11 ಅಂಕಗಳು… ಐಪಿಎಲ್ನಲ್ಲಿ ಹೊಸ ಚರಿತ್ರೆ ಬರೆದ ಪಂಜಾಬ್ ಕಿಂಗ್ಸ್
IPL 2026 Punjab Kings: ಈ ಬಾರಿಯ ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಸನ್ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಈ ಮೂಲಕ ಪಂಜಾಬ್ ಪಡೆ ಮೊದಲ 6 ಪಂದ್ಯಗಳ ಮೂಲಕ ಒಟ್ಟು 11 ಅಂಕಗಳನ್ನು ಪಡೆದುಕೊಂಡಿದೆ.
Updated on: Apr 20, 2026 | 8:17 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಯಾವುದೇ ತಂಡಕ್ಕೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ಪಂಜಾಬ್ ಕಿಂಗ್ಸ್ (Punjab Kings) ತಂಡ ನಿರ್ಮಿಸಿದೆ. ಅದು ಸಹ 11 ಅಂಕಗಳನ್ನು ಕಲೆಹಾಕುವ ಮೂಲಕ. ಈ ಪಾಯಿಂಟ್ಸ್ಗಳೊಂದಿಗೆ ಪಂಜಾಬ್ ಪಡೆ ಹೊಸ ಇತಿಹಾಸ ನಿರ್ಮಿಸಿದೆ.

ಮುಲ್ಲನ್ಪುರ್ನಲ್ಲಿ ನಡೆದ ಐಪಿಎಲ್ನ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 254 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಎಲ್ಎಸ್ಜಿ 200 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಂಜಾಬ್ ಕಿಂಗ್ಸ್ 54 ರನ್ಗಳ ಗೆಲುವು ದಾಖಲಿಸಿದೆ.

ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೊದಲ 6 ಪಂದ್ಯಗಳಲ್ಲಿ ಒಂದೇ ಒಂದು ಸೋಲು ಕಾಣದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಪಂಜಾಬ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ. ಅಂದರೆ ಐಪಿಎಲ್ನಲ್ಲಿ ಯಾವುದೇ ತಂಡ ಮೊದಲ 6 ಮ್ಯಾಚ್ಗಳಲ್ಲಿ ಸೋಲದೇ ಈವರೆಗೆ ಪಾಯಿಂಟ್ಸ್ ಗಳಿಸಿರಲಿಲ್ಲ.

ಆದರೆ ಈ ಬಾರಿ ಪಂಜಾಬ್ ಕಿಂಗ್ಸ್ ಮೊದಲ 6 ಪಂದ್ಯಗಳಲ್ಲಿ 5 ರಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಈ ಪಂದ್ಯದ ಮೂಲಕ ಕೂಡ ಒಂದು ಅಂಕ ಪಡೆದುಕೊಂಡಿದೆ. ಈ ಮೂಲಕ ಮೊದಲ 6 ಪಂದ್ಯಗಳಲ್ಲಿ 11 ಅಂಕಗಳನ್ನು ಕಲೆಹಾಕಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ರಾಜಸ್ಥಾನ್ ರಾಯಲ್ಸ್ ತಂಡದ ಹೆಸರಿನಲ್ಲಿತ್ತು. 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ಮೊದಲ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಒಟ್ಟು 10 ಅಂಕಗಳನ್ನು ಪಡೆದುಕೊಂಡಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಮೊದಲ ಐದು ಮ್ಯಾಚ್ಗಳಲ್ಲಿ ಗೆದ್ದ ತಂಡವೆಂಬ ದಾಖಲೆ ನಿರ್ಮಿಸಿದ್ದರು.

ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಪಂಜಾಬ್ ಕಿಂಗ್ಸ್ ಯಶಸ್ವಿಯಾಗಿದೆ. ಶ್ರೇಯಸ್ ಅಯ್ಯರ್ ಮುಂದಾಳತ್ವದ ಪಂಜಾಬ್ ಪಡೆಯು ಈ ಬಾರಿ ಟೂರ್ನಿಯಲ್ಲಿ ಈವರೆಗೆ 6 ಪಂದ್ಯಗಳನ್ನಾಡಿದ್ದು, ಈ ವೇಳೆ ಒಂದೇ ಒಂದು ಮ್ಯಾಚ್ ಸೋತಿಲ್ಲ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಮೊದಲ 6 ಪಂದ್ಯಗಳ ಮೂಲಕ 11 ಅಂಕಗಳನ್ನು ಪಡೆದ ಮೊದಲ ತಂಡವೆಂಬ ಭರ್ಜರಿ ದಾಖಲೆ ನಿರ್ಮಿಸಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




