AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಅಂಕಗಳು… ಐಪಿಎಲ್​ನಲ್ಲಿ ಹೊಸ ಚರಿತ್ರೆ ಬರೆದ ಪಂಜಾಬ್ ಕಿಂಗ್ಸ್

IPL 2026 Punjab Kings: ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡವು ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಸನ್​ರೈಸರ್ಸ್ ಹೈದರಾಬಾದ್, ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಈ ಮೂಲಕ ಪಂಜಾಬ್ ಪಡೆ ಮೊದಲ 6 ಪಂದ್ಯಗಳ ಮೂಲಕ ಒಟ್ಟು 11 ಅಂಕಗಳನ್ನು ಪಡೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Apr 20, 2026 | 8:17 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಯಾವುದೇ ತಂಡಕ್ಕೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ಪಂಜಾಬ್ ಕಿಂಗ್ಸ್ (Punjab Kings) ತಂಡ ನಿರ್ಮಿಸಿದೆ. ಅದು ಸಹ 11 ಅಂಕಗಳನ್ನು ಕಲೆಹಾಕುವ ಮೂಲಕ. ಈ ಪಾಯಿಂಟ್ಸ್​ಗಳೊಂದಿಗೆ ಪಂಜಾಬ್ ಪಡೆ ಹೊಸ ಇತಿಹಾಸ ನಿರ್ಮಿಸಿದೆ.

1 / 6
ಮುಲ್ಲನ್​ಪುರ್​ನಲ್ಲಿ ನಡೆದ ಐಪಿಎಲ್​ನ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್​ 20 ಓವರ್​ಗಳಲ್ಲಿ 254 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಎಲ್​ಎಸ್​ಜಿ 200 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಂಜಾಬ್ ಕಿಂಗ್ಸ್ 54 ರನ್​ಗಳ ಗೆಲುವು ದಾಖಲಿಸಿದೆ.

2 / 6
ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೊದಲ 6 ಪಂದ್ಯಗಳಲ್ಲಿ ಒಂದೇ ಒಂದು ಸೋಲು ಕಾಣದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಪಂಜಾಬ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ. ಅಂದರೆ ಐಪಿಎಲ್​ನಲ್ಲಿ ಯಾವುದೇ ತಂಡ ಮೊದಲ 6 ಮ್ಯಾಚ್​ಗಳಲ್ಲಿ ಸೋಲದೇ ಈವರೆಗೆ ಪಾಯಿಂಟ್ಸ್​ ಗಳಿಸಿರಲಿಲ್ಲ.

3 / 6
ಆದರೆ ಈ ಬಾರಿ ಪಂಜಾಬ್ ಕಿಂಗ್ಸ್ ಮೊದಲ 6 ಪಂದ್ಯಗಳಲ್ಲಿ 5 ರಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಈ ಪಂದ್ಯದ ಮೂಲಕ ಕೂಡ ಒಂದು ಅಂಕ ಪಡೆದುಕೊಂಡಿದೆ. ಈ ಮೂಲಕ ಮೊದಲ 6 ಪಂದ್ಯಗಳಲ್ಲಿ 11 ಅಂಕಗಳನ್ನು ಕಲೆಹಾಕಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

4 / 6
ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ರಾಜಸ್ಥಾನ್ ರಾಯಲ್ಸ್ ತಂಡದ ಹೆಸರಿನಲ್ಲಿತ್ತು. 2015 ರಲ್ಲಿ ರಾಜಸ್ಥಾನ್ ರಾಯಲ್ಸ್ ಮೊದಲ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಒಟ್ಟು 10 ಅಂಕಗಳನ್ನು ಪಡೆದುಕೊಂಡಿದ್ದರು. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಮೊದಲ ಐದು ಮ್ಯಾಚ್​ಗಳಲ್ಲಿ ಗೆದ್ದ ತಂಡವೆಂಬ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಪಂಜಾಬ್ ಕಿಂಗ್ಸ್ ಯಶಸ್ವಿಯಾಗಿದೆ. ಶ್ರೇಯಸ್ ಅಯ್ಯರ್ ಮುಂದಾಳತ್ವದ ಪಂಜಾಬ್ ಪಡೆಯು ಈ ಬಾರಿ ಟೂರ್ನಿಯಲ್ಲಿ ಈವರೆಗೆ 6 ಪಂದ್ಯಗಳನ್ನಾಡಿದ್ದು, ಈ ವೇಳೆ ಒಂದೇ ಒಂದು ಮ್ಯಾಚ್ ಸೋತಿಲ್ಲ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ ಮೊದಲ 6 ಪಂದ್ಯಗಳ ಮೂಲಕ 11 ಅಂಕಗಳನ್ನು ಪಡೆದ ಮೊದಲ ತಂಡವೆಂಬ ಭರ್ಜರಿ ದಾಖಲೆ ನಿರ್ಮಿಸಿದೆ.

6 / 6
Follow Us
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​

ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!

ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ

ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ

ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ

ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ

'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್

Live: ಆರ್ಟ್ ಆಫ್ ಲಿವಿಂಗ್​ನಲ್ಲಿ ಪ್ರಧಾನಿ ಮೋದಿ ಭಾಷಣ, ನೇರ ಪ್ರಸಾರ