AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಗೆಲುವು, 2 ತಂಡಗಳ ಜಯ: ಹೀಗಿದೆ ಪಂಜಾಬ್ ಕಿಂಗ್ಸ್​ ಪ್ಲೇಆಫ್ ಲೆಕ್ಕಾಚಾರ

Punjab Kings playoffs scenario: ಐಪಿಎಲ್ 2026ರ ಲೀಗ್ ಹಂತವು ಕ್ಲೈಮ್ಯಾಕ್ಸ್ ತಲುಪಿದೆ. ಇದಾಗ್ಯೂ ಪ್ಲೇಆಫ್‌ನ ನಾಲ್ಕನೇ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯ 13 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ (PBKS) ತಂಡದ ಭವಿಷ್ಯ ಈಗ ಅಂತಿಮ ವಾರಾಂತ್ಯದ ಪಂದ್ಯಗಳ ಮೇಲೆ ನಿಂತಿದೆ. ಅದರಂತೆ ಪಂಜಾಬ್ ಕಿಂಗ್ಸ್ ತಂಡದ ಪ್ಲೇಆಫ್ ಲೆಕ್ಕಾಚಾರ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: May 23, 2026 | 11:55 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್​ಗೇರಿದರೆ, ಮೂರು ತಂಡಗಳು ಪ್ಲೇಆಫ್​ ರೇಸ್​ನಲ್ಲಿದೆ. ಅಂದರೆ ನಾಲ್ಕನೇ ಸ್ಥಾನಕ್ಕಾಗಿ ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಗಳ ನಡುವೆ ನೇರ ಪೈಪೋಟಿ ಇದೆ. (PC: IPL)

1 / 5
ಈ ಪೈಪೋಟಿಯಲ್ಲಿರುವ ಪಂಜಾಬ್ ಕಿಂಗ್ಸ್ ತಂಡವು ಇಂದು (ಮೇ.23) ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಪಡೆ ಒಟ್ಟು 15 ಅಂಕಗಳನ್ನು ಪಡೆಯಲಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡ ನೇರವಾಗಿ ಪ್ಲೇಆಫ್​ಗೇರುವುದಿಲ್ಲ. ಬದಲಾಗಿ ಇತರೆ ಎರಡು ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಅದರಂತೆ ಪಂಜಾಬ್ ಪಡೆಯ ಪ್ಲೇಆಫ್ ಲೆಕ್ಕಾಚಾರ ಈ ಕೆಳಗಿನಂತಿದೆ... (PC: IPL)

2 / 5
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಜಯ ಸಾಧಿಸಿದರೆ, ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಫಲಿತಾಂಶವನ್ನು ಎದುರು ನೋಡಬೇಕು. ಅಂದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲ್ಲುವುದು ಪಂಜಾಬ್ ಕಿಂಗ್ಸ್ ಪಾಲಿಗೆ ಅನಿವಾರ್ಯ. (PC: IPL)

3 / 5
ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದು, ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದರೆ ಮತ್ತೊಂದು ಪಂದ್ಯದ ಫಲಿತಾಂಶವನ್ನು ಸಹ ಪಂಜಾಬ್ ಪಡೆ ಎದುರು ನೋಡಬೇಕು. ಅಂದರೆ ಐಪಿಎಲ್​ನ 69ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲಬೇಕು. (PC: IPL)

4 / 5
ಅಂದರೆ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದ ಬಳಿಕ, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೋಲಬೇಕು. ಇಂತಹದೊಂದು ಫಲಿತಾಂಶ ಮೂಡಿಬಂದರೆ ಮಾತ್ರ ಪಂಜಾಬ್ ಕಿಂಗ್ಸ್ ತಂಡವು 15 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೇರಲಿದೆ. ಹೀಗಾಗಿ ಪಂಜಾಬ್ ಪಾಲಿಗೆ ಇಂದಿನ ಮ್ಯಾಚ್ ಅಲ್ಲದೆ, ಇತರೆ ತಂಡಗಳ ಮುಂದಿನ ಪಂದ್ಯಗಳು ಕೂಡ ನಿರ್ಣಾಯಕ. (PC: IPL)

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು

ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ

ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ

ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ

ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್

Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ

ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ

ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?