CSKಗೆ ಸೋಲುಣಿಸಿ ಆಸ್ಟ್ರೇಲಿಯಾದ ವಿಶ್ವ ದಾಖಲೆ ಮುರಿದ ಪಂಜಾಬ್ ಕಿಂಗ್ಸ್
CSK vs PBKS: ಐಪಿಎಲ್ನ 7ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.4 ಓವರ್ಗಳಲ್ಲಿ 210 ರನ್ಗಳಿಸಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Updated on: Apr 04, 2026 | 7:56 AM

ಟಿ20 ಕ್ರಿಕೆಟ್ನಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡವು ಹೊಸ ವಿಶ್ವ ದಾಖಲೆ ಬರೆದಿದೆ. ಅದು ಸಹ ಆಸ್ಟ್ರೇಲಿಯಾ (Australia) ಬರೆದಿಟ್ಟಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್ನ 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತು.

210 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ನಾಯಕ ಶ್ರೇಯಸ್ ಅಯ್ಯರ್ (50) ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿ ನೆರವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು 18.4 ಓವರ್ಗಳಲ್ಲಿ 210 ರನ್ ಗಳಿಸುವ ಮೂಲಕ 5 ವಿಕೆಟ್ಗಳ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 200+ ಸ್ಕೋರ್ ಚೇಸ್ ಮಾಡಿ ಗೆದ್ದ ತಂಡವೆಂಬ ವಿಶ್ವ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಪಾಲಾಯಿತು. ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು.

ಆಸ್ಟ್ರೇಲಿಯಾ ತಂಡವು ಟಿ20 ಕ್ರಿಕೆಟ್ನಲ್ಲಿ ಬರೋಬ್ಬರಿ 7 ಬಾರಿ 200+ ಸ್ಕೋರ್ಗಳನ್ನು ಚೇಸ್ ಮಾಡಿದ್ದರು. ಈ ಮೂಲಕ ಟಿ20 ಪಂದ್ಯದಲ್ಲಿ ಅತೀ ಹೆಚ್ಚು ಬಾರಿ 200 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿದ ಗೆದ್ದ ತಂಡವೆಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು.

ಇದೀಗ ಈ ವಿಶ್ವ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಪಂಜಾಬ್ ಕಿಂಗ್ಸ್ ತಂಡ ಯಶಸ್ವಿಯಾಗಿದೆ. ಪಂಜಾಬ್ ಪಡೆಯು ಈವರೆಗೆ 9 ಬಾರಿ 200+ ಸ್ಕೋರ್ಗಳನ್ನು ಚೇಸ್ ಮಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 200+ ಸ್ಕೋರ್ ಬೆನ್ನತ್ತಿ ಗೆದ್ದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




