೆಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು.

5 / 6
ಇದೀಗ ಈ ವಿಶ್ವ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಪಂಜಾಬ್ ಕಿಂಗ್ಸ್ ತಂಡ ಯಶಸ್ವಿಯಾಗಿದೆ. ಪಂಜಾಬ್ ಪಡೆಯು ಈವರೆಗೆ 9 ಬಾರಿ 200+ ಸ್ಕೋರ್​ಗಳನ್ನು ಚೇಸ್ ಮಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 200+ ಸ್ಕೋರ್​ ಬೆನ್ನತ್ತಿ ಗೆದ್ದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
Follow Us